AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು

Pradeep Eshwar: ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ್ದಾರೆ. ಈ ವೇಳೆ ಮಾಜಿ ಸಿಎಂ ಧೈರ್ಯ ಹೇಲಿದ್ದು, ಘಟನೆ ಸಂಬಂಧ ಗೃಹ ಸಚಿವರ ಜೊತೆಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಪ್ರದೀಪ್​​ ಬೆಂಬಲಿಸಿ ಸಿಎಂ ಡಿಕೆಶಿ ಕೂಡ ಪೋಸ್ಟ್​​ ಮಾಡಿದ್ದು, ವಿಪಕ್ಷಗಳ ವಿರುದ್ಧ ತೀವ್ರ ಆಕ್ರೋಶವನ್ನವರು ವ್ಯಕ್ತಪಡಿಸಿದ್ದಾರೆ.

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಪ್ರದೀಪ್​​ ಈಶ್ವರ್​​Image Credit source: Siddaramaiah X Account
ಪ್ರಸನ್ನ ಗಾಂವ್ಕರ್​
| Edited By: |

Updated on:Jun 30, 2026 | 3:58 PM

Share

ಮುಖ್ಯಾಂಶಗಳು

  • ಚಪ್ಪಲಿ ಎಸೆತ ಪ್ರಕರಣ ಸಂಬಂಧ ಪ್ರದೀಪ್​​ ಈಶ್ವರ್​​ ಭಾವುಕ
  • ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಚಿಕ್ಕಬಳ್ಳಾಪುರ MLA
  • 'ಕೈ' ಶಾಸಕನ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ, ಮಾಜಿ ಸಿಎಂ

ಬೆಂಗಳೂರು, ಜೂನ್​​ 30: ತಮ್ಮ ಮೇಲೆ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಈಶ್ವರ್‌ ಭಾವುಕರಾಗಿದ್ದಾರೆ. ಈ ವೇಳೆ ಪ್ರದೀಪ್ ಈಶ್ವರ್‌ಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದು, ರಾಜಕಾರಣದಲ್ಲಿ ಇಂಥ ಘಟನೆ ಸಾಮಾನ್ಯ. ಇಂಥವನ್ನು ಎದುರಿಸಬೇಕು, ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದ್ದಾರೆ.

ಗೃಹ ಸಚಿವರ ಜೊತೆ ಸಿದ್ದರಾಮಯ್ಯ ಚರ್ಚೆ

ಬಳಿಕ ಘಟನೆ ಸಂಬಂಧ ಗೃಹ ಸಚಿವರ ಜೊತೆಗೂ ದೂರವಾಣಿ ಮೂಲಕ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪ್ರಿಯಾಂಕ್‌ ಖರ್ಗೆಗೆ ಮಾಜಿ ಸಿಎಂ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ; ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರ ಬಂಧನ

ಪ್ರದೀಪ್​​​​ ಬೆಂಬಲಿಸಿ ಸಿಎಂ ಡಿಕೆಶಿ ಪೋಸ್ಟ್​​

ಮತ್ತೊಂದೆಡೆ ಎಕ್ಸ್​ ಮೂಲಕ ಶಾಸಕ ಪ್ರದೀಪ್ ಈಶ್ವರ್ ಪರ ಸಿಎಂ ಡಿಕೆ ಶಿವಕುಮಾರ್​​ ಕೂಡ ಪೋಸ್ಟ್​ ಮಾಡಿದ್ದು, ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಮೇಲೆ ಚಪ್ಪಲಿ‌ ಎಸೆದ ನೀಚ ಕೃತ್ಯವು ವಿರೋಧ ಪಕ್ಷದವರ ಹತಾಶೆಯ ಪರಮಾವಧಿ. ಒಬ್ಬ ಯುವ ನಾಯಕನ ಜನಪ್ರಿಯತೆ, ಮಾತುಗಳನ್ನ ಜೀರ್ಣಿಸಿಕೊಳ್ಳಲಾಗದೆ ತರ್ಕದ ವೇದಿಕೆಯಿಂದ ತರಗೆಲೆ ರಾಜಕಾರಣಕ್ಕೆ ಇಳಿದಿರುವುದು ನಿಮ್ಮ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವದ ಆಶಯಗಳನ್ನು ಬೀದಿಗೆ ತಂದು ಹರಾಜಿಗಿಟ್ಟಿರುವ ನೀವು ನಿಮ್ಮ ಕಾರ್ಯಕರ್ತರಿಗೆ ಕಲಿಸುತ್ತಿರುವ ಸಂಸ್ಕಾರವಾದರೂ ಇಂತಹುದೇನಾ? ನೆನಪಿರಲಿ, ಇಂತಹ ಹಿಂಸಾತ್ಮಕ ದಾಳಿಗಳು ನಮ್ಮ ನಾಯಕರ ಹೋರಾಟದ ಹಾದಿಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆಯೇ ಹೊರತು ಎಂದಿಗೂ ಧೃತಿಗೆಡಿಸುವುದಿಲ್ಲ. ಇದು ಬಸವಣ್ಣನವರ, ಕುವೆಂಪು ಅವರ ಶಾಂತಿಪ್ರಿಯ ಕರ್ನಾಟಕ. ಇಲ್ಲಿ ಇಂತಹ ವಿಕೃತ, ಹಿಂಸಾತ್ಮಕ ಪುಂಡಾಟಿಕೆಗಳಿಗೆ ಜಾಗವಿಲ್ಲ. ಸಾರ್ವಜನಿಕ ಸಭ್ಯತೆಯ ಗಡಿ ದಾಟಿದ ಪ್ರತಿಯೊಬ್ಬರ ವಿರುದ್ಧವೂ ನಾವು ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:57 pm, Tue, 30 June 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ