AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​​ನ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಯನ್ನೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ನ್ಯಾಯಾಧೀಶರ ಆದೇಶದ ಅನ್ವಯ ಶಾಸಕರೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ
ಶಾಸಕ ಚಂದ್ರು ಲಮಾಣಿImage Credit source: Google
ಶಿವಪ್ರಸಾದ್​ ಬಿ.
| Edited By: |

Updated on:Feb 22, 2026 | 2:25 PM

Share

ಬೆಂಗಳೂರು, ಫೆಬ್ರವರಿ 22: ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾರ್ಚ್‌ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶಿಸಿದೆ. ಯಲಹಂಕ ಜುಡಿಷಿಯಲ್ ಲೇಔಟ್​ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಶಾಸಕರನ್ನು ಲೋಕಾಯುಕ್ತ ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶರ ಆದೇಶದ ಅನ್ವಯ ಬಿಜೆಪಿ ಶಾಸಕ ಚಂದ್ರು ಲಮಾಣಿಯೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಗೂ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್​​ ಆದೇಶಿಸಿದ್ದಾರೆ.  ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ, ಸರ್ಕಾರಿ ಪಿಎ ಮಂಜುನಾಥ್ ಮತ್ತು ಖಾಸಗಿ ಪಿಎ ಗುರುವಿಗೆ ವೈದ್ಯಕೀಯ ತಪಾಸಣೆ ಬಳಿಕ ಲೋಕಾಯುಕ್ತ ಪೊಲೀಸರು ಅವರನ್ನು ಬೆಂಗಳೂರಿಗೆ ಕರೆ ತಂದಿದ್ದರು.

ಪ್ರಕರಣ ಸಂಬಂಧ ಶಾಸಕ ಚಂದ್ರು ಲಮಾಣಿ ಹಾಗೂ ಗುತ್ತಿಗೆದಾರನ ನಡುವೆ ನಡೆದ ಸಂಭಾಷಣೆ ಆಡಿಯೋವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆಡಿಯೋ ಎಫ್ಎಸ್ಎಲ್ ವರದಿಗಾಗಿ ಅವರು ಕಾಯುತ್ತಿದ್ದಾರೆ ಎನ್ನಲಾಗಿದೆ. ಶಾಸಕರು ಗುತ್ತಿಗೆದಾರನ ಜೊತೆ ಕಮಿಷನ್ ಬಗ್ಗೆ ಮಾತನಾಡಿದ ಆಡಿಯೋ ಸೇರಿ ಹಲವು ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿಯೂ ಇದೆ. ಜುಲೈನಲ್ಲಿ ಮಂಜೂರಾಗಿದ್ದ ಟೆಂಡರ್​​ನ ಕಾಮಗಾರಿಗೆ ಒಂದುವರೆ ತಿಂಗಳ ಹಿಂದೆ ಶಾಸಕರು ಚಾಲನೆ ನೀಡಿದ್ದರು. ಪೂಜೆ ಮಾಡಿದ ದಿನದ ಸಂಜೆಯೇ ಹಣ ಕೊಡುವುದಾಗಿ ಮಾತುಕತೆ ನಡೆದಿತ್ತು. ಆದರೆ ಪೂಜೆ ಬಳಿಕ ಗುತ್ತಿಗೆದಾರ ವಿಜಯರಾಜ್ ಫೋನ್ ಕರೆ ಸ್ವೀಕರಿಸಿಲ್ಲ. ಪಿಎಗಳು ಪೋನ್ ಮಾಡಿದರೂ ಸ್ಪಂದನೆ ಇರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ; ಬೆಂಬಲಿಗರಿಂದ ಹೈಡ್ರಾಮಾ

ಇದಾದ ಬಳಿಕ ಒಂದೂವರೆ ತಿಂಗಳ ನಂತರ ಗುತ್ತಿಗೆದಾರ ಶಾಸಕರ ಬಳಿ ಹೋಗಿದ್ದರು. ಆಗ ಶಾಸಕರು ಜೋರಾಗಿ ಮಾತಾಡಿದ್ದು,  ನಿನ್ನ ನಡಾ ಮುರಿಸ್ತೀನಿ ಎಂದು ಅವಾಜ್ ಹಾಕಿರೋ ಆಡಿಯೋ ಕೂಡ ಲೋಕಾಯುಕ್ತಕ್ಕೆ ಸಿಕ್ಕಿದೆ ಎನ್ನಲಾಗಿದೆ. ಇನ್ನು ಲೋಕಾಯುಕ್ತ ವಿಚಾರಣೆ ವೇಳೆ ಶಾಸಕರು ತಾನು ಕಮಿಷನ್​​ ಪಡೆದಿಲ್ಲ, ಹಣ ಮುಟ್ಟಿಲ್ಲ ಎಂದಿದ್ದರು. ಆದರೆ ಹಣ ಪಡೆದಿದ್ದ ಪಿಎ ಗುರು ಅದನ್ನು ಶಾಸಕರಿಗೆ ನೀಡಿದ್ದ. ಆ ಹಣದಲ್ಲಿ ಸ್ವಲ್ಪ ಮೊತ್ತವನ್ನು ಖರ್ಚಿಗಾಗಿ ಸರ್ಕಾರಿ ಪಿಎ ಮಂಜುನಾಥ್​​ಗೆ ನೀಡಿದ್ದರು. ಇನ್ನೇನು ಆಸ್ಪತ್ರೆಯಿಂದ ಕಾರ್ಯಕ್ರಮವೊಂದಕ್ಕೆ ಹೊರಡಬೇಕು ಎನ್ನುವಷ್ಟರಲ್ಲಿ ಲೋಕಾ ಅಧಿಕಾರಿಗಳು ಖೆಡ್ಡಾ ತೋಡಿದ್ದು, ಶಾಸಕರು ಹಾಗೂ ಪಿಎಗಳ ಕೈ ತೊಳೆದಾಗ ಪಿಂಕ್ ಕಲರ್ ಬಂದ ಕಾರಣ ಶಾಸಕರು ಲಾಕ್​​ ಆಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:11 pm, Sun, 22 February 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?