ಬೆಂಗಳೂರು ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ; ಏಲ್ಲೆಲ್ಲಿ?

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 07, 2024 | 8:07 AM

ಇಂದು(ಏ.07) ಬೆಂಗಳೂರು ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ತಮ್ಮ​ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲಿದ್ದಾರೆ. ಇನ್ನು ನಿನ್ನೆಯಷ್ಟೇ ಕೋಲಾರದ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಇಡೀ ದಿನ ಬೆಂಗಳೂರಿನಲ್ಲಿ‌ ಸಿಎಂ ಅಬ್ಬರದ ಪ್ರಚಾರದ ಮೂಲಕ ಮತಬೇಟೆಯಾಡಲಿದ್ದಾರೆ.

ಬೆಂಗಳೂರು ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ; ಏಲ್ಲೆಲ್ಲಿ?
ಬೆಂಗಳೂರಿನಲ್ಲಿ‌ ಸಿಎಂ ಪ್ರಚಾರ
Follow us on

ಬೆಂಗಳೂರು, ಏ.07: ಲೋಕಸಭಾ ಚುನಾವಣೆ(Lok sabha election) ಹತ್ತಿರವಾಗುತ್ತಿದ್ದಂತೆ ಉಭಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಇಂದು(ಏ.07) ಬೆಂಗಳೂರು ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ತಮ್ಮ​ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲಿದ್ದಾರೆ. ಇನ್ನು ನಿನ್ನೆಯಷ್ಟೇ ಕೋಲಾರದ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಇಡೀ ದಿನ ಬೆಂಗಳೂರಿನಲ್ಲಿ‌ ಸಿಎಂ ಅಬ್ಬರದ ಪ್ರಚಾರದ ಮೂಲಕ ಮತಬೇಟೆಯಾಡಲಿದ್ದಾರೆ.

ಬೆಂಗಳೂರಿನ ಲೋಕಸಭಾ ಕ್ಷೇತ್ರಗಳಲ್ಲಿ ಸಿಎಂ ಪ್ರಚಾರ

ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪೂರಕವಾಗಿ ಕಾರ್ಯಕರ್ತರ ಸಭೆ ಮತ್ತು ಪ್ರಚಾರ ನಡೆಸಲಿದ್ದಾರೆ. ಇಂದು ಬೆಳಗ್ಗೆ 11 ರಿಂದ ಸಂಜೆ 6 ಗಂಟೆಯವರೆಗೆ ಪ್ರಚಾರದಲ್ಲಿ ತೊಡಗಿಕೊಳ್ಳಲಿರುವ ಸಿಎಂ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ‌ ಮಲ್ಲೇಶ್ವರಂನಿಂದ ರೋಡ್ ಶೋ ಆರಂಭಿಸಲಿರುವ ಅವರು,  ದಾಸರಹಳ್ಳಿ, ಬ್ಯಾಟರಾಯನಪುರ, ಮಲ್ಲೇಶ್ವರಂ, ಪದ್ಮನಾಭನಗರ, ಬೊಮ್ಮನಹಳ್ಳಿ, ಮಹಾಲಕ್ಷ್ಮಿ ಲೇಔಟ್ ಕ್ಷೇತಗಳಲ್ಲಿ‌ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ:ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡಿದರೆ ನಾವು ಸತ್ಯವನ್ನು ಆಧಾರವಾಗಿಸಿಕೊಂಡು ಪ್ರಚಾರ ಮಾಡುತ್ತೇವೆ: ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಜೊತೆ ಪ್ರಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ

ಜೊತೆಗೆ ನಾಳೆಯೂ ಕೂಡ ಪ್ರಚಾರದ ಮುಂದುವರೆದ ಭಾಗವಾಗಿ ಜಯನಗರ, ಚಿಕ್ಕಪೇಟೆ, ಬಿಟಿಎಂ ಲೇಔಟ್, ರಾಜಾಜಿನಗರ, ಸಿ.ವಿ ರಾಮನ್ ನಗರ ಮತ್ತು ಗಾಂಧಿನಗರ ಕ್ಷೇತ್ರದ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆ ಪ್ರಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ