ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು.

ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
Edited By:

Updated on: Jun 26, 2022 | 7:23 PM

ಬೆಂಗಳೂರು: ಇಂದು ನಡೆದ ಚಿತ್ರಕಲಾ ಪರಿಷತ್ತು(2022-23 ರಿಂದ 2024-25) (Chitrakala Parishath Election)ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರುಗಳಿಗೆ ನಡೆದ ಚುನಾವಣೆಯಲ್ಲಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಆಯ್ಕೆ ಮಾಡಲಾಗಿದೆ. ಹಾಗೂ ಚಿತ್ರಕಲಾ ಪರಿಷತ್ನ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ, ಟಿ.ಪ್ರಭಾಕರ್, ಎ.ರಾಮಕೃಷ್ಣಪ್ಪ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎನ್.ಶಶಿಧರ್, ಸಹಾಯಕ ಕಾರ್ಯದರ್ಶಿಯಾಗಿ ಟಿ.ಚಂದ್ರಶೇಖರ್, ಬಿ.ಎಲ್.ಶ್ರೀನಿವಾಸ್ ಹಾಗೂ ಚಿತ್ರಕಲಾ ಪರಿಷತ್ ಖಜಾಂಚಿಯಾಗಿ ಡಾ.ಎನ್.ಲಕ್ಷ್ಮೀಪತಿ ಬಾಬು ಆಯ್ಕೆ ಆಗಿದ್ದಾರೆ.

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ಪರಿಷತ್ತಿನ ಆವರಣದಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಮತ ದಾನ ನಡೆಯಿತು. ಬಳಿಕ ಸಂಜೆ 4 ಗಂಟೆ ವೇಳೆಗೆ ಫಲಿತಾಂಶ ಘೋಷಣೆಯಾಗಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ: ರಾಜ್ಯದ ವಿವಿಧೆಡೆ ಪೊಲೀಸರಿಂದ ಗಾಂಜಾ ನಾಶ

Published On - 7:23 pm, Sun, 26 June 22