ಬೆಂಗಳೂರು, ಡಿಸೆಂಬರ್ 28: ನಗರದ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಕರ್ನಾಟಕ ಚಿತ್ರಕಲಾ ಪರಿಷತ್ನಿಂದ 22ನೇ ಚಿತ್ರಸಂತೆ (Chitrasante) ಆಯೋಜನೆ ಮಾಡಲಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಚಿತ್ರಸಂತೆ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9ರವರೆಗೆ ನಡೆಯಲಿರುವ ಚಿತ್ರಸಂತೆಯಲ್ಲಿ 20 ರಾಜ್ಯಗಳ ಕಲಾವಿದರ ಕಲಾಕೃತಿಗಳ ಅನಾವರಣಗೊಳ್ಳಲಿದೆ. ಚಿತ್ರಸಂತೆಯಲ್ಲಿ ಭಾಗವಹಿಸಲು 3,177 ಕಲಾವಿದರಿಂದ ಅರ್ಜಿ ಸಲ್ಲಿಸಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರ ಸಂತೆ ಸಮರ್ಪಣೆ ಮಾಡಲಾಗುತ್ತಿದೆ.
ಬೆಂಗಳೂರಿನಲ್ಲಿ ಚಿತ್ರಸಂತೆ ಈಗಾಗಲೇ ಸಾಕಷ್ಟು ಜನಪ್ರಿಯ ಗಳಿಸಿದೆ. ಸಾಕಷ್ಟು ಕಲಾವಿದರು ಈ ಚಿತ್ರಸಂತೆಗಾಗಿ ಕಾಯುತ್ತಿರುತ್ತಾರೆ. ಇನ್ನು ಪ್ರತಿವರ್ಷ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಯುವುದರಿಂದ ಜನವರಿ 5ರಂದು ಅದಕ್ಕೆ ಮೀಸಲಾಗಿರುತ್ತದೆ. ಪರ್ಯಾಯ ಮಾರ್ಗಗಳನ್ನು ಸಂಚಾರಿ ಪೊಲೀಸರು ಸೂಚಿಸುತ್ತಾರೆ.
ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್ ಶಂಕರ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, 22ನೇ ವರ್ಷದ ಚಿತ್ರಸಂತೆ ಕಾರ್ಯಕ್ರಮ ಜ. 5ರಂದು ನಡೆಯಲಿದೆ. ಹೆಣ್ಣು ಮಗು ಶೋಷಣೆ ಆಗುತ್ತಿರುವ ಹಿನ್ನೆಲೆ ಈ ಬಾರಿಯ ಚಿತ್ರಸಂತೆಯನ್ನ ಹೆಣ್ಣು ಮಗುವಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: New Year: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ವಾಹನ ನಿಲುಗಡೆ ನಿಷೇಧ
ಹೆಣ್ಣು ಗಂಡುಗೆ ಸಮಾನವಾದ ಹಕ್ಕು ಇದೆ. ಈ ಚಿತ್ರಸಂತೆ ಕಾರ್ಯಕ್ರಮದಲ್ಲಿ ಜನವರಿ 4 ರಂದು ಪ್ರಶಸ್ತಿ ನೀಡಲಾಗುತ್ತದೆ. 5 ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನವೆಂಬರ್ನಲ್ಲೇ ಕರ್ನಾಟಕ ಚಿತ್ರಕಲಾ ಪರಿಷತ್ತು 2025ರ ಚಿತ್ರಸಂತೆಗೆ ಕಲಾವಿದರಿಂದ ಅರ್ಜಿಗಳಿಗೆ ಆಹ್ವಾನಿಸಲಾಗಿತ್ತು. ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ಪಂಜಾಬ್, ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಚಿತ್ರಸಂತೆಯಲ್ಲಿ ಭಾಗಿಯಾಗಲು ನೋಂದಣಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಗುಡ್ ನ್ಯೂಸ್: ಹೊಸ ವರ್ಷದ ಸಂಭ್ರಮಾಚರಣೆಗೆ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ
ಇನ್ನು ಚಿತ್ರಸಂತೆ ಹಿನ್ನೆಲೆ ಜನವರಿ 5 ರಂದು ಕಲಾಭಿಮಾನಿಗಳು ಮತ್ತು ಪ್ರಯಾಣಿಕರು ಸುಲಭವಾಗಿ ಸ್ಥಳವನ್ನು ತಲುಪುವ ನಿಟ್ಟಿನಲ್ಲಿ ಕುಮಾರ ಕೃಪಾ ರಸ್ತೆಗೆ ಬಿಎಂಟಿಸಿ ಬಸ್ಗಳು ಕೂಡ ಸಂಚರಿಸಲಿವೆ. ಪ್ರತಿ 10 ನಿಮಿಷಗಳಿಗೊಮ್ಮೆ ಬಸ್ಗಳಿದ್ದು, ಆ ದಿನದಂದು ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಲಿವೆ. 15 ರೂ. ಟಿಕೆಟ್ ದರದಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.