ಪ್ರತಿಭಟನಾ ನಿರತ ರೈತರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ

| Updated By: ನಯನಾ ರಾಜೀವ್

Updated on: Jul 11, 2022 | 8:42 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಜತೆ ಸಭೆ ನಡೆಸುತ್ತಿದ್ದಾರೆ. ರೇಸ್​ಕೋರ್ಸ್​ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಈ ಮೊದಲು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿತ್ತು.

ಪ್ರತಿಭಟನಾ ನಿರತ ರೈತರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ
Basavaraj Bommai
Follow us on

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಜತೆ ಸಭೆ ನಡೆಸುತ್ತಿದ್ದಾರೆ. ರೇಸ್​ಕೋರ್ಸ್​ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಈ ಮೊದಲು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿತ್ತು. ಸಿಎಆರ್​ ಮೈದಾನದಿಂದ ಸಿಎಂ ನಿವಾಸಕ್ಕೆ ಆಗಮಿಸಿರುವ ರೈತರು
ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆ ಯತ್ನ ನಡೆಸಿದ್ದರು.

ಬೆಳಗ್ಗೆ ಮುಖ್ಯಮಂತ್ರಿ ಮನೆ ಬಳಿಗೆ ಬಂದಿದ್ದ ಸುಮಾರು 500 ಕ್ಕೂ ಅಧಿಕ ರೈತರನ್ನು ವಶಕ್ಕೆ ಪಡೆಯಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗುವಂತೆ ರೈತರು ಪಟ್ಟು ಹಿಡಿದಿದ್ದ ಕಾರಣ, ಸಿಎಂ ಮಾತುಕತೆಗೆ ಮುಂದಾಗಿದ್ದಾರೆ. 20 ಮಂದಿ ರೈತರಿಗೆ ಮಾತ್ರ ಭೇಟಿಗೆ ಅನುಮತಿ ನೀಡಲಾಗಿದೆ. ರೈತ ಮುಖಂಡ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಭೇಟಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಿಎಂ ಜತೆ ಚರ್ಚೆ ನಡೆಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಯಿಗೆ ರಾಜ್ಯ ರೈತ ಸಂಘದ ರೈತರ ನಿಯೋಗ ಮನವಿ ಸಲ್ಲಿಸಿದೆ. ಇಪ್ಪತ್ತು ನಿಮಿಷಗಳ ಕಾಲ ನಡೆದ ಸಿಎಂ ಜೊತೆಗಿನ ಸಭೆ ಅಂತ್ಯಗೊಂಡಿದೆ.
ಒಂದು ವಾರದೊಳಗೆ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಸಿಎಂ ಭರವಸೆ ನೀಡಿದ್ದಾರೆ,
ಹದಿನೈದು ದಿನಗಳಲ್ಲಿ ನಮ್ಮ ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ರೆ ಮುಂದೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ನಿಯೋಗ ಹೇಳಿಕೆ ನೀಡಿದೆ.

ಇನ್ನು ಬಸವರಾಜ ಬೊಮ್ಮಾಯಿಯವರು ನಾಳೆಯಿಂದ 2 ದಿನ ಮಳೆ ಹಾನಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು, ನಾಳೆ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಮಡಿಕೇರಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಹಾನಿ ವೀಕ್ಷಣೆ ಮಾಡಲಿದ್ದಾರೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ಬೊಮ್ಮಾಯಿ, ಉಡುಪಿ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶ ವೀಕ್ಷಿಸಲಿದ್ದಾರೆ. ಹೀಗಾಗಿ ಇಂದೇ ರೈತರ ಜತೆ ಸಭೆ ನಡೆಸಿದ್ದಾರೆ.

Published On - 6:15 pm, Mon, 11 July 22