Ubuntu: ಮಹಿಳಾ ಉದ್ಯಮಿಗಳಿಗೆ ನೆರವಾಗಲು ಸ್ವಸಹಾಯ ಸಂಘ ಮಾದರಿ ಪ್ರತ್ಯೇಕ ಸಂಘ ಸ್ಥಾಪನೆ -ಸಿಎಂ ಬೊಮ್ಮಾಯಿ ಘೋಷಣೆ
ಮಹಿಳಾ ಉದ್ಯಮಿಗಳ ಬೃಹತ್ ಉಬುಂಟು ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡುತ್ತಾ ಈ ಘೋಷಣೆ ಮಾಡಿದರು. ಬೆಂಗಳೂರಿನ ಅಶೋಕ ಹೊಟೇಲ್ ನಲ್ಲಿ ನಡೆಯುತ್ತಿರುತ್ತಿರುವ ಕಾರ್ಯಕ್ರಮದಲ್ಲಿ ಉಬುಂಟು ಅಧ್ಯಕ್ಷೆ ಕೆ. ರತ್ನಪ್ರಭ ಉಪಸ್ಥಿತಿರಿದ್ದರು. ಉಬುಂಟು ಮಹಿಳಾ ಉದ್ಯಮಿಗಳ ಸಂಘವಾಗಿದೆ.
ಬೆಂಗಳೂರು: ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹಳ್ಳಿಗಳಲ್ಲಿರುವ ಮಹಿಳಾ ಸ್ವಸಹಾಯ ಸಂಘ ಮಾದರಿ ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಸಂಘ ತೆರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹೊಸ ಸಂಘ ಸ್ಥಾಪನೆ ಮಾಡಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ದೃಷ್ಟಿಚೇತನ, ವಿಕಲಚೇತನ ಮಹಿಳೆಯರಿಗೆ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮಹಿಳಾ ಉದ್ಯಮಿಗಳ ಬೃಹತ್ ಉಬುಂಟು (Ubuntu – Consortium of Women Entrepreneurs Association) ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡುತ್ತಾ ಈ ಘೋಷಣೆ ಮಾಡಿದರು. ಬೆಂಗಳೂರಿನ ಅಶೋಕ ಹೊಟೇಲ್ ನಲ್ಲಿ ನಡೆಯುತ್ತಿರುತ್ತಿರುವ ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಉಬುಂಟು ಅಧ್ಯಕ್ಷೆ ಕೆ. ರತ್ನಪ್ರಭ ಉಪಸ್ಥಿತಿರಿದ್ದರು. ಉಬುಂಟು ಮಹಿಳಾ ಉದ್ಯಮಿಗಳ ಸಂಘವಾಗಿದೆ.
(chief minister basavaraj bommai announces new separate help group fund for women entrepreneurs in karnataka)
Published On - 11:33 am, Thu, 18 November 21