ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಚಿಕೂನ್ ಗುನ್ಯಾ, ಡೆಂಗ್ಯೂ: ಒಂದೇ ವಾರದಲ್ಲಿ 100ಕ್ಕೂ ಹೆಚ್ಚು ಪ್ರಕರಣ

ಬೆಂಗಳೂರಿನಲ್ಲಿ ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಕಳೆದ ಮೂರು ತಿಂಗಳಲ್ಲಿ 910 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಮತ್ತು 260 ಕ್ಕೂ ಹೆಚ್ಚು ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಬೇಸಿಗೆ ಮಳೆಯಿಂದಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುತ್ತಿದ್ದು, ರೋಗ ಹರಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಚಿಕೂನ್ ಗುನ್ಯಾ, ಡೆಂಗ್ಯೂ: ಒಂದೇ ವಾರದಲ್ಲಿ 100ಕ್ಕೂ ಹೆಚ್ಚು ಪ್ರಕರಣ
ಸಾಂದರ್ಭಿಕ ಚಿತ್ರ
Edited By:

Updated on: Apr 07, 2025 | 6:47 AM

ಬೆಂಗಳೂರು, ಏಪ್ರಿಲ್ 7: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಈಗ ಮತ್ತೆ ಡೆಂಗ್ಯೂ (Dengue) ಹಾಗೂ ಚಿಕುನ್ ಗುನ್ಯಾ (Chikungunya) ಭೀತಿ ಶುರುವಾಗಿದೆ‌‌. ಬೇಸಿಗೆಯ ಮಳೆಗೂ ಡೆಂಘಿ ಹರಡುವ ಸಾಧ್ಯತೆ ಇದೆ. ಎರಡು ದಿನಗಳ ಹಿಂದಷ್ಟೆ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಡೆಂಘಿ ಹರಡುವ ಸಾಧ್ಯತೆ ಹೆಚ್ಚಿದೆ. ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ 910ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ದಾಖಲಾದರೆ, ಮಳೆ ಬಂದ ಬೆನ್ನಲ್ಲೇ ಒಂದೇ ವಾರದಲ್ಲಿ 75ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಡೆಂಘಿ ಜೊತೆ ಚಿಕುನ್ ಗುನ್ಯಾ ಕೂಡಾ ಪತ್ತೆಯಾಗುತ್ತಿದ್ದು, ಕಳೆದ ಒಂದೇ ವಾರದಲ್ಲಿ 24 ಪ್ರಕರಣಗಳು ಪತ್ತೆಯಾಗಿವೆ. ಜನವರಿಯಂದ ಇಲ್ಲಿಯವರೆಗೆ 260 ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಯೋಜನಾ ವಿಭಾಗದ ನಿರ್ದೇಶಕ ಅನ್ಸರ್ ಅಹಮ್ಮದ್ ತಿಳಿಸಿದ್ದಾರೆ.

ಈಗಾಗಲೇ ಜ್ವರ, ವೈರಲ್ ಫಿವರ್ ಎಂದು ಆಸ್ಪತ್ರೆಯತ್ತ ಮುಖ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ತಪಾಸಣೆ ನಡೆಸಿದಾಗ ಜನರಲ್ಲಿ ಡೆಂಘಿ ಹಾಗೂ ಚಿಕುನ್ ಗುನ್ಯಾ ಲಕ್ಷಣಗಳು ಕಾಂಣಿಸುತ್ತಿವೆ. ಚಿಕುನ್ ಗುನ್ಯಾ ಹಾಗೂ ವೈರಲ್ ಜ್ವರ ಕೂಡಾ ಹೆಚ್ಚಾಗುತ್ತಿರುವ ಕಾರಣ ಜನರು ಎಚ್ಚರವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ, ಸೊಳ್ಳೆ ಉತ್ಪತ್ತಿಯಾಗದಂತೆ ಜನ ಎಚ್ಚರವಹಿಸಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಕೆ ಸಿ ಜನರಲ್ ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ವೈದ್ಯ ಡಾ ಸುರೇಶ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ
ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್
ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರ ನೋಡಿ
ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ, ಕೃತ್ಯದ ವಿಡಿಯೋ ವೈರಲ್​
ಸಂಸದ ಸಾಗರ್ ಖಂಡ್ರೆ ಮನೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ ವ್ಯಕ್ತಿ ಮೇಲೆ FIR

ಸೊಳ್ಳೆಯಿಂದಲೇ ಹರಡುತ್ತವೆ ಡೆಂಘಿ, ಚಿಕುನ್ ಗುನ್ಯಾ

ಈಡಿಸ್ ಈಜಿಪ್ಟಿ ಜಾತಿಯ ಸೊಳ್ಳೆಯಿಂದಲೇ ಡೆಂಘಿ ಹಾಗೂ ಚಿಕುನ್ ಗುನ್ಯಾ ಹರಡುತ್ತದೆ. ಸೊಳ್ಳೆ ಕಚ್ಚಿದ 7 ದಿನಗಳಲ್ಲಿ ರೋಗಲಕ್ಷಣಗಳು ಕಾಣಿಸುತ್ತವೆ. ಈ ಸೊಳ್ಳೆಗಳ ಕಾಟ ಬೆಳಗಿನ ಹೊತ್ತು ಹೆಚ್ಚಾಗಿರುತ್ತದೆ. ಹೀಗಾಗಿ ಆ ಸಮಯದಲ್ಲಿ ಸೊಳ್ಳೆ ಕಚ್ಚುವಿಕೆಯಿಂದ ಪಾರಾಗಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್

ಡೆಂಗ್ಯೂ, ಚಿಕುನ್ ಗುನ್ಯಾ ಲಕ್ಷಣಗಳೇನು?

ತೀವ್ರ ಜ್ವರ, ತೀವ್ರ ತಲೆನೋವು, ಸ್ನಾಯು ಮತ್ತು ಕೀಲು ನೋವು, ವಾಕರಿಕೆ ಮತ್ತು ವಾಂತಿ, ಗ್ರಂಥಿಗಳ ಉರಿಯೂತ, ದದ್ದು, ಆಯಾಸ, ಆಲಸ್ಯ ಡೆಂಗ್ಯೂ ಮುಖ್ಯ ಲಕ್ಷಣಗಳಾಗಿವೆ. ಹಠಾತ್ ಆಗಿ ತೀವ್ರ ಜ್ವರ ಬರುವುದು, ತೀವ್ರ ಕೀಲು ನೋವು, ಕೀಲು ಊತ, ಸ್ನಾಯು ನೋವು, ತಲೆನೋವು, ದದ್ದು, ಆಯಾಸ, ವಾಕರಿಕೆ ಇತ್ಯಾದಿ ಚಿಕುನ್ ಗುನ್ಯಾ ಲಕ್ಷಣಗಳಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 am, Mon, 7 April 25

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us