ಕರ್ನಾಟಕದಲ್ಲಿ 10ಕ್ಕೆ ಏರಿಕೆಯಾದ ಕಾಲರಾ ಕೇಸ್; ಬೆಂಗಳೂರಿನಲ್ಲಿಯೇ 6 ಪ್ರಕರಣಗಳು!
ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಕೇಸ್ಗಳು(cholera cases) ಪತ್ತೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೇಸ್ ಬೆಳಕಿಗೆ ಬಂದಿದೆ. ಈ ಮೂಲಕ 10ಕ್ಕೆ ಏರಿಕೆಯಾಗಿದೆ. ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಬೆಂಗಳೂರು, ಏ.07: ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಹೌದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಕೇಸ್ಗಳು(cholera cases) ಪತ್ತೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೇಸ್ ಬೆಳಕಿಗೆ ಬಂದಿದೆ. ಈ ಮೂಲಕ 10ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 4 ವರ್ಷಗಳ ಕಾಲರಾ ಪ್ರಕರಣಗಳ ಅಂಕಿ ಅಂಶಗಳನ್ನು ನೋಡಿದರೆ, ಪ್ರತಿವರ್ಷ ಕ್ರಮವಾಗಿ 30, 40, 48 ಪ್ರಕರಣಗಳು ದಾಖಲಾಗಿದೆ. ಆದರೆ, ಈ ಬಾರಿ ಈಗಾಗಲೇ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ 6 ರಿಂದ 7 ಪ್ರಕರಣಗಳು ವರದಿಯಾಗಿವೆ.
ಕಾರು ಡ್ರೈವರ್ಗೆ ಕಾಲರಾ ಪಾಸಿಟಿವ್
ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕಾಲರಾ ಪ್ರಕರಣ ಪತ್ತೆಯಾಗಿದ್ದು, ಕಾರು ಚಾಲಕನಿಗೆ ಕಾಲರಾ ಪಾಸಿಟಿವ್ ದೃಢಪಟ್ಟಿದೆ. ವಾಂತಿ, ಭೇದಿ ಹಿನ್ನೆಲೆ ಚಾಲಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಬಳಿಕ ಮಲದ ಮಾದರಿ ಸ್ಯಾಂಪಲ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು. ಕಲ್ಚರಲ್ ವರದಿಯಲ್ಲಿ ಕಾಲರಾ ಪಾಸಿಟಿವ್ ಪತ್ತೆಯಾಗಿದೆ. ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ: ಸ್ವಯಂ ಪ್ರೇರಿತ ಪ್ರಕರಣ ದಾಖಲು
ಬಿಎಂಸಿ ಹಾಸ್ಟೆಲ್ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ; ಹೆಚ್ಚಿದ ಆತಂಕ
ಬಿಎಂಸಿ ಹಾಸ್ಟೆಲ್ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ ಹಿನ್ನೆಲೆ ವಿದ್ಯಾರ್ಥಿನಿಯರಲ್ಲಿ ಆತಂಕ ಹೆಚ್ಚಿದೆ. ಅಶ್ವಸ್ಥ 49 ವಿದ್ಯಾರ್ಥಿಗಳ ಪೈಕಿ ಇಬ್ಬರಲ್ಲಿ ಕಾಲರಾ ಪತ್ತೆ ಆಗಿತ್ತು. ಇದರ ಬೆನ್ನಲ್ಲೇ ಮೆಡಿಕಲ್ ವಿದ್ಯಾರ್ಥಿನೀಯರ ಹಾಸ್ಟೆಲ್ ಖಾಲಿ ಮಾಡುತ್ತಿದ್ದಾರೆ. ಸೋಂಕು ಕಡಿಮೆಯಾಗುವವರೆಗೂ ತಮ್ಮ ತಮ್ಮ ಊರುಗಳಿಗೆ ಹೊರಟಿದ್ದಾರೆ. ಇನ್ನು ಕೆಲವು ವಿದ್ಯಾರ್ಥಿನಿಯರು ಕೆಲ ದಿನಗಳ ಕಾಲ ಹಾಸ್ಟೆಲ್ ಬಿಟ್ಟು ಬೇರೆ ಕಡೆ ಶಿಫ್ಟ್ ಆಗುತ್ತಿದ್ದಾರೆ.
ಇತ್ತ ವಾರದೊಳಗೆ ಹಾಸ್ಟೆಲ್ನ ಸಮಸ್ಯೆ ಸರಿಪಡಿಸೋದಾಗಿ ಆಡಳಿತ ಮಂಡಳಿ ಹೇಳಿದೆ. ಈ ಹಿನ್ನೆಲೆ ಸಮಸ್ಯೆ ಬಗೆಹರಿಯೋವರೆಗೂ ಬೇರೆಡೆ ಇರಲು ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ. ಈಗಾಗಲೇ 49 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆ, ಸರಿಯಾದ ಊಟದ ವ್ಯವಸ್ಥೆ ಇಲ್ಲ. ಈ ಹಿನ್ನೆಲೆ ಸದ್ಯಕ್ಕೆ ಹಾಸ್ಟೆಲ್ ಬೇಡ ಎನ್ನುತ್ತಿದ್ದಾರೆ. ಜೊತೆಗೆ ಈಗ 49 ವಿದ್ಯಾರ್ಥಿಗಳ ಪೈಕಿ 22 ವಿದ್ಯಾರ್ಥಿನಿಯರ ಕಾಲರಾ ಕಲ್ಚರ್ ಟೆಸ್ಟ್ ವರದಿ ಕೈ ಸೇರಿದ್ದು, ಇಬ್ಬರಲ್ಲಿ ಪಾಸಿಟಿವ್ ವರದಿ ಬಂದಿದ್ದು, ಉಳಿದವರ ಕಾಲರಾ ವರದಿ ನಾಳೆ(ಏ.08) ಕೈಸೇರಲಿದ್ದು, ಮತಷ್ಟು ಆತಂಕ ಹೆಚ್ಚಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ