ಹೈಕೋರ್ಟ್‌ನಲ್ಲೇ ಗದ್ದಲ: ಮುಖ್ಯ ನ್ಯಾಯಮೂರ್ತಿ ಗರಂ; ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್

ರಾಜ್ಯದಲ್ಲಿ ಇಬ್ಬರು ವಕೀಲರ ಕೊಲೆ ಮತ್ತು ಕೊಲೆ ಯತ್ನ ಪ್ರಕರಣಗಳ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆ ಬಲಪಡಿಸಲು ಕರ್ನಾಟಕ ವಕೀಲರು ಪ್ರತಿಭಟನೆ ಮಾಡಿದ್ದಾರೆ. ನ್ಯಾಯಾಲಯದ ಕಲಾಪದಿಂದ ಹೊರಗುಳಿದು, ಗದ್ದಲ ಸೃಷ್ಟಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಾಗಿದೆ. ಸಿಸಿಟಿವಿ ಪರಿಶೀಲಿಸಿ ನೋಟಿಸ್ ನೀಡಲು ಸಿಜೆ ಪೀಠ ಆದೇಶಿಸಿದೆ.

ಹೈಕೋರ್ಟ್‌ನಲ್ಲೇ ಗದ್ದಲ: ಮುಖ್ಯ ನ್ಯಾಯಮೂರ್ತಿ ಗರಂ; ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್
ಕರ್ನಾಟಕ ಹೈ ಕೋರ್ಟ್​
Image Credit source: gettyimages.com
Edited By:

Updated on: Nov 03, 2026 | 8:57 PM

ಬೆಂಗಳೂರು, ನವೆಂಬರ್​​ 03: ವಕೀಲರ ಮೇಲಿನ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಬೆಂಗಳೂರಿನ ವಕೀಲರ ಸಂಘ ಕರೆ ನೀಡಿದ್ದ ಪ್ರತಿಭಟನೆಯ ನಡುವೆಯೇ ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ಕೂಡ ನಡೆದಿದೆ. ಹೀಗಾಗಿ ಹೈಕೋರ್ಟ್ ಅಪರಿಚಿತ ವ್ಯಕ್ತಿಗಳ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿದೆ.

ವಕೀಲರ ಮೇಲಿನ ಹಲ್ಲೆ ಖಂಡಿಸಿ ರಾಜ್ಯದಲ್ಲಿ ಪ್ರತಿಘಟನೆ 

ರಾಜ್ಯದಲ್ಲಿ ವಕೀಲರ ಮೇಲಿನ ಹಲ್ಲೆಗಳನ್ನು ತಡೆಯಲು 2023ರ ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ವಕೀಲರ ಸಂಘಗಳು ಇಂದು ಪ್ರತಿಭಟನೆಗೆ ಕರೆ ನೀಡಿದ್ದವು.

ಸಿಸಿಟಿವಿ ಪರಿಶೀಲಿಸಿ ವ್ಯಕ್ತಿಗಳ ಗುರುತು ಪತ್ತೆಗೆ ಸೂಚನೆ

ಸಿಜೆ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆಎಸ್​​ ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠವು ನ್ಯಾಯಾಲದಲ್ಲಿ ಗದ್ದಲ ಸೃಷ್ಟಿಸಿದವರ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ರೀತಿಯ ವರ್ತನೆ ವಕೀಲ ವೃತ್ತಿಗೆ ತಕ್ಕದಲ್ಲ ಎಂದು ಅಭಿಪ್ರಾಯಪಟ್ಟಿದೆ. ಇನ್ನು ನ್ಯಾಯಾಲಯದಲ್ಲಿ ಕಲಾಪಕ್ಕೆ ಅಡ್ಡಿಪಡಿಸಿಲು ಯತ್ನಿಸಿದ ವ್ಯಕ್ತಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸುವಂತೆ ರಿಜಿಸ್ಟ್ರಿಗೆ ಸೂಚಿಸಿದೆ. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ಸಂಘಕ್ಕೆ ನೋಟಿಸ್​ ಜಾರಿಗೊಳಿಸಿದೆ.

ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸುವುದು ಸ್ವೀಕಾರಾರ್ಹವಲ್ಲ

ಘಟನೆ ಕುರಿತು ವಿವರಣೆ ನೀಡಲು ವಕೀಲರ ಸಂಘದ ಖಜಾಂಚಿ ಶ್ವೇತಾ ರವಿಶಂಕರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ವಕೀಲರ ಪರವಾಗಿ ಕ್ಷಮೆಯಾಚಿಸಲು ಮುಂದಾದಾಗ, ನ್ಯಾಯಪೀಠವು ಔಪಚಾರಿಕ ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಇದೇ ವೇಳೆ ‘ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸುವುದು ಸ್ವೀಕಾರಾರ್ಹವಲ್ಲ’ ಎಂದು ಪೀಠ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ವಕೀಲರು,​ ಪೊಲೀಸರ‌ ನಡುವೆ ಗಲಾಟೆ ಪ್ರಕರಣ; ಡಿ.6 ರಿಂದ ಸಿಐಡಿ ತನಿಖೆ ಶುರು

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್​ ಸಲ್ಲಿಸುವಂತೆ ಬೆಂಗಳೂರಿನ ವಕೀಲರ ಸಂಘಕ್ಕೆ ಸೂಚಿಸಿರುವ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್​​ 19ಕ್ಕೆ ಮುಂದೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 pm, Tue, 3 November 26

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us