ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆ ಅರ್ಜಿ ಸಲ್ಲಿಕೆ ದಿನಾಂಕ ಜನವರಿ 31ರ ತನಕ ವಿಸ್ತರಣೆ

ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಅವರ ಸೂಚನೆಯ ಮೇರೆಗೆ 31 ಜನವರಿ 2023 ರವರೆಗೆ ವಿಸ್ತರಿಸಲಾಗಿದೆ.

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆ ಅರ್ಜಿ ಸಲ್ಲಿಕೆ ದಿನಾಂಕ ಜನವರಿ 31ರ ತನಕ ವಿಸ್ತರಣೆ
ಸಚಿವೆ ಶಶಿಕಲಾ ಜೊಲ್ಲೆImage Credit source: kannadaprabha.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 29, 2022 | 9:14 PM

ಬೆಂಗಳೂರು: ಚಾರ್‌ಧಾಮ್‌ (Char Dham) ಹಾಗೂ ಕೈಲಾಶ ಮಾನಸ ಸರೋವರ (Kailash Mansarovar) ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಅವರ ಸೂಚನೆಯ ಮೇರೆಗೆ 31 ಜನವರಿ 2023 ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯದಿಂದ ಪ್ರಪ್ರಥಮ ಬಾರಿಗೆ ಚಾರ್‌ಧಾಮ್‌ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರದಂತೆ ಹಾಗೂ ಕೈಲಾಶ ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರದಂತೆ ಸರಕಾರದ ಸಹಾಯಧನವನ್ನ ನೀಡಲಾಗುತ್ತದೆ. ಇದಕ್ಕೆ ಡಿಸೆಂಬರ್‌ 1 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಈ ಬಾರಿ ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ಸಂಧರ್ಭದಲ್ಲಿ ಜನಸಂಧಣಿ ಹೆಚ್ಚಾಗಿದ್ದರಿಂದ ಹಾಗೂ ತಾಂತ್ರಿಕ ಕಾರಣಗಳಿಂದ ಯಾತ್ರಾರ್ಥಿಗಳು ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Kalasa Banduri: ಗದಗ ಜಿಲ್ಲೆಯ ಬಂಡಾಯದ ನಾಡಿನಲ್ಲಿ ನಡೆದ ಐತಿಹಾಸಿಕ ಹೋರಾಟಕ್ಕೆ ಕೊನೆಗೂ ಜಯ

ಹೆಚ್ಚಿನ ಜನರು ಅರ್ಜಿ ಸಲ್ಲಿಸಲಿ ಎನ್ನುವ ಉದ್ದೇಶಕ್ಕೆ ದಿನಾಂಕ ವಿಸ್ತರಣೆ

ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳನ್ನ ಪಡೆದುಕೊಳ್ಳುವುದಕ್ಕೆ ಅವಕಾಶ ನೀಡುವಂತೆ ಬೆಳಗಾವಿಯ ಅಧಿವೇಶನದಲ್ಲಿ ಹಲವಾರು ಶಾಸಕರು ಮಾನ್ಯ ಸಚಿವರಿಗೆ ಮನವಿ ಮಾಡಿದ್ದರು. ಹೆಚ್ಚಿನ ಜನರು ಅರ್ಜಿ ಸಲ್ಲಿಸಲಿ ಎನ್ನುವ ಉದ್ದೇಶದಿಂದ, ಹಾಗೂ ಅಗತ್ಯ ದಾಖಲೆಗಳನ್ನ ಕ್ರೋಢೀಕರಿಸಲು ಅವಕಾಶ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಅವರ ಸೂಚನೆಯಂತೆ. ಈಗ ಅರ್ಜಿ ಸಲ್ಲಿಕೆಗೆ ಇದ್ದಂತಹ ಸಮಸ್ಯೆಗಳನ್ನು ನಿವಾರಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕವನ್ನ ಒಂದು ತಿಂಗಳುಗಳ ಕಾಲ (ಜನವರಿ 31, 2023) ವಿಸ್ತರಿಸಲಾಗಿದೆ.

ಇದನ್ನೂ ಓದಿ: ಪ್ರತಿ ವರ್ಷ 30 ಸಾವಿರ ಯಾತ್ರಾರ್ಥಿಗಳಿಗೆ ಕಾಶಿ ಭೇಟಿಗೆ ವ್ಯವಸ್ಥೆ: ಶಶಿಕಲಾ ಜೊಲ್ಲೆ

ಯಾತ್ರಾರ್ಥಿಗಳಿಗೆ ಸಹಾಯಧನ

ಈ ಕುರಿತಾಗಿ ಸಚಿವೆ ಶಶಿಕಲಾ ಜೊಲ್ಲೆ ಅವರು ಮಾತನಾಡಿ, ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಗೆ ತೆರಳಿರುವ ಯಾತ್ರಾರ್ಥಿಗಳಿಗೆ ಸಹಾಯಧನ ನೀಡುವುದು ನಮ್ಮ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಹೆಚ್ಚಿನ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲು ಅವಕಾಶ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 31,2023 ರ ತನಕ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ