ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ

ಜನವರಿ 5 ರಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ 22ನೇ ವಾರ್ಷಿಕ ಚಿತ್ರಸಂತೆಯನ್ನು ಕರ್ನಾಟಕ ಚಿತ್ರಕಲಾ ಪರಿಷತ್​​ ಆಯೋಜನೆ ಮಾಡಿದೆ. ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ ಈ ಕಾರ್ಯಕ್ರಮದಲ್ಲಿ 20 ರಾಜ್ಯಗಳಿಂದ 3,177 ಕಲಾವಿದರು ಭಾಗವಹಿಸಲಿದ್ದಾರೆ. ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣು ಮಕ್ಕಳಿಗೆ ಸಮರ್ಪಿಸಲಾಗಿದೆ. ಬಿಎಂಟಿಸಿ ಬಸ್ ಸೌಲಭ್ಯವೂ ಲಭ್ಯವಿರುತ್ತದೆ.

ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ
ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Dec 28, 2024 | 3:37 PM

ಬೆಂಗಳೂರು, ಡಿಸೆಂಬರ್​ 28: ನಗರದ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಕರ್ನಾಟಕ ಚಿತ್ರಕಲಾ ಪರಿಷತ್​​ನಿಂದ 22ನೇ ಚಿತ್ರಸಂತೆ (Chitrasante) ಆಯೋಜನೆ ಮಾಡಲಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಚಿತ್ರಸಂತೆ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9ರವರೆಗೆ ನಡೆಯಲಿರುವ ಚಿತ್ರಸಂತೆಯಲ್ಲಿ 20 ರಾಜ್ಯಗಳ ಕಲಾವಿದರ ಕಲಾಕೃತಿಗಳ ಅನಾವರಣಗೊಳ್ಳಲಿದೆ. ಚಿತ್ರಸಂತೆಯಲ್ಲಿ ಭಾಗವಹಿಸಲು 3,177 ಕಲಾವಿದರಿಂದ ಅರ್ಜಿ ಸಲ್ಲಿಸಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರ ಸಂತೆ ಸಮರ್ಪಣೆ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಚಿತ್ರಸಂತೆ ಈಗಾಗಲೇ ಸಾಕಷ್ಟು ಜನಪ್ರಿಯ ಗಳಿಸಿದೆ. ಸಾಕಷ್ಟು ಕಲಾವಿದರು ಈ ಚಿತ್ರಸಂತೆಗಾಗಿ ಕಾಯುತ್ತಿರುತ್ತಾರೆ. ಇನ್ನು ಪ್ರತಿವರ್ಷ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಯುವುದರಿಂದ ಜನವರಿ 5ರಂದು ಅದಕ್ಕೆ ಮೀಸಲಾಗಿರುತ್ತದೆ. ಪರ್ಯಾಯ ಮಾರ್ಗಗಳನ್ನು ಸಂಚಾರಿ ಪೊಲೀಸರು ಸೂಚಿಸುತ್ತಾರೆ.

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್​​ ಶಂಕರ್ ಹೇಳಿದ್ದಿಷ್ಟು

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್​​ ಶಂಕರ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, 22ನೇ ವರ್ಷದ ಚಿತ್ರಸಂತೆ ಕಾರ್ಯಕ್ರಮ ಜ. 5ರಂದು ನಡೆಯಲಿದೆ. ಹೆಣ್ಣು ಮಗು ಶೋಷಣೆ ಆಗುತ್ತಿರುವ ಹಿನ್ನೆಲೆ ಈ ಬಾರಿಯ ಚಿತ್ರಸಂತೆಯನ್ನ ಹೆಣ್ಣು ಮಗುವಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: New Year: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ​, ವಾಹನ ನಿಲುಗಡೆ ನಿಷೇಧ

ಹೆಣ್ಣು ಗಂಡುಗೆ ಸಮಾನವಾದ ಹಕ್ಕು ಇದೆ. ಈ ಚಿತ್ರಸಂತೆ ಕಾರ್ಯಕ್ರಮದಲ್ಲಿ ಜನವರಿ 4 ರಂದು ಪ್ರಶಸ್ತಿ ನೀಡಲಾಗುತ್ತದೆ. 5 ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನವೆಂಬರ್​​ನಲ್ಲೇ ಕರ್ನಾಟಕ ಚಿತ್ರಕಲಾ ಪರಿಷತ್ತು 2025ರ ಚಿತ್ರಸಂತೆಗೆ ಕಲಾವಿದರಿಂದ ಅರ್ಜಿಗಳಿಗೆ ಆಹ್ವಾನಿಸಲಾಗಿತ್ತು. ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ಪಂಜಾಬ್, ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಚಿತ್ರಸಂತೆಯಲ್ಲಿ ಭಾಗಿಯಾಗಲು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಹೊಸ ವರ್ಷದ ಸಂಭ್ರಮಾಚರಣೆಗೆ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಇನ್ನು ಚಿತ್ರಸಂತೆ ಹಿನ್ನೆಲೆ ಜನವರಿ 5 ರಂದು ಕಲಾಭಿಮಾನಿಗಳು ಮತ್ತು ಪ್ರಯಾಣಿಕರು ಸುಲಭವಾಗಿ ಸ್ಥಳವನ್ನು ತಲುಪುವ ನಿಟ್ಟಿನಲ್ಲಿ ಕುಮಾರ ಕೃಪಾ ರಸ್ತೆಗೆ ಬಿಎಂಟಿಸಿ ಬಸ್​ಗಳು ಕೂಡ ಸಂಚರಿಸಲಿವೆ. ಪ್ರತಿ 10 ನಿಮಿಷಗಳಿಗೊಮ್ಮೆ ಬಸ್​​ಗಳಿದ್ದು, ಆ ದಿನದಂದು ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಲಿವೆ. 15 ರೂ. ಟಿಕೆಟ್​ ದರದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ