AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಬಿಸಿ: ದಾಖಲೆ ಬರೆದ ದರ

Chicken, Egg Price Hike: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಚಿಕನ್ ಮತ್ತು ಮೊಟ್ಟೆ ದರದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಚಿಕನ್ ಕೆಜಿಗೆ 360 ರೂಪಾಯಿ ಹಾಗೂ ಒಂದು ಮೊಟ್ಟೆ 9 ರೂಪಾಯಿಗೆ ತಲುಪಿದ್ದು, ದರ ಏರಿಕೆ ಗ್ರಾಹಕರ ಜೇಬಿಗೆ ನೇರ ಹೊರೆ ತಂದಿದೆ.

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಬಿಸಿ: ದಾಖಲೆ ಬರೆದ ದರ
ಸಾಂದರ್ಭಿಕ ಚಿತ್ರImage Credit source: tv9
ಕಿರಣ್​ ಸೂರ್ಯ
| Edited By: |

Updated on:Jul 14, 2026 | 12:26 PM

Share

ಮುಖ್ಯಾಂಶಗಳು

  • ಚಿಕನ್ ಕೆಜಿ ಬೆಲೆ 360 ರೂ.ಗೆ ಏರಿಕೆ
  • ಒಂದು ಮೊಟ್ಟೆ ದರ 9 ರೂ.ಗೆ ಹೆಚ್ಚಳ
  • ಬಿರಿಯಾನಿ ದುಬಾರಿಯಾಗುವ ಸಾಧ್ಯತೆ

ಬೆಂಗಳೂರು, ಜುಲೈ 14: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಬೆಂಗಳೂರಿನಲ್ಲಿ (Bengaluru) ಒಂದು ಕೆಜಿ ಬಾಯ್ಲರ್ ಚಿಕನ್ ಬೆಲೆ 360 ರೂಪಾಯಿಗೆ ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿದೆ. ಮಾರುಕಟ್ಟೆಯ ಮಾಹಿತಿ ಪ್ರಕಾರ, ಚರ್ಮವಿಲ್ಲದ (Without Skin Chicken) ಬಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ ಚರ್ಮ ಸಮೇತ (With Skin Chicken) ಚಿಕನ್ ಪ್ರತಿ ಕೆಜಿಗೆ 340 ರೂಪಾಯಿಗೆ ಮಾರಾಟವಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ 300 ರೂಪಾಯಿ ಆಸುಪಾಸಿನಲ್ಲಿದ್ದ ಚಿಕನ್ ಬೆಲೆ ಈಗ 350ರಿಂದ 360 ರೂಪಾಯಿವರೆಗೆ ಏರಿಕೆಯಾಗಿದೆ.

ಮೊಟ್ಟೆ ದರವೂ ಇದೇ ರೀತಿ ಏರಿಕೆ ಕಂಡಿದೆ. ಸಗಟು ಮಾರುಕಟ್ಟೆಯಲ್ಲಿ ಒಂದು ಮೊಟ್ಟೆ 8 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ 8.30 ರಿಂದ 9 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಮೂರು ದಿನಗಳ ಹಿಂದಷ್ಟೇ 7ರಿಂದ 7.50 ರೂಪಾಯಿ ಇದ್ದ ಮೊಟ್ಟೆ ಬೆಲೆ ಈಗ 9 ರೂಪಾಯಿಗೆ ತಲುಪಿರುವುದು ಗ್ರಾಹಕರಿಗೆ ಹೆಚ್ಚುವರಿ ಹೊರೆ ತಂದಿದೆ.

ಚಿಕನ್, ಮೊಟ್ಟೆ ದರ ಏರಿಕೆ ಬಗ್ಗೆ ವ್ಯಾಪಾರಿಗಳು ಹೇಳೋದೇನು?

ವ್ಯಾಪಾರಿಗಳ ಪ್ರಕಾರ, ಈ ಬಾರಿ ಕೋಳಿಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಹಾಗೂ ಬೇರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕೋಳಿ ಪೂರೈಕೆಯಾಗುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಪೂರೈಕೆ ಕಡಿಮೆಯಾಗಿದೆ. ಇದರಿಂದ ಚಿಕನ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ಅವರು ಹೇಳುತ್ತಾರೆ.

ಬೆಲೆ ಏರಿಕೆ ಬಗ್ಗೆ ವ್ಯಾಪಾರಿಗಳ ಮಾತು

ಚಿಕನ್, ಮೊಟ್ಟೆ ಖರೀದಿ ಇಳಿಕೆ

ಬೆಲೆ ಏರಿಕೆಯ ಪರಿಣಾಮ ಗ್ರಾಹಕರ ಖರೀದಿ ಪ್ರಮಾಣದಲ್ಲೂ ಬದಲಾವಣೆ ಕಂಡುಬಂದಿದೆ. ಈ ಹಿಂದೆ ಒಂದು ಕೆಜಿ ಚಿಕನ್ ಖರೀದಿಸುತ್ತಿದ್ದವರು ಈಗ 500 ಅಥವಾ 750 ಗ್ರಾಂ ಮಾತ್ರ ಖರೀದಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಹೆಚ್ಚಿದ ದರದ ಕಾರಣ ಗ್ರಾಹಕರ ಸಂಖ್ಯೆ ಕೂಡ ಕಡಿಮೆಯಾಗಿದೆ ಎನ್ನಲಾಗಿದೆ.

ಚಿಕನ್ ಬಿರಿಯಾನಿ, ಮೊಟ್ಟೆ ಕರಿ ದರ ಏರಿಕೆ ಸಾಧ್ಯತೆ

ಚಿಕನ್ ಮತ್ತು ಮೊಟ್ಟೆ ದರ ಏರಿಕೆಯಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೂ ಹೊರೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಚಿಕನ್ ಬಿರಿಯಾನಿ, ಮೊಟ್ಟೆ ಕರಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರ ವಲಯ ಅಂದಾಜಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:21 pm, Tue, 14 July 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ