ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

Madhu Bangarappa Cheque Bounce Case: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದು, ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲುವಾಸ ಅನುಭವಿಸಲು ಕೋರ್ಟ್ ಆದೇಶಿಸಿದೆ.

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ
ಸಚಿವ ಮಧು ಬಂಗಾರಪ್ಪ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Dec 29, 2023 | 5:50 PM

ಬೆಂಗಳೂರು, (ಡಿಸೆಂಬರ್ 29): ಚೆಕ್ ಬೌನ್ಸ್ ಪ್ರಕರಣಕ್ಕೆ (Cheque Bounce Case) ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ(Madhu Bangarappa)  ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ(special court)  ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ.

6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: Cheque Bounce Case: 6.6 ಕೋಟಿ ರೂ. ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಜಾಮೀನು

ಕೋರ್ಟ್​ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.

ಪ್ರಕರಣ ಹಿನ್ನೆಲೆ

ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು. ಆದ್ರೆ, 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ 6.60ಕೋಟಿ ಚೆಕ್​ಬೌನ್ಸ್ ಕೇಸ್ ದಾಖಲಿಸಿತ್ತು. ಆದ್ರೆ, ಮಧು ಬಂಗಾರಪ್ಪ ಅವರು ಜಾಮೀನು ಪಡೆದುಕೊಂಡಿದ್ದರು.

Published On - 5:41 pm, Fri, 29 December 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ