ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು: ಹೆಚ್​ಡಿ ಕುಮಾರಸ್ವಾಮಿ

| Updated By: preethi shettigar

Updated on: Mar 28, 2022 | 9:45 AM

ಕಳೆದ ಕೆಲ ದಿನಗಳಲ್ಲಿ ಉಂಟಾದ ಅಹಿತಕರ ಘಟನೆಗಳ ಬಗ್ಗೆ ಮಕ್ಕಳು ತಲೆಕೆಡಿಸಿಕೊಳ್ಳುವುದು ಬೇಡ. ಭವಿಷ್ಯ ಮುಖ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು. ಪೋಷಕರು ಕೂಡ ನಿರ್ಲಕ್ಷ್ಯ ಮಾಡಬಾರದು. ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ ಎಂದು ಹೆಚ್​ಡಿಕೆ ಟ್ವೀಟ್​ ಮಾಡಿದ್ದಾರೆ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು: ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us on

ಬೆಂಗಳೂರು: ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam) ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂಬುದು ನನ್ನ ಕಳಕಳಿ ಎಂದು ಟ್ವೀಟ್ (Tweet)​ ಮೂಲಕ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ಶುಭ ಹಾರೈಸಿದ್ದಾರೆ.

ಕಳೆದ ಕೆಲ ದಿನಗಳಲ್ಲಿ ಉಂಟಾದ ಅಹಿತಕರ ಘಟನೆಗಳ ಬಗ್ಗೆ ಮಕ್ಕಳು ತಲೆಕೆಡಿಸಿಕೊಳ್ಳುವುದು ಬೇಡ. ಭವಿಷ್ಯ ಮುಖ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು. ಪೋಷಕರು ಕೂಡ ನಿರ್ಲಕ್ಷ್ಯ ಮಾಡಬಾರದು. ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ ಎಂದು ಹೆಚ್​ಡಿಕೆ ಟ್ವೀಟ್​ ಮಾಡಿದ್ದಾರೆ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆ ತಪ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಮಕ್ಕಳ ಭಾವನೆಗಳನ್ನು ಗೌರವಿಸಿ ಉಂಟಾಗಿರುವ ತ್ವೇಷಮಯ ವಾತಾವರಣವನ್ನು ತಿಳಿಗೊಳಿಸುವ ಸಂದರ್ಭ ಬಂದೇ ಬರುತ್ತದೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ. ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಕೇವಲ ಕಾಗದ ಮೇಲೆ ಅಥವಾ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣುಮಗುವಿಗೆ ಶಿಕ್ಷಣ ಕೊಡದಿದ್ದರೆ ದೇಶವನ್ನು ಕತ್ತಲೆಗೆ ದೂಡಿದಂತೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಹೆಚ್​.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ಶುಭ ಹಾರೈಕೆಗಳು. ವಿದ್ಯಾರ್ಥಿಗಳೇ, ಇದೊಂದು ಕಲಿಕೆಯ ಪ್ರಮುಖ ಘಟ್ಟ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಾವುದೇ ಗೊಂದಲಗಳಿಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಎದುರಿಸಿ, ಶುಭವಾಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ:

ಸಿದ್ದರಾಮಯ್ಯ ಮಾತ್ರ ಬ್ರಿಲಿಯಂಟ್ ಅಲ್ಲಾ ತಲೆಲಿ ಕೂದಲು ಉದುರಿದೆಯಾದ್ರು ನನಗೂ ಜ್ಞಾಪಕ ಶಕ್ತಿ ಇದೆ: ಹೆಚ್​ಡಿ ಕುಮಾರಸ್ವಾಮಿ

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

Published On - 9:34 am, Mon, 28 March 22