ಬೆಂಗಳೂರು, ಜ.04: ರಾಜ್ಯದಲ್ಲಿ ಬಾಲ್ಯ ವಿವಾಹ(Child marriage) ದ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಕೆಲ ಹಳ್ಳಿಗಳಲ್ಲಿ ಅಲ್ಲೊಂದು, ಇಲ್ಲೊಂದು ಕೇಸ್ಗಳು ಕೇಳಿ ಬರುತ್ತಿತ್ತು. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ(Bengaluru) ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. ಆರ್.ಆರ್.ನಗರದ ದೇಗುಲದಲ್ಲಿ 16 ವರ್ಷದ ಬಾಲಕಿಗೆ 27 ವರ್ಷದ ಯುವಕನ ಜೊತೆ ಆಕೆಯ ತಾಯಿಯೇ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ ಘಟನೆ ನಡೆದಿದೆ.
ಮಗಳಿಗೆ ಮದುವೆ ಇಷ್ಟವಿಲ್ಲದಿದ್ದರೂ ತಾಯಿಯೇ ಬಲವಂತವಾಗಿ ವಿವಾಹ ಮಾಡಿಸಿದ್ದು, ಬಳಿಕ ಬಲವಂತವಾಗಿ ದೈಹಿಕ ಸಂಪರ್ಕವಾಗಿದೆ ಎಂದು
ಅಪ್ರಾಪ್ತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದಾರೆ. ಇನ್ನು ಈ ಘಟನೆ ಸಂಬಂಧ ಆರ್.ಆರ್. ನಗರ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದ್ದು, ತನಿಖೆ ಶುರು ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯು ಒಂದು ಕಾಲದಲ್ಲಿ ಹೆಚ್ಐವಿ ಯಲ್ಲಿ ರಾಜ್ಯದಲ್ಲೇ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಕಾಲ ಕ್ರಮೇಣ ಆ ನಂಬರ್ನಿಂದ ಮುಕ್ತವಾಗಿದೆ. ಆದರೆ, ಸದ್ಯ ಜಿಲ್ಲೆಯಲ್ಲಿ ಸದ್ದಿಲ್ಲದೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಾ ಸಾಗುತ್ತಿವೆ. ಬಡ ಮಧ್ಯಮ ವರ್ಗ, ಹಿಂದುಳಿ ವರ್ಗ ಹಾಗೂ ಎಸ್ ಸಿ ಸಮುದಾಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹಗಳು ಕಂಡು ಬರುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದನ್ನು ತಡೆಯುವುದಕ್ಕೆ ಜಾಗೃತಿ ಜೊತೆಗೆ ಕಠಿಣ ಕಾನೂನು ಇದ್ದರೂ ಕೂಡ ಈ ಪಿಡುಗು ನಿಲ್ಲುತ್ತಿಲ್ಲ. ಬಾಗಲಕೋಟೆ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿ ಪ್ರಕಾರ 2023 ರಲ್ಲೇ 79 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:57 pm, Thu, 4 January 24