AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕಕರ ವಜಾ ಆದೇಶ ಹಿಂಪಡೆಯಲು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ

ಆದೇಶವನ್ನು ಹಿಂಪಡೆಯಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಅಲ್ಲದೆ ಜುಲೈ ತಿಂಗಳಿನ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಸಾರಿಗೆ ನೌಕಕರ ವಜಾ ಆದೇಶ ಹಿಂಪಡೆಯಲು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ
ಕೆಎಸ್​ಆರ್​ಟಿಸಿ ಬಸ್​ಗಳು (ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 25, 2021 | 9:50 AM

Share

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು (Transport Employees) ಕಳೆದ ಏಪ್ರಿಲ್​ನಲ್ಲಿ ಮುಷ್ಕರ ನಡೆಸಿದ್ದರು. ಮುಷ್ಕರದಲ್ಲಿ ಭಾಗಿಯಾಗಿದ್ದ ಕೆಲ ಸಾರಿಗೆ ನೌಕರರನ್ನು ವಜಾಗೊಳಿಸಲಾಗಿತ್ತು. ಸುಮಾರು 2,109 ಸಾರಿಗೆ ನೌಕರರನ್ನು ವಜಾಗೊಳಿಸಲಾಗಿತ್ತು. ಈ ಹಿನ್ನೆಲೆ ವಜಾ ಆದೇಶವನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆಗೆ ಭೇಟಿ ನೀಡಿ ಮುಷ್ಕರದ ವೇಳೆ ವಜಾಗೊಂಡಿದ್ದ ನೌಕರರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಮುಷ್ಕರದಲ್ಲಿ ಭಾಗಿಯಾಗಿದ್ದ ಸುಮಾರು 2.109 ಸಾರಿಗೆ ನೌಕರರನ್ನು ಸಾರಿಗೆ ವಜಾಗೊಳಿಸಿತ್ತು. ಜೊತೆಗೆ 500ಕ್ಕೂ ಹೆಚ್ಚು ನೌಕರರನ್ನು ದೂರದ ಸ್ಥಳಗಳಿಗೆ ವರ್ಗಾವಣೆ ಮಾಡಿತ್ತು. ಆದರೆ ಈ ಆದೇಶವನ್ನು ಹಿಂಪಡೆಯಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಅಲ್ಲದೆ ಜುಲೈ ತಿಂಗಳಿನ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಬಿಎಂಟಿಸಿ ಸೇವೆಯಿಂದ ಚಂದ್ರಶೇಖರ್ ವಜಾ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ಬಿಎಂಟಿಸಿ ಸೇವೆಯಿಂದ ವಜಾಗೊಳಿಸಿ, ದಕ್ಷಿಣ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಜಗದೀಶ್‌ ಆದೇಶ ಹೊರಡಿಸಿದ್ದಾರೆ. ಬಿಎಂಟಿಸಿ ಘಟಕ 33ರಲ್ಲಿ ಚಾಲಕರಾಗಿದ್ದ ಚಂದ್ರಶೇಖರ್, ಕಳೆದ ಏಪ್ರಿಲ್‌ನಲ್ಲಿ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದರು. ಆ ಮೂಲಕ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರಾಗಿದ್ದರು. ಅಲ್ಲದೆ ಈ ಮುಷ್ಕರಕ್ಕೆ ಸಹ ನೌಕರರನ್ನು ಪ್ರಚೋದಿಸಿದ್ದರು. ಹೀಗಾಗಿ ಚಂದ್ರಶೇಖರ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಮುಷ್ಕರ ನಡೆದು 4 ತಿಂಗಳ ಬಳಿಕ ಬಿಎಂಟಿಸಿ ಕ್ರಮಕೈಗೊಂಡಿದೆ. ಒಂದು ವರ್ಷದಲ್ಲಿ 300 ಕ್ಕೂ ಹೆಚ್ಚು ದಿನ ರಜೆ ಪಡೆದ ಪ್ರಕರಣದ ವಿರುದ್ಧವೂ ಚಂದ್ರಶೇಖರ್ ವಿರುದ್ಧ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ

ಮೇಯರ್​ ಸ್ಥಾನ ಕೊಟ್ಟರೆ ನಿಮ್ಮೊಂದಿಗೆ ಬರ್ತೀವಿ; ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಜತೆ ಮೈತ್ರಿಗೆ ಮುಂದಾದ ಜೆಡಿಎಸ್​, ಬಿಜೆಪಿ ಕತೆಯೇನು?

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ; ಅಧಿಕಾರದ ಗದ್ದುಗೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಅನ್ಯ ಪಕ್ಷಗಳ ಸವಾಲು

(Chandrashekar appeals to Bommai to revoke transport workers dismissal order)

Published On - 9:48 am, Wed, 25 August 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?