AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ

ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಘಟನೆ ಸಂಭಂದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸಿಎಟಿ ಮಂಗಳವಾರ ರದ್ದುಪಡಿಸಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ (ಸಂಗ್ರಹ ಚಿತ್ರ)
Ramesha M
| Edited By: |

Updated on:Jul 01, 2025 | 11:40 AM

Share

ಬೆಂಗಳೂರು, ಜುಲೈ 1: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ (Chinnaswamy Stampede) ಸಂಬಂಧ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿದೆ. ಅಲ್ಲದೆ, ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು.

ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದ ವಿಕಾಸ್ ಕುಮಾರ್

ಆರ್​ಸಿಬಿ ಐಪಿಎಲ್ ಗೆಲುವನ್ನು ಸಂಭ್ರಮಿಸಲು ಜೂನ್ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಹಾಗೂ ನೆಚ್ಚಿನ ಆಟಗಾರರನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ವಿಕಾಸ್​ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು.

ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಜಿ ಹೆಚ್ಚುವರಿ ಕಾಲಾವಕಾಶ ಕೋರಿದ್ದರು. ಅದರಂತೆ ವಿಚಾರಣೆ ಮುಂದೂಡಲಾಗಿತ್ತು.

ಇದನ್ನೂ ಓದಿ
Image
ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ!
Image
ನೈಸ್ ರಸ್ತೆ ಟೋಲ್ ದರ ಹೆಚ್ಚಳ: ಇಲ್ಲಿದೆ ಪರಿಷ್ಕೃತ ದರ ಪಟ್ಟಿ
Image
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್​ನಲ್ಲಿ ಅಗ್ನಿ ಅವಘಡ
Image
ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದ ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ

ಇದೀಗ, ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿರುವುದರಿಂದ, ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಇತರರ ಅಮಾನತು ಆದೇಶ ಏನಾಗಲಿದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್​ ಅಧಿಕಾರಿ ಅರ್ಜಿ

ಮತ್ತೊಂದೆಡೆ, ಘಟನೆಯ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಘಟನೆ ಸಂಬಂಧ ಆರ್​ಸಿಬಿ ಮಾರ್ಕೆಟಿಂಗ್​ ಹೆಡ್​​ ನಿಖಿಲ್ ಸೋಸಲೆ, ಸುನಿಲ್‌ ಮ್ಯಾಥ್ಯೂ, ಕಿರಣ್, ಶಮಂತ್ ಅವರನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಂಧಿತರನ್ನು ಕಸ್ಟಡಿಗೆ ಒಪ್ಪಿಸಲು ನಿರಾಕರಿಸಿದ್ದ ನ್ಯಾಯಾಲಯ, ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಈ ವಿಚಾರದಲ್ಲೂ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Tue, 1 July 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ