‘ಸ್ಪೈನಲ್ ಮಸ್ಕ್ಯೂಲರ್ ಆಟ್ರೋಫಿ’ ಕಾಯಿಲೆಯಿಂದ ಬಳಲುತ್ತಿರುವ ಮಗು: ಸಿಎಂ ತಪ್ಪು ಮಾಹಿತಿ ಹರಡಿದ್ದಾರೆ ಎಂದ ತೇಜಸ್ವಿ ಸೂರ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 02, 2023 | 3:27 PM

‘ಸ್ಪೈನಲ್ ಮಸ್ಕ್ಯೂಲರ್ ಆಟ್ರೋಫಿ’ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸಾ ನೆರವಿಗೆ ಬರುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ವಿಚಾರವಾಗಿ ಇದೀಗ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದು, ಅಪರೂಪದ ಕಾಯಿಲೆಗಳ ಔಷಧ ಬಗ್ಗೆ ಸಿಎಂ ತಪ್ಪು ಮಾಹಿತಿ ಹರಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

‘ಸ್ಪೈನಲ್ ಮಸ್ಕ್ಯೂಲರ್ ಆಟ್ರೋಫಿ’ ಕಾಯಿಲೆಯಿಂದ ಬಳಲುತ್ತಿರುವ ಮಗು: ಸಿಎಂ ತಪ್ಪು ಮಾಹಿತಿ ಹರಡಿದ್ದಾರೆ ಎಂದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ
Follow us on

ಬೆಂಗಳೂರು, ನವೆಂಬರ್​​ 02: ‘ಸ್ಪೈನಲ್ ಮಸ್ಕ್ಯೂಲರ್ ಆಟ್ರೋಫಿ’ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸಾ ನೆರವಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ಔಷಧ ಮೇಲಿನ ಆಮದು ಸುಂಕ ವಿನಾಯಿತಿಗೆ ಮನವಿ ಮಾಡಿದ್ದರು. ಆದರೆ ಇದೀಗ ಈ ಅಪರೂಪದ ಕಾಯಿಲೆಗಳ ಔಷಧ ಬಗ್ಗೆ ಸಿಎಂ ಸಿದ್ದರಾಮಯ್ಯ ತಪ್ಪು ಮಾಹಿತಿ ಹರಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ (Tejaswi Surya) ತಿರುಗೇಟು ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡುರುವ ಸಂಸದ ತೇಜಸ್ವಿ ಸೂರ್ಯ, 2021ರಲ್ಲೇ ‘ಸ್ಪೈನಲ್ ಮಸ್ಕ್ಯೂಲರ್ ಆಟ್ರೋಫಿ’ ಔಷಧ ಮೇಲಿನ ಆಮದು ಸುಂಕವನ್ನ ಕೇಂದ್ರ ತೆಗೆದು ಹಾಕಿದೆ. ಈ ಎಲ್ಲಾ ಮಾಹಿತಿ ಸಾರ್ವಜನಿಕ ವೇದಿಕೆಯಲ್ಲಿದೆ. ಸಿಎಂ ಕಚೇರಿ ಹೆಚ್ಚು ಜವಾಬ್ದಾರರಾಗಿರಬೇಕು. ಇಂತಹ ಸೂಕ್ಷ್ಮ ವಿಷಯಗಳಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸಬಾರದು ಎಂದು ಕಿಡಿಕಾರಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​

ಒಂದು ವಾರದ ಹಿಂದೆ ನಾನು ಬೇಬಿ ಮೌರ್ಯ ಅವರನ್ನು ಭೇಟಿಯಾಗಿದ್ದೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸೌಲಭ್ಯ ಕೊಡಿಸುವುದಾಗಿ ಭರವಸೆ ನೀಡಿರುವೆ. PMNRF ಅಡಿಯಲ್ಲಿ ಸಹಾಯ ಮಾಡುವಂತೆ ನಾನು ಮನವಿ ಮಾಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಮಗಳ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂಗೆ ಧನ್ಯವಾದ ಸಲ್ಲಿಸಿದ ತಂದೆ

ರಾಜ್ಯದ ಸಿಎಂ ಕೂಡ ಸಿಎಂಆರ್‌ಎಫ್ ಮೂಲಕ ಮಗುವಿಗೆ ಸಹಾಯ ಮಾಡುವ ಸ್ಥಿತಿಯಲ್ಲಿದ್ದಾರೆ. ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಜೀವಕ್ಕೆ ಸಂಬಂಧಿಸಿದಂತೆ ರಾಜಕೀಯ ಮಾಡುವ ಬದಲು, ಸಿಎಂ ಸಿಎಂಆರ್‌ಎಫ್ ಅಡಿಯಲ್ಲಿ ಮೊತ್ತವನ್ನು ಮಂಜೂರು ಮಾಡಿದ್ದರೆ ಸಹಕಾರಿಯಾಗುತ್ತಿತ್ತು ಎಂದು ವಾಗ್ದಾಳಿ ಮಾಡಿದ್ದಾರೆ.

‘ಸ್ಪೈನಲ್ ಮಸ್ಕ್ಯೂಲರ್ ಆಟ್ರೋಫಿ’ ಎಂಬ ವಿಶೇಷ ಕಾಯಿಲೆಯಿಂದ ಬಳಲುತ್ತಿರುವ ಮೌರ್ಯ ಕಾಯಿಲೆ ಗುಣಪಡಿಸಲು ಝೋಲ್ಗೆನ್​ಸ್ಮ ಚುಚ್ಚುಮದ್ದು ಅಗತ್ಯವಿದೆ. ವಿದೇಶದಿಂದ ಚುಚ್ಚುಮದ್ದು ಆಮದು ಮಾಡಿಕೊಳ್ಳಲು 17.5 ಕೋಟಿ ಅಗತ್ಯವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.