AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಬಂಧಿತರ ವಿಚಾರಣೆ ವೇಳೆ ಗೊತ್ತಾಗಿದ್ದೇನು? ಸಿಐಡಿ ಮುಂದಿನ ನಡೆಯೇನು? ಇಲ್ಲಿದೆ ವಿವರ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಆರ್​​ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಯವರನ್ನು ವಿಚಾರಣೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾದ ಸಂದೇಶಗಳ ಬಗ್ಗೆ ಪ್ರಶ್ನಿಸಲಾಗಿದೆ. ಸೋಸಲೆ ಅವರು ಯಾವುದೇ ಪೋಸ್ಟ್ ಮಾಡಿಲ್ಲ ಎಂದು ಹೇಳಿದ್ದಾರೆ. ಪೊಲೀಸ್ ತನಿಖೆಯ ಈವರೆಗಿನ ಅಪ್​ಡೇಟ್ ಇಲ್ಲಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಬಂಧಿತರ ವಿಚಾರಣೆ ವೇಳೆ ಗೊತ್ತಾಗಿದ್ದೇನು? ಸಿಐಡಿ ಮುಂದಿನ ನಡೆಯೇನು? ಇಲ್ಲಿದೆ ವಿವರ
ಸಿಐಡಿ & ನಿಖಿಲ್ ಸೋಸಲೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 07, 2025 | 1:44 PM

Share

ಬೆಂಗಳೂರು, ಜೂನ್ 7: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ  (Chinnaswamy Stadium Stampede) ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ ವಿಚಾರಣೆ ನಡೆಸಲಾಗಿದ್ದು, ಕಾಲ್ತುಳಿತದಿಂದ ಸಾವು ಸಂಬಂಧಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಪ್ರಕಟಿಸಿದ್ದು ಯಾರು ಎಂಬ ಬಗ್ಗೆ ಪ್ರಶ್ನಿಸಲಾಗಿದೆ. ಸಾವಿನ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ ಎಂದು ಸೋಸಲೆ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ. ವಿಜಯೋತ್ಸವ ಮೆರವಣಿಗೆ ಹಾಗೂ ಉಚಿತ ಪಾಸ್ ಸಂಬಂಧ ಟ್ವೀಟ್ ಮಾಡಿದ್ದು ಯಾರು ಎಂಬುದನ್ನೂ ಪ್ರಶ್ನಿಸಲಾಗಿದೆ. ಅದೂ ಸಹ ತಾವಲ್ಲ ಎಂದು ಸೋಸಲೆ ಉತ್ತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆ ಎರಡು ಟ್ವೀಟ್ ಆಗಿದ್ದ ವೇಳೆ ತಾವು ಅಹಮದಾಬಾದ್​​ನಲ್ಲಿ ಇದ್ದುದಾಗಿಯೂ ಆರ್​ಸಿಬಿ ಆಟಗಾರರ ಒಟ್ಟಿಗೆ ಇದ್ದುದಾಗಿಯೂ ಸೋಸಲೆ ಹೇಳಿದ್ದಾರೆ. ತಮಗೂ ಆ ಟ್ವೀಟ್​ಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

ಆರ್​​ಸಿಬಿ ವತಿಯಿಂದ ಚಿನ್ನಸ್ವಾಮಿ ಸ್ಟೇಡಿಯಂಗೆ ಉಚಿತ ಪಾಸ್ ನೀಡಲಾಗುತ್ತದೆ ಮತ್ತು ವಿಜಯೋತ್ಸವ ಮೆರವಣಿಗೆ ಇದೆ ಎಂದು ನಿಖಿಲ್ ಸೋಸಲೆ ಟ್ವೀಟ್ ಮಾಡಿದ್ದರು ಎನ್ನಲಾಗಿತ್ತು. ನಂತರ ಆ ಟ್ವೀಟ್​​ಗಳನ್ನು ಅಳಿಸಿಹಾಕಲಾಗಿತ್ತು.

ಇದನ್ನೂ ಓದಿ
Image
ಬೆಂಗಳೂರು ಕಾಲ್ತುಳಿತ: ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
Image
ವಿಧಾನಸೌಧ ಮುಂದೆ RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ
Image
Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ
Image
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

ಉತ್ತರ ಸಿಗದ ಪ್ರಶ್ನೆಗಳು…

ನಿಖಿಲ್ ಸೋಸಲೆ ಮಾಡಿಲ್ಲ ಎಂದಾದರೆ ಆ ಪೋಸ್ಟ್​​ಗಳನ್ನು ಪ್ರಕಟಿಸಿದವರು ಯಾರು? ಪೋಸ್ಟ್ ಮಾಡಲು ಹೇಳಿದ್ದು ಯಾರಾಗಿರಬಹುದು? ಎಲ್ಲಿಂದ ಅಪ್​​ಲೋಡ್ ಆಯಿತು? ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆಗೆ ಮಾಡಲಿದ್ದಾರೆ. ಜೊತೆಗೆ, ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡುವವರು ಯಾರು? ಇಂತಹ ಪೋಸ್ಟ್ ಗಳನ್ನು ಹಾಕುವಾಗ ಅವರಿಗೆ ಯಾರು ಅನುಮತಿ ಕೊಡಬೇಕು? ಈ ಎಲ್ಲಾ ಅಂಶಗಳನ್ನು ಇಟ್ಟುಕೊಂಡು ಸಿಐಡಿ ತನಿಖೆ ನಡೆಸಲಿದೆ.

ಕೆಎಸ್​ಸಿಎ ಆಡಳಿತ ಮಂಡಳಿ ವಿಚಾರಣೆಗೆ ಸಿಐಡಿ ಸಿದ್ಧತೆ

ಕೆಎಸ್​ಸಿಎ ಆಡಳಿತ ಮಂಡಳಿಯವರ ವಿಚಾರಣೆಯನ್ನೂ ಸಿಐಡಿ ನಡೆಸಲಿದೆ. ನೊಟೀಸ್ ಕೊಟ್ಟು ವಿಚಾರಣೆ ನಡೆಸಸಲಾಗುವುದು ಎಂದು ಸಿಐಡಿ ಮೂಲಗಳು ತಿಳಿಸಿವೆ. ಕೆಎಸ್​ಸಿಎ ಅಧ್ಯಕ್ಷ ರಘುರಾಮ್ ಭಟ್, ಗೌರವ ಅಧ್ಯಕ್ಷ ಶ್ರೀರಾಮ್ ಹಾಗೂ ಕಾರ್ಯದರ್ಶಿ ಎ ಶಂಕರ್​​ಗೆ ಸಿಐಡಿ ನೊಟೀಸ್ ನೀಡಲಿದೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ನೈತಿಕ ಹೊಣೆ ಹೊತ್ತು ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಆದೇಶಿಸಿದ್ದರಿಂದ ಕೆಎಸ್​ಸಿಎ ಆಡಳಿತ ಮಂಡಳಿಯವರು ಸದ್ಯ ನಿರಾಳರಾಗಿದ್ದಾರೆ. ಆದರೆ, ಪೊಲೀಸರ ತನಿಖೆಗೆ ಸಹಕರಿಸಬೇಕು. ಬೆಂಗಳೂರು ಬಿಟ್ಟು ಹೋಗದಂತೆ ಹೈಕೋರ್ಟ್ ಆದೇಶದಲ್ಲಿ ತಿಳಿಸಲಾಗಿದೆ. ಹೀಗಾಗಿ ದಿಗ್ಗಜರ ವಿಚಾರಣೆಗೆ ಸಿಐಡಿ ಮುಂದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Sat, 7 June 25

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?