ಬೆಂಗಳೂರಿನಲ್ಲಿ ಬಾಲ್ಯ ವಿವಾಹ ಇನ್ನೂ ಜೀವಂತ; 16 ವರ್ಷದ ಬಾಲಕಿಗೆ ಒತ್ತಾಯವಾಗಿ ಮದುವೆ ಮಾಡಿಸಿರುವ ತಾಯಿ

ರಾಜ್ಯದಲ್ಲಿ ಬಾಲ್ಯ ವಿವಾಹ(Child marriage) ದ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಕೆಲ ಹಳ್ಳಿಗಳಲ್ಲಿ ಅಲ್ಲೊಂದು, ಇಲ್ಲೊಂದು ಕೇಸ್​ಗಳು ಕೇಳಿ ಬರುತ್ತಿತ್ತು. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ(Bengaluru) ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. 

ಬೆಂಗಳೂರಿನಲ್ಲಿ ಬಾಲ್ಯ ವಿವಾಹ ಇನ್ನೂ ಜೀವಂತ; 16 ವರ್ಷದ ಬಾಲಕಿಗೆ ಒತ್ತಾಯವಾಗಿ ಮದುವೆ ಮಾಡಿಸಿರುವ ತಾಯಿ
ಬಾಲ್ಯ ವಿವಾಹ
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 04, 2024 | 9:02 PM

ಬೆಂಗಳೂರು, ಜ.04: ರಾಜ್ಯದಲ್ಲಿ ಬಾಲ್ಯ ವಿವಾಹ(Child marriage) ದ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಕೆಲ ಹಳ್ಳಿಗಳಲ್ಲಿ ಅಲ್ಲೊಂದು, ಇಲ್ಲೊಂದು ಕೇಸ್​ಗಳು ಕೇಳಿ ಬರುತ್ತಿತ್ತು. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ(Bengaluru) ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ.  ಆರ್.ಆರ್.ನಗರದ ದೇಗುಲದಲ್ಲಿ 16 ವರ್ಷದ ಬಾಲಕಿಗೆ 27 ವರ್ಷದ ಯುವಕನ ಜೊತೆ ಆಕೆಯ ತಾಯಿಯೇ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ ಘಟನೆ ನಡೆದಿದೆ.

ಮದುವೆ ಬಳಿಕ ಅಪ್ರಾಪ್ತ ಬಾಲಕಿ ಜೊತೆ ಬಲವಂತವಾಗಿ ದೈಹಿಕ‌ ಸಂಪರ್ಕ

ಮಗಳಿಗೆ ಮದುವೆ ಇಷ್ಟವಿಲ್ಲದಿದ್ದರೂ ತಾಯಿಯೇ ಬಲವಂತವಾಗಿ ವಿವಾಹ ಮಾಡಿಸಿದ್ದು, ಬಳಿಕ ಬಲವಂತವಾಗಿ ದೈಹಿಕ‌ ಸಂಪರ್ಕವಾಗಿದೆ ಎಂದು ಅಪ್ರಾಪ್ತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದಾರೆ. ಇನ್ನು ಈ ಘಟನೆ ಸಂಬಂಧ ಆರ್.ಆರ್. ನಗರ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದ್ದು, ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ:ಅತಂಕಕಾರಿ ಸಂಗತಿ: ಮಹಿಳಾ-ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ

ಬಾಗಲಕೋಟೆ ‌ಜಿಲ್ಲೆಯಲ್ಲಿ 2023 ರಲ್ಲೇ 79 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ

ಬಾಗಲಕೋಟೆ ಜಿಲ್ಲೆಯು ಒಂದು ಕಾಲದಲ್ಲಿ ಹೆಚ್​​ಐವಿ ಯಲ್ಲಿ ರಾಜ್ಯದಲ್ಲೇ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಕಾಲ ಕ್ರಮೇಣ ಆ ನಂಬರ್​ನಿಂದ ಮುಕ್ತವಾಗಿದೆ. ಆದರೆ, ಸದ್ಯ ಜಿಲ್ಲೆಯಲ್ಲಿ ಸದ್ದಿಲ್ಲದೆ ‌ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಾ ಸಾಗುತ್ತಿವೆ. ಬಡ ಮಧ್ಯಮ ವರ್ಗ, ಹಿಂದುಳಿ ವರ್ಗ ಹಾಗೂ ಎಸ್ ಸಿ ಸಮುದಾಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹಗಳು ಕಂಡು ಬರುತ್ತಿವೆ. ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಇದನ್ನು ತಡೆಯುವುದಕ್ಕೆ‌ ಜಾಗೃತಿ ಜೊತೆಗೆ ಕಠಿಣ ಕಾನೂನು ಇದ್ದರೂ ಕೂಡ ಈ ಪಿಡುಗು ನಿಲ್ಲುತ್ತಿಲ್ಲ. ಬಾಗಲಕೋಟೆ ‌ಜಿಲ್ಲೆಯಲ್ಲಿ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿ ಪ್ರಕಾರ 2023 ರಲ್ಲೇ 79 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Thu, 4 January 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ