AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶಾಲೆಯ ಸಮಯ ಬದಲಾವಣೆ; ಖಾಸಗಿ, ಸರ್ಕಾರಿ ಶಾಲೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಲಿದೆ ಸರ್ಕಾರ

Change in Bengaluru school timings to fix traffic; ನಗರದಲ್ಲಿ ಇರುವ ಶಾಲೆಗಳು ಕಾರ್ಯನಿರ್ವಹಿಸುವ ಈಗಿನ ಸಮಯವು ಸಾಮಾನ್ಯವಾಗಿ ಬೆಳಿಗ್ಗೆ 8:45 / 9 ರಿಂದ ಸಂಜೆ 3:30 / 4 ನಡುವೆ ಇದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ನಗರದಲ್ಲಿ ಒಂದು ಗಂಟೆ ಮುಂಚಿತವಾಗಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶಾಲೆಯ ಸಮಯ ಬದಲಾವಣೆ; ಖಾಸಗಿ, ಸರ್ಕಾರಿ ಶಾಲೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಲಿದೆ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on:Sep 21, 2023 | 2:42 PM

Share

ಬೆಂಗಳೂರು, ಸೆಪ್ಟೆಂಬರ್ 21: ಹೆಚ್ಚುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ (traffic problems) ನಿವಾರಣೆಗಾಗಿ ಬೆಂಗಳೂರನಲ್ಲಿ ಇರುವ ಶಾಲೆಗಳ ಸಮಯವನ್ನು ಪರಿಷ್ಕರಣೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಶಿಕ್ಷಣ ಇಲಾಖೆಗೆ (Education dept) ಸಲಹೆ ನೀಡಿತ್ತು. ಈ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಖಾಸಗಿ ಶಾಲಾ ನಿರ್ವಹಣಾ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಶಾಲೆಗಳು ಮತ್ತು ಕೈಗಾರಿಕಾ ಘಟಕಗಳು, ಕಾರ್ಖಾನೆಗಳು, ಕಮರ್ಷಿಯಲ್ ಹೌಸಸ್ ಮತ್ತು ಕಂಪನಿಗಳ ಸಮಯವನ್ನು ಬದಲಾಯಿಸಲು ಸರ್ಕಾರಕ್ಕೆ ಸಲಹೆ ನೀಡಿತ್ತು.

ನಗರದಲ್ಲಿ ಇರುವ ಶಾಲೆಗಳು ಕಾರ್ಯನಿರ್ವಹಿಸುವ ಈಗಿನ ಸಮಯವು ಸಾಮಾನ್ಯವಾಗಿ ಬೆಳಿಗ್ಗೆ 8:45 / 9 ರಿಂದ ಸಂಜೆ 3:30 / 4 ನಡುವೆ ಇದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ನಗರದಲ್ಲಿ ಒಂದು ಗಂಟೆ ಮುಂಚಿತವಾಗಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಶಾಲೆಗಳನ್ನು ಒಂದು ಗಂಟೆ ಮುಂಚಿತವಾಗಿ ಅಥವಾ ತಡವಾಗಿ ಪ್ರಾರಂಭಿಸಲು ಸಲಹೆಗಳನ್ನು ಮೊದಲೇ ನೀಡಲಾಗಿತ್ತು. ಆದರೆ ಈ ಸಲಹೆಗಳನ್ನು ಪೋಷಕರು ಮತ್ತು ಖಾಸಗಿ ಶಾಲಾ ನಿರ್ವಾಹಕರು ವಿವಿಧ ಕಾರಣಗಳಿಂದ ವಿರೋಧಿಸಿದ್ದರು.

ಶಾಲೆಗಳನ್ನು ಬೇಗ ಪ್ರಾರಂಭಿಸುವುದರಿಂದ ಆಗಬಹುದಾದ ಅನಾನುಕೂಲಗಳೇನು?

ಮಕ್ಕಳು ಬೇಗನೆ ಏಳಬೇಕಾಗಲಿದೆ. ಇದು ಪೋಷಕರನ್ನು ತಮ್ಮ ಮಕ್ಕಳನ್ನು ಶಾಲೆಗೆ ಸಿದ್ಧಪಡಿಸಲು ತಮ್ಮ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಒತ್ತಾಯಿಸುತ್ತದೆ. ಶಾಲೆಗಳನ್ನು ಬೇಗ ಪ್ರಾರಂಭಿಸಿದರೆ ಮಕ್ಕಳು ಕ್ರೀಡೆ ಮತ್ತು ಇತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳಬಹುದು. ಮಲಗುವ ಕ್ರಮದಲ್ಲಿನ ಬದಲಾವಣೆಯಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳಾಗಬಹುದು ಎಂದು ಅಂದಾಜಿಸಲಾಗಿದೆ.

ರಾಜ್ಯದಲ್ಲಿ 72,824 ಸರ್ಕಾರಿ ಶಾಲೆಗಳು ಮತ್ತು 17,381 ಖಾಸಗಿ ಶಾಲೆಗಳಿವೆ. ವರದಿಗಳ ಪ್ರಕಾರ ರಾಜ್ಯದಲ್ಲಿ 1.04 ಕೋಟಿಗೂ ಹೆಚ್ಚು ಶಾಲೆಗೆ ಹೋಗುವ ವಿದ್ಯಾರ್ಥಿಗಳು ಇದ್ದಾರೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಶಾಲಾ ಸಮಯ ಬದಲಾವಣೆ: ಖಾಸಗಿ ಶಾಲೆಗಳ ಒಕ್ಕೂಟ, ಪೋಷಕರ ವಿರೋಧ

ಹೈಕೋರ್ಟ್​ ಸೂಚನೆಯ ಕಾರಣ ಶಾಲೆ, ಕಾರ್ಖಾನೆಗಳ ಸಮಯ ಬದಲಾವಣೆ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಆದರೆ, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆಲವು ದಿನಗಳ ಹಿಂದಷ್ಟೇ ವರದಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Thu, 21 September 23

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್