AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಬಿ. ದಯಾನಂದ ಅವರು 2025ರ ಸೆಪ್ಟೆಂಬರ್ 8ರಂದು ತಮ್ಮ ಲಿಖಿತ ಸಮರ್ಥನೆ ಸಲ್ಲಿಸಿ, ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿಹಾಕಿ, ಆರೋಪಗಳಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದ್ದರು. ಅವರ ಸಮರ್ಥನೆ ಹಾಗೂ ಆಡಳಿತ ಇಲಾಖೆಯ ಅಭಿಪ್ರಾಯವನ್ನು ಪರಿಶೀಲಿಸಿದ ಬಳಿಕ, ಸಮರ್ಥ ಪ್ರಾಧಿಕಾರ ಇಲಾಖಾ ವಿಚಾರಣೆಯನ್ನು ಕೈಬಿಡಲು ತೀರ್ಮಾನಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ
ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ
ಪ್ರಸನ್ನ ಹೆಗಡೆ
|

Updated on:Jul 14, 2026 | 9:55 PM

Share

ಬೆಂಗಳೂರು, ಜುಲೈ 14: ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ತಂಡದ ಐಪಿಎಲ್​​ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರ ವಿರುದ್ಧ ಹೊರಿಸಲಾಗಿದ್ದ ಆರೋಪಗಳಿಂದ  ಖುಲಾಸೆಗೊಳಿಸಲಾಗಿದೆ.

ಈ ಹಿಂದೆ ಸರ್ಕಾರದ ಆದೇಶದಂತೆ, ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ ಅವರನ್ನು ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 3(1)(a) ಅಡಿಯಲ್ಲಿ ಇಲಾಖಾ ವಿಚಾರಣೆ ಆರಂಭಿಸುವ ಉದ್ದೇಶದಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ನಿಯಮ 3(7)(c) ಅಡಿಯಲ್ಲಿ ಅಮಾನತು ಆದೇಶವನ್ನು ಹಿಂಪಡೆದು, ನಿಯಮ 8ರ ಅಡಿಯಲ್ಲಿ ಇಲಾಖಾ ವಿಚಾರಣೆ ಪ್ರಾರಂಭಿಸಲಾಗಿತ್ತು. ಈ ಸಂಬಂಧ ನಿಯಮ 8(4)ರ ಅಡಿಯಲ್ಲಿ ಆರೋಪಪಟ್ಟಿ ಮತ್ತು ಶೋಕಾಸ್ ನೋಟಿಸ್ ನೀಡಲಾಗಿತ್ತು.

ಇದನ್ನೂ ಓದಿ:  ದಯಾನಂದ್ ಮಾಡಿದ ತಪ್ಪೇನು?; ಅಮಾನತಿಗೆ ಕಾರಣ ನೀಡಿದ ಸರ್ಕಾರ

ಲಿಖಿತ ಸಮರ್ಥನೆ ಸಲ್ಲಿಸಿದ್ದ ಬಿ. ದಯಾನಂದ

ಬಿ. ದಯಾನಂದ ಅವರು 2025ರ ಸೆಪ್ಟೆಂಬರ್ 8ರಂದು ತಮ್ಮ ಲಿಖಿತ ಸಮರ್ಥನೆ ಸಲ್ಲಿಸಿ, ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿಹಾಕಿ, ಆರೋಪಗಳಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದ್ದರು. ಅವರ ಸಮರ್ಥನೆ ಹಾಗೂ ಆಡಳಿತ ಇಲಾಖೆಯ ಅಭಿಪ್ರಾಯವನ್ನು ಪರಿಶೀಲಿಸಿದ ಬಳಿಕ,  2026ರ ಜುಲೈ 14ರಂದು ಹೊರಡಿಸಿದ ಸರ್ಕಾರದ ಆದೇಶದಲ್ಲಿ, ಬಿ. ದಯಾನಂದ ವಿರುದ್ಧ ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 8(4)ರ ಅಡಿಯಲ್ಲಿ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ಮುಕ್ತಾಯಗೊಳಿಸಲಾಗಿದೆ. ಜೊತೆಗೆ ಅವರ ವಿರುದ್ಧದ ಎಲ್ಲ ಆರೋಪಗಳಿಂದ ಸಂಪೂರ್ಣವಾಗಿ ಖುಲಾಸೆಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-4) ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್.  ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:49 pm, Tue, 14 July 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ