AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandalwood: ಸಿನಿಮಾದಲ್ಲಿ ಚಾನ್ಸ್ ನೀಡೋದಾಗಿ ಯುವತಿಗೆ ವಂಚನೆ: ‘ರಂಗಿನ ರಾಟೆ’ ನಿರ್ದೇಶಕ ವಿರುದ್ಧ ಆರೋಪ

Cheating: ಬೆಂಗಳೂರು -‘ರಂಗಿನ ರಾಟೆ’ ಸಿನಿಮಾದ ನಿರ್ದೇಶಕ ಸಂತೋಷ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಗೂಗಲ್‌ಪೇ, ಫೋನ್​ಪೇ ಮೂಲಕ ಹಣ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ ಎಂದು ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.

Sandalwood: ಸಿನಿಮಾದಲ್ಲಿ ಚಾನ್ಸ್ ನೀಡೋದಾಗಿ ಯುವತಿಗೆ ವಂಚನೆ: ‘ರಂಗಿನ ರಾಟೆ’ ನಿರ್ದೇಶಕ ವಿರುದ್ಧ ಆರೋಪ
ಸಿನಿಮಾದಲ್ಲಿ ಚಾನ್ಸ್ ನೀಡೋದಾಗಿ ಹಣ ಪಡೆದು ‘ರಂಗಿನ ರಾಟೆ’ ನಿರ್ದೇಶಕರಿಂದ ಯುವತಿಗೆ ವಂಚನೆ
Shivaprasad B
| Edited By: |

Updated on:Aug 22, 2023 | 10:05 AM

Share

ಬೆಂಗಳೂರು, ಆಗಸ್ಟ್​ 22: ‘ರಂಗಿನ ರಾಟೆ’ ಸಿನಿಮಾದ (Rangina Rate) ನಿರ್ದೇಶಕ ಸಂತೋಷ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಗೂಗಲ್‌ಪೇ, ಫೋನ್​ಪೇ ಮೂಲಕ ಹಣ ವರ್ಗಾಯಿಸಿಕೊಂಡು ವಂಚನೆ (Cheating) ಎಸಗಿದ್ದಾರೆ ಎಂದು ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ಸಿನಿಮಾದಲ್ಲಿ (Sandalwood) ಚಾನ್ಸ್ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ ನಿರ್ದೇಶಕ ಸಂತೋಷ್ ಅದನ್ನೇ ನೆಪ ಮಾಡಿಕೊಂಡು ಹಂತ ಹಂತವಾಗಿ ಹಣ ಹಾಕಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರಿಂದ ತನಿಖೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಕ್ಯೂಆರ್ ಕೋಡ್ ವಂಚನೆ ಪ್ರಕರಣಗಳು:

ತಂತ್ರಜ್ಞಾನ ಮುಂದುವರಿದಂತೆ ಕೊಡು ಕೊಳ್ಳುವಿಕೆ ವ್ಯವಹಾರವೂ ಆನ್​ಲೈನ್​ ಆಗಿಬಿಟ್ಟಿವೆ. ಇದನ್ನೇ ಬಂಡವಾಳವನ್ನಾಗಿಸಿಕೊಳ್ಳುತ್ತಿರುವ ಸೈಬರ್ ಅಪರಾಧಿಗಳು, ಜನರನ್ನು ವಂಚಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ದಾಖಲಾದ ಸೈಬರ್ ಪ್ರಕರಣಗಳ ಪೈಕಿ ಶೇ.40 ರಷ್ಟು ಪ್ರಕರಣಗಳು ಕ್ಯೂಆರ್​​ ಕೋಡ್​ಗೆ ಸಂಬಂಧಿಸಿದ್ದಾಗಿವೆ. ಕಳೆದ ವಾರ ವಾಷಿಂಗ್ ಮೆಷಿನ್ ಮಾರಾಟ ಮಾಡಲು ಮುಂದಾಗಿದ್ದ ಪ್ರೊಫೆಸರ್, ಸೈಬರ್ ಚೋರರು ಕಳುಹಿಸಿದ​​ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಸಾವಿರಾರು ರೂ. ಕಳೆದುಕೊಂಡರೆ, ಇತ್ತ ವೀಣೆ ಮಾರಾಟ ಮಾಡಲು ಮುಂದಾಗಿ ಲಿಂಕ್ ಒತ್ತಿದ ಗೃಹಿಣಿ ಕೂಡ ಹಣ ಕಳೆದುಕೊಂಡಿದ್ದಾರೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಪ್ರೊಫೆಸರ್ ಒಬ್ಬರು ವಾಷಿಂಗ್ ಮಷಿನ್ ಅನ್ನು ಆನ್​ಲೈನ್ ಮಾರುಕಟ್ಟೆ​ ಮೂಲಕ ಮಾರಾಟ ಮಾಡಲು ಮುಂದಾಗಿದ್ದಾರೆ. ಅದರಂತೆ ಒಂದು ಫೋಟೋ ಕೂಡ ಹಾಕಿದ್ದರು. ಆಗಸ್ಟ್ 11 ರಂದು ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಯಾವುದೇ ಚೌಕಾಸಿ ಮಾಡದೆ ಹೇಳಿದ 60000 ಸಾವಿರ ರೂಪಾಯಿ ನೀಡುವುದಾಗಿ ತಿಳಿಸಿದ್ದಾನೆ.

ಇದನ್ನೂ ಓದಿ: Digital Personal Data Protection Act: ಸೈಬರ್ ಅಪರಾಧಗಳ ತಡೆಗೆ ಕೇಂದ್ರ ಸರ್ಕಾರದಿಂದ ಹೊಸ ಕಾನೂನು ಜಾರಿ

ಅಬ್ಬಾ.. ನಾನು ಅಂದುಕೊಂಡಿದಷ್ಟು ಹಣ ನೀಡುವ ಗ್ರಾಹಕ ಸಿಕ್ಕಿದ ಎಂದು ಸಂತೋಷಗೊಂಡ ಪ್ರೊಫೆಸರ್​ಗೆ ಆ ವ್ಯಕ್ತಿ ತಾನು ಕ್ಯೂಆರ್ ಕೋಡ್ ಕಳುಹಿಸುತ್ತೇನೆ. ದಯವಿಟ್ಟು ಅದನ್ನು ಸ್ಕ್ಯಾನ್ ಮಾಡಿ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡುತ್ತೇನೆ ಎಂದು ಹೇಳಿದ್ದಾನೆ. ಇದನ್ನು ನಂಬಿದ ಪ್ರೊಫೆಸರ್, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆ ಪ್ರೊಫೆಸರ್ ಖಾತೆಯಲ್ಲಿದ್ದ 63,000 ರೂ.ಗಳನ್ನು ಆ ವ್ಯಕ್ತಿ ತನ್ನ ಅಕೌಂಟ್​​ಗೆ ವರ್ಗಾಯಿಸಿಕೊಂಡಿದ್ದಾನೆ.

ಇದೇ ರೀತಿ, ಆನ್​ಲೈನ್​ ಮಾರುಕಟ್ಟೆಯಲ್ಲಿ ವೀಣೆ ಮಾರಾಟ ಮಾಡಲು ಮುಂದಾಗಿದ್ದ 30 ವರ್ಷದ ಗೃಹಿಣಿಯೊಬ್ಬರು ಸೈಬರ್ ಅಪರಾಧಿಗಳ ವಂಚನೆಗೆ ಸಿಲುಕಿದ್ದರು. ವೀಣೆ ಚಿತ್ರವನ್ನು ಆನ್​ಲೈನ್​ನಲ್ಲಿ ಅಪ್​ಲೋಡ್ ಮಾಡಿದ್ದರು. ಅಂದೇ ಒಬ್ಬ ಮಹಿಳೆ ಕರೆ ಮಾಡಿ ಸಂಗೀತ ವಾದ್ಯವನ್ನು ಖರೀದಿಸುತ್ತೇನೆ ಎಂದು ಹೇಳಿದ್ದಳು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:02 am, Tue, 22 August 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ