ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು; ತಂದೆ-ತಾಯಿ ಸ್ಥಿತಿ ಗಂಭೀರ

ನಗರದ ಕೆ.ಪಿ ಅಗ್ರಹಾರದ ಭುವನೇಶ್ವರಿನಗರದಲ್ಲಿ ಫುಡ್​ ಪಾಯ್ಸನ್​(food poison)ನಿಂದ 5 ವರ್ಷದ ಮಗು ಸಾವನ್ನಪ್ಪಿದ್ದು, ತಂದೆ-ತಾಯಿ ಸ್ಥಿತಿ ಗಂಭೀರವಾಗಿದೆ. ಇಬ್ಬರಿಗೂ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. . ಸದ್ಯ ಪ್ರಾಥಮಿಕ ವರದಿಯಲ್ಲಿ ಪುಡ್ ಪಾಯ್ಸಿನ್ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು; ತಂದೆ-ತಾಯಿ ಸ್ಥಿತಿ ಗಂಭೀರ
ಮೃತ ಮಗು ಧೀರಜ್
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 07, 2024 | 5:46 PM

ಬೆಂಗಳೂರು, ಅ.07: ಬೆಂಗಳೂರಿನ ಕೆ.ಪಿ ಅಗ್ರಹಾರದ ಭುವನೇಶ್ವರಿನಗರದಲ್ಲಿ ಫುಡ್​ ಪಾಯ್ಸನ್​(food poison)ನಿಂದ 5 ವರ್ಷದ ಧೀರಜ್ ಸಾವನ್ನಪ್ಪಿದ್ದು, ತಂದೆ ಬಾಲರಾಜ್ ಹಾಗೂ ತಾಯಿ ನಾಗಲಕ್ಷ್ಮೀ ಸ್ಥಿತಿ ಗಂಭೀರವಾಗಿದೆ. ಸ್ವಿಗ್ಗಿ ಡೆಲಿವರಿ ಬಾಯ್​ ಆಗಿ ಕೆಲಸ ಮಾಡುತ್ತಿದ್ದ ಅಸ್ವಸ್ಥ ಬಾಲರಾಜ್​ಗೆ ನಿನ್ನೆ(ಅ.06) ಸಂಜೆ ಕೇಕ್​ ಆರ್ಡರ್ ಬಂದಿತ್ತು. ಬೇಕರಿಯಿಂದ ಕೇಕ್ ತೆಗೆದುಕೊಂಡು ಹೋಗುವಷ್ಟರಲ್ಲಿ ಆರ್ಡರ್ ಕ್ಯಾನ್ಸಲ್ ಆಗಿದೆ. ಈ ಹಿನ್ನಲೆ ಬಾಲರಾಜ್​ ಮನೆಗೆ ಕೇಕ್ ತೆಗೆದುಕೊಂಡು ಹೋಗಿದ್ದಾನೆ. ಅದರಂತೆ ಇಡೀ ಕುಟುಂಬ ಅದನ್ನು ಸೇವಿಸಿದ್ದರು.

ಕೇಕ್ ತಿಂದ ಬಳಿಕ ಮಗು, ಪೋಷಕರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆ ಬಗ್ಗೆ ವಿವರ ನೀಡಬೇಕಾದ ತಂದೆ-ತಾಯಿ ಕೂಡ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ಪೊಲೀಸರಿಗೆ ದೂರು ಕೊಡಲು ಅಥವಾ ಘಟನೆ ಹೇಗೆ ನಡೆದಿದೆ ಎಂಬ ಬಗ್ಗೆ ಹೇಳಲು ಯಾರು ಇಲ್ಲ. ಇಬ್ಬರಿಗೂ ಪ್ರಜ್ಞೆ ಬಂದ ಬಳಿಕ ಘಟನೆ ಬೆಳಕಿಗೆ ಬರುವ ಸಾಧ್ಯತೆಯಿದೆ.

ಇದನ್ನೂ ಓದಿ:ಉಡುಪಿಯಲ್ಲಿ ಕಲುಷಿತ ನೀರು ಕುಡಿದು 500ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮ ಪಂಚಾಯತ್ ನಿರ್ಲಕ್ಷ್ಯ ಆರೋಪ

ಈ ಘಟನೆ ಕುರಿತು ಸ್ಪಷ್ಟನೆ ನೀಡಿದ ಕಿಮ್ಸ್​ ಆಸ್ಪತ್ರೆಯ ನಿರ್ದೇಶಕ ಡಾ.ಆಂಜಿನಪ್ಪ, ‘ಇದು ಫುಡ್​ ಪಾಯ್ಸನ್​ನಿಂದ ಆಗಿದ್ದು,  ಆಸ್ಪತ್ರೆಗೆ ಬರುವ ಮೊದಲೇ, ಅಂದರೆ ಆಹಾರ ಸೇವಿಸಿದ ಬಳಿಕ ಸಡನ್ ಆಗಿ 5 ವರ್ಷದ ಮಗು ಮೃತಪಟ್ಟಿದೆ. ಈ ಕುರಿತು ಅಲ್ಟ್ರಾ ಸೌಂಡ್ ಸ್ಕ್ಯಾನ್ ಮಾಡಲಾಗಿದೆ. ಮಗುವಿನ ಸಾವಿಗೆ ನಿಖರ ಕಾರಣ ವರದಿಯಲ್ಲಿ ತಿಳಿಯಬೇಕಿದೆ. ಯಾವ ಕಾರಣ ಎಂದು ರಿಪೋರ್ಟ್ ನೋಡಿದ ಬಳಿಕ ಹೇಳುತ್ತೇವೆ. ಸದ್ಯ ಇದು ಪುಡ್ ಪಾಯ್ಸಿನ್ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದಿದೆ. ಇನ್ನು ಮೃತ ಮಗುವಿನ ತಂದೆ-ತಾಯಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಇನ್ನು ಬಾಲರಾಜ್ ಮತ್ತು ನಾಗಲಕ್ಷ್ಮೀ ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಇಬ್ಬರು ಮಕ್ಕಳಿದ್ದಾರೆ. ಮನೆಯಲ್ಲಿ ಒಟ್ಟು ನಾಲ್ಕು ಜನ ವಾಸವಿದ್ದರು. ಅಜ್ಜಿ ಮನೆಗೆ ಹೆಣ್ಣು ಮಗುವನ್ನ ಕಳುಹಿಸಲಾಗಿತ್ತು. ನಿನ್ನೆ ರಾತ್ರಿ ಮೂವರು ಕೂಡ ಊಟ ಮಾಡಿ, ಬಾಲರಾಜ್​ ತಂದಿದ್ದ ಕೇಕ್ ಸೇವಿಸಿದ್ದರು. ಬೆಳಗಾಗುವಷ್ಟರಲ್ಲಿ ಈ ದುರ್ಘಟನೆ ನಡೆದಿದೆ.​ ಸದ್ಯ ಮೆಡಿಕಲ್ ರಿಪೋರ್ಟ್​ಗಾಗಿ ಪೊಲೀಸರು ಕಾಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್