AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಸಿಎಂ ಸೂಚನೆ

BS Yediyurappa: ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ. 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಸಿಎಂ ಸೂಚನೆ
ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ನಿರ್ದೇಶನ
TV9 Web
| Edited By: |

Updated on:Jun 03, 2021 | 2:51 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.ಬಿಬಿಎಂಪಿಯ 8 ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯಂತ್ರಣ ಕೊಠಡಿಗಳು ಕಾರ್ಯನಿರ್ವಹಿಸಲಿದ್ದು, ಅನ್-ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು, ಮತ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ.

ರಸ್ತೆ ಬದಿ ಮಳೆ ನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡ ಮೋರಿಗಳ ಹೂಳು ತೆಗೆಯುವುದು, ರಾಜ ಕಾಲುವೆಗೆ ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ. ದೊಡ್ಡ ಕಾಲುವೆಗಳಲ್ಲಿ 26 ವಾಟರ್ ಲೆವೆಲ್ ಸೆನ್ಸರ್ ಗಳನ್ನು ಅಳವಡಿಸಲಾಗಿದೆ.

ಮೇಘ ಸಂದೇಶ ಆಪ್ ನಲ್ಲಿ ಮಳೆ ಮಾಹಿತಿ

 chief minister bs yediyurappa attends meeting to control monsoon effect in bbmp zones in bengaluru

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ. 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ತಡೆಗೋಡೆ ಇರುವ 440 ಕಿ.ಮೀ. ಉದ್ದದ ರಾಜಕಾಲುವೆ ಪ್ರದೇಶಗಳ ವಾರ್ಷಿಕ ನಿರ್ವಹಣೆಗೆ ಕ್ರಮ ವಹಿಸಲಾಗಿದೆ. ನಗರದ ಕೆರೆಗಳನ್ನು ದೈನಂದಿನ ಆಧಾರದಲ್ಲಿ ನಿರ್ವಹಿಸಲಾಗುತ್ತಿದ್ದು, ಮಳೆನೀರು ರಾಜಕಾಲುವೆಗಳ ಮೂಲಕ ಕೆರೆಗಳಿಗೆ ಹರಿಯುವಂತೆ ಮಾಡುವುದರಿಂದ ಪ್ರವಾಹ ತಪ್ಪಿಸಬಹುದು ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಅಬಕಾರಿ ಸಚಿವ ಗೋಪಾಲಯ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Published On - 2:48 pm, Thu, 3 June 21

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ