Shiv Shakti Point: ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳಕ್ಕೆ ಶಿವಶಕ್ತಿ ಪಾಯಿಂಟ್ ಎಂದು ಪ್ರಧಾನಿ ಮೋದಿ ನಾಮಕರಣ

PM Modi Speech In ISRO: ಚಂದ್ರಯಾನ-3 ಯಶಸ್ಸಿ ಹಿನ್ನೆಲೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಮೋದಿ ಅವರು ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿ, ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ ಪಾಯಿಂಟ್’ ಅಂತಾ ಕರೆಯೋಣ ಎಂದರು.

Shiv Shakti Point: ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳಕ್ಕೆ ಶಿವಶಕ್ತಿ ಪಾಯಿಂಟ್ ಎಂದು ಪ್ರಧಾನಿ ಮೋದಿ ನಾಮಕರಣ
ನರೇಂದ್ರ ಮೋದಿ
Follow us
| Updated By: ಆಯೇಷಾ ಬಾನು

Updated on:Aug 26, 2023 | 8:57 AM

ಬೆಂಗಳೂರು, ಆ.26: ಚಂದ್ರಯಾನ-3(Chandrayaan-3) ಯಶಸ್ಸಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಶನಿವಾರ ಪೀಣ್ಯದಲ್ಲಿನ ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ (ISTRAC) ಗೆ ಭೇಟಿ ನೀಡಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ ಪಾಯಿಂಟ್’(Shiv Shakti Point) ಅಂತಾ ಕರೆಯೋಣ ಎಂದರು. ಹಾಗೂ ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಘೋಷಿಸಿದರು.

ಚಂದ್ರಯಾನ-3 ಯಶಸ್ಸಿಗೆ ಶ್ರಮಿಸಿದ ವಿಜ್ಞಾನಿಗಳು, ಇಂಜಿನಿಯರ್​ಗಳು, ಇಸ್ರೋ ಸಿಬ್ಬಂದಿ ಪ್ರತಿಯೊಬ್ಬರಿಗೂ ಧನ್ಯವಾದ. ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳಕ್ಕೆ ಶಿವಶಕ್ತಿ ಅಂತಾ ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದರು.

ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಹೆಸರು. ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ. ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ ಎಂದರು.

ಆಗಸ್ಟ್​ 23 ರಾಷ್ಟ್ರೀಯ ಬಾಹ್ಯಾಕಾಶ​ ದಿನ

ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಇಳಿದ ಆಗಸ್ಟ್ 23 ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದರು. ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರ ಸಂಬಂಧ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುತ್ತೆ. ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗ್ತಿದೆ. ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶ ಅಭಿವೃದ್ಧಿಗೆ ಸಹಕಾರಿಯಾಗುತ್ತೆ. ಸೆಪ್ಟೆಂಬರ್​ 1ರಂದು ಚಂದ್ರಯಾನ-3 ಬಗ್ಗೆ ಕ್ವಿಜ್​ ಸ್ಪರ್ಧೆ ಆಯೋಜನೆ ಮಾಡಲಾಗುತ್ತೆ ಎಂದರು.

ಇದನ್ನೂ ಓದಿ: ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್; ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ

ಮಹಿಳಾ ವಿಜ್ಞಾನಿಗಳನ್ನು ಕೊಂಡಾಡಿದ ಪ್ರಧಾನಿ ಮೋದಿ

ಇದೇ ವೇಳೆ ಮೋದಿಯವರು ಮಹಿಳಾ ವಿಜ್ಞಾನಿಗಳನ್ನು ಕೊಂಡಾಡಿದರು. ಚಂದ್ರಯಾನ-3 ಯಶಸ್ಸಿಗೆ ಮಹಿಳಾ ವಿಜ್ಞಾನಿಗಳ ಕೊಡುಗೆಯೂ ಇದೆ. ಮಹಿಳಾ ವಿಜ್ಞಾನಿಗಳ ಸಾಧನೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗುತ್ತೆ ಎಂದರು. ನಿಮ್ಮನ್ನು ಭೇಟಿಯಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಪ್ರತಿಯೊಬ್ಬ ವಿಜ್ಞಾನಿಗೂ ನನ್ನಿಂದ ಸಲ್ಯೂಟ್​​. ನಿಮ್ಮ ಧೈರ್ಯ, ಶಕ್ತಿ, ಶ್ರಮ, ಸಾಮರ್ಥ್ಯಕ್ಕೆ ನನ್ನ ನಮನಗಳು. ಭಾರತದ ವೈಜ್ಞಾನಿಕ ಸಾಧನೆಯನ್ನು ವಿಶ್ವವೇ ಕೊಂಡಾಡುತ್ತಿದೆ. ಸದ್ಯ ಭಾರತ ಚಂದ್ರನ ಮೇಲಿದೆ. ದೇಶದ ಘನತೆಯನ್ನು ಉತ್ತುಂಗಕ್ಕೇರಿಸಿದ್ದಕ್ಕೆ ಧನ್ಯವಾದಗಳು ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:38 am, Sat, 26 August 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ