ಮುರುಘಾ ಶ್ರೀ ವಿರುದ್ಧ ಷಡ್ಯಂತರ ಪ್ರಕರಣ; ತನಿಖೆ ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎನ್ನುವ ಆರೋಪ ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಕೇಳಿಬಂದಿತ್ತು. ಆದರೆ ಪ್ರಕರಣ ಸಂಬಂಧ ಪೊಲೀಸರು ಸಮರ್ಪಕ ತನಿಖೆ ನಡೆಸದೇ ಅಸಹಾಯಕರಾಗಿದ್ದಾರೆ ಎಂದು ಬಸವಪ್ರಭು ಸ್ವಾಮೀಜಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಮುರುಘಾ ಶ್ರೀ ವಿರುದ್ಧ ಷಡ್ಯಂತರ ಪ್ರಕರಣ; ತನಿಖೆ ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಮುರುಘಾ ಶ್ರೀ (ಎಡಚಿತ್ರ) ಮತ್ತು ಕರ್ನಾಟಕ ಹೈಕೋರ್ಟ್ (ಬಲ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Jan 30, 2023 | 5:58 PM

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ (Murugha Mutt Sri Shivamurthy Murugha Sharanaru) ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪ ಸಂಬಂಧ ಪೊಲೀಸರು ಸಮರ್ಪಕ ತನಿಖೆ ನಡೆಸದೇ ಅಸಹಾಯಕರಾಗಿದ್ದಾರೆ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ತನಿಖೆ ವರ್ಗಾಯಿಸಲು ಕೋರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (Karnataka High Court), ರಾಜ್ಯಸರ್ಕಾರದ ಪ್ರತಿಕ್ರಿಯೆ ಕೇಳಿ ಫೆಬ್ರವರಿ 6ಕ್ಕೆ ವಿಚಾರಣೆಯನ್ನು ಮುಂದೂಡಿತು. ಪೊಲೀಸರು ಸಮರ್ಪಕ ತನಿಖೆ ನಡೆಸದೆ ಅಸಹಾಯಕರಾಗಿದ್ದಾರೆ. ತನಿಖೆಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ವರ್ಗಾಯಿಸಿ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯಿಂದ ತನಿಖೆ ನಡೆಸುವಂತೆ ಬಸವಪ್ರಭು ಸ್ವಾಮೀಜಿ ರಿಟ್ ಅರ್ಜಿಯಲ್ಲಿ ಕೋರಿದ್ದರು.

ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ ಹಾಗೂ ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪದ ಮೇಲೆ ಬಸವರಾಜನ್‌ ಹಾಗೂ ಸೌಭಾಗ್ಯ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನ.9 ರಂದು ದೂರು ದಾಖಲಾಗಿದ್ದು, ಮರುದಿನ ಅಂದರೆ ನ.10 ರಂದು ಬಸವರಾಜನ್‌ ಅವರನ್ನು ಬಂಧಿಸಲಾಗಿತ್ತು. ಆದರೆ, ಸೌಭಾಗ್ಯ ತಲೆ ಮರೆಸಿಕೊಂಡಿದ್ದರು. ಬಳಿಕ ಡಿಸೆಂಬರ್ 16ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸೌಭಾಗ್ಯ ಅವರನ್ನು ದಾವಣಗೆರೆಯಲ್ಲಿ ಬಂಧಿಸಿದ್ದರು.

ಇದನ್ನೂ ಓದಿ: Santro Ravi: ಮುರುಘಾ ಶ್ರೀ ಪರ ನಿಂತಿದ್ದ ಸ್ಯಾಂಟ್ರೋ ರವಿ ಒಡನಾಡಿ ಸ್ಟ್ಯಾನ್ಲಿಗೆ ಏನು ಮಾಡಿದ್ಧ ಗೊತ್ತಾ?

ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಸವಪ್ರಭು ಸ್ವಾಮೀಜಿ ಅವರು ಎಸ್.ಕೆ.ಬಸವರಾಜನ್‌ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಬಸವರಾಜನ್​ಗೆ ಚಿತ್ರದುರ್ಗದ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಅವರು ಹೈಕೋರ್ಟ್​ಗೆ ಜಾಮೀನಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಡಿ.22ರಂದು ಬಸವರಾಜನ್​ಗೆ ಜಾಮೀನು ಮಂಜೂರು ಮಾಡಿತು.

ಮಾಜಿ ಶಾಸಕರಾಗಿರುವ ಬಸವರಾಜನ್ ಅವರು ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಇವರು ಒಮ್ಮೆ ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ತದನಂತರ 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಇವರ ಪತ್ನಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ