ಚೆಕ್ ಬೌನ್ಸ್ ಕೇಸ್: ಶಾಸಕ ಕೆ.ವೈ.ನಂಜೇಗೌಡಗೆ 49.65 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆ.ವೈ.ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆ.ವೈ.ನಂಜೇಗೌಡ (MLA KY Nanjegowda) ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಕೋಲಾರ (Kolar) ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ, ರಾಮಚಂದ್ರ.ಜಿ ಎಂಬುವರಿಗೆ 40 ಲಕ್ಷ ರೂ. ಸಾಲ ಮರುಪಾವತಿಗೆ ಚೆಕ್ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿದೆ. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಚೆಕ್ ಬೌನ್ಸ್ ಕೇಸ್ನಲ್ಲಿ ಕೆ.ವೈ.ನಂಜೇಗೌಡ ಅವರಿಗೆ 49.65 ಲಕ್ಷ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದರೆ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಶಾಸಕ ಕೆ.ವೈ.ನಂಜೇಗೌಡರ ಮೇಲೆ ಒಂದು ಎಫ್ಐಆರ್ ಕೂಡ ದಾಖಲಾಗಿತ್ತು
ಸರ್ಕಾರಿ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ಹಿನ್ನೆಲೆ ಬೆಂಗಳೂರಿನ 47ನೇ ಹೆಚ್ಚುವರಿ ಸಿಎಂಎಂ ಕೋರ್ಟ್ ಆದೇಶದಂತೆ ಮಾಲೂರು ಪೊಲೀಸ್ ಠಾಣೆಯಲ್ಲಿ ಮಾಲೂರು ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬರೋಬ್ಬರಿ 150 ಕೋಟಿ ಮೌಲ್ಯದ ಗೋಮಾಳ ಜಮೀನನ್ನು 2019ರ ಜುಲೈನಲ್ಲಿ 4 ಸಭೆ ಮಾಡಿ ಮಂಜೂರು ಮಾಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ರಾಜಣ್ಣ ಅವರು ದೂರು ನೀಡಿದ್ದರು. ಅದರಂತೆ ಶಾಸಕ ಕೆ.ವೈ.ನಂಜೇಗೌಡ, ತಹಶೀಲ್ದಾರ್, ಕಾರ್ಯದರ್ಶಿ, ಶಿರಸ್ತೆದಾರ್, ಆರ್ಐ, ವಿಎ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿತ್ತು.
ಇದನ್ನೂ ಓದಿ: ಚಿಕ್ಕೋಡಿ ಡಿವೈಎಸ್ಪಿ ಬಸವರಾಜ್ ಇಂಗ್ಲೀಷಿಗೆ ಅನುವಾದಿಸಿರುವ ಶಿಶುನಾಳ ಶರೀಫರ ಹಾಡು ಬೆಂಗಳೂರು ವಿವಿಗೆ ಪಠ್ಯವಾಯ್ತು!
2019 ಜುಲೈ ತಿಂಗಳಲ್ಲಿ ಸರ್ಕಾರಿ ಗೋಮಾಳ ಜಮೀನನ್ನು ಒಂದೇ ತಿಂಗಳಲ್ಲಿ ನಾಲ್ಕು ಸಭೆ ಮಾಡಿ ಮಂಜೂರು ಮಾಡಲಾಗಿದೆ. ಬಳಿಕ ನಕಲಿ ದಾಖಲೆಗಳನ್ನು ನೀಡಿ ಭೂ ಮಂಜೂರು ಮಾಡಿರುವ ಆರೋಪ ದರಖಾಸ್ತು ಕಮಿಟಿ ಅಧ್ಯಕ್ಷರೂ ಆಗಿರುವ ಶಾಸಕರ ವಿರುದ್ಧ ಕೇಳಿಬಂದಿತ್ತು. ಬರೋಬ್ಬರಿ 150 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮವಾಗಿ ಮಂಜೂರು ಮಾಡಿರುವುದಾಗಿ ಸಾಮಾಜಿಕ ಕಾರ್ಯಕರ್ತ ರಾಜಣ್ಣ ದೂರು ನೀಡಿದ್ದರು.
ಇದನ್ನೂ ಓದಿ: ಕಲಬುರಗಿ: ಕನ್ನಡಿಗರಿಗೆ ಮಂಗಳೂರು ಕುಕ್ಕರ್ ಗೊತ್ತು ಆದರೆ ಬೆಳಗಾವಿ ಕುಕ್ಕರ್ ಅಂದರೇನು ಅಂತ ಬಸನಗೌಡ ಯತ್ನಾಳರೇ ವಿವರಿಸಬೇಕು!
ಕಮಿಟಿ ಅಧ್ಯಕ್ಷ ಶಾಸಕ, ಕಾರ್ಯದರ್ಶೀ ತಹಶೀಲ್ದಾರ್ ಸೇರಿ ಒಟ್ಟು 9 ಮಂದಿ ವಿರುದ್ಧ ದೂರು ನೀಡಲಾಗಿತ್ತು. ಸಮಿತಿ ಅಧಿಕಾರೇತರ ಸದಸ್ಯರಾದ ದೊಮ್ಮಲೂರು ನಾಗರಾಜ್, ನಲ್ಲಾಂಡಹಳ್ಳಿ ನಾಗಪ್ಪ, ಅಬ್ಬೇನಹಳ್ಳಿ ನಾಗಮ್ಮ ವಿರುದ್ದವೂ ದೂರು ನೀಡಲಾಗಿತ್ತು. ಇದರಲ್ಲಿ ಭಾಗಿಯಾಗಿರುವ ಶಿರಸ್ತೆದಾರ್, ಆರ್ಐ, ಗ್ರಾಮ ಲೆಕ್ಕಿಗರ ವಿರುದ್ದ ಕೂಡ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದರು. ಈ ಸಂಬಂಧ ಬೆಂಗಳೂರಿನ 47ನೇ ಹೆಚ್ಚುವರಿ ಸಿಎಂಎಂ ನ್ಯಾಯಾಲಯದ ಆದೇಶದಂತೆ ಮಾಲೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:52 pm, Sat, 17 December 22