ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRC) ಸೆಕ್ಷನ್ ಇಂಜಿನಿಯರ್ ಮತ್ತು ಇತರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಬಿಎಂಆರ್ಸಿಯ ಅಧಿಕೃತ ವೆಬ್ಸೈಟ್ ಆದ english.bmrc.co.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು 2022ರ ಜನವರಿ 17 ಕೊನೆಯ ದಿನವಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 19 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಗುತ್ತಿಗೆ (ಕಾಂಟ್ರಾಕ್ಟ್) ಮಾದರಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಮೂರು ವರ್ಷದ ಅವಧಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಸ್ತುತ ಅದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಲ್ಲ. ಹೆಚ್ಚಿನ ಮಾಹಿತಿ ಮೆಟ್ರೊ ಜಾಲತಾಣದಲ್ಲಿ (english.bmrc.co.in) ಲಭ್ಯವಿದೆ.
ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ 577 ಮರ ಕಡಿಯಲು ಹೈಕೋರ್ಟ್ ಅನುಮತಿ
ಬೆಂಗಳೂರು ನಗರದ ನಾಗವಾರ-ಗೊಟ್ಟಿಗೆರೆ ಮೆಟ್ರೋ (Namma Metro) ಮಾರ್ಗ ನಿರ್ಮಾಣಕ್ಕೆ 577 ಮರ ಕಡಿಯಲು ಹೈಕೋರ್ಟ್ ಅನುಮತಿ ನೀಡಿದೆ. ಈ ಪೈಕಿ 212 ಮರಗಳನ್ನು ಸ್ಥಳಾಂತರಿಸಲು ತಜ್ಞರ ಸಮಿತಿ ವರದಿಯಂತೆ ಹೈಕೋರ್ಟ್ ಸೂಚನೆ ನೀಡಿದೆ.
ಇದನ್ನೂ ಓದಿ: Bengaluru Metro: ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ! ಪ್ರಯಾಣಿಕರಿಗೆ ಕೃತಜ್ಞತೆ
ಇದನ್ನೂ ಓದಿ: ಬೆಂಗಳೂರು ಮೆಟ್ರೊ 2ಎ, 2ಬಿ ಹಂತಗಳಿಗೆ ಕೇಂದ್ರದ ಅನುಮೋದನೆ: ಸಂಸದ ತೇಜಸ್ವಿ ಸೂರ್ಯ ಸಂತಸ