99 ಸಲ ಟ್ರಾಫಿಕ್​ ರೂಲ್ಸ್​​ ಬ್ರೇಕ್​​ ಮಾಡಿ, 100ನೇ ಬಾರಿಗೆ ಸಿಕ್ಕಿಬಿದ್ದ ನೃತ್ಯ ಸಂಯೋಜಕ: ಪೊಲೀಸ್ರು ದಂಡ ವಸೂಲಿ ಮಾಡಿದ್ದೆಷ್ಟು ಗೊತ್ತಾ?

ಬೆಂಗಳೂರಿನ ನೃತ್ಯ ಸಂಯೋಜರೊಬ್ಬರು 99 ಬಾರಿ ಸಂಚಾರ ನಿಯಮ ಉಲ್ಲಂಘಿಸಿ, 100ನೇ ಬಾರಿ ಉಂಘಟನೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದೇ ರೋಚಕತೆ. ಇಲ್ಲಿದೆ ಸ್ಟೋರಿ.

99 ಸಲ ಟ್ರಾಫಿಕ್​ ರೂಲ್ಸ್​​ ಬ್ರೇಕ್​​ ಮಾಡಿ, 100ನೇ ಬಾರಿಗೆ ಸಿಕ್ಕಿಬಿದ್ದ ನೃತ್ಯ ಸಂಯೋಜಕ: ಪೊಲೀಸ್ರು ದಂಡ ವಸೂಲಿ ಮಾಡಿದ್ದೆಷ್ಟು ಗೊತ್ತಾ?
ಟ್ರಾಫಿಕ್​ ನಿಯಮ ಉಲ್ಲಂಘಿಸಿದ ನೃತ್ಯ ಸಂಯೋಜಕ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 28, 2023 | 11:43 AM

ಬೆಂಗಳೂರು ಸೆ.28: ನೃತ್ಯ ಸಂಯೋಜಕನೊಬ್ಬ (Dance Choreographer) 99 ಬಾರಿ ಟ್ರಾಫಿಕ್​ ರೂಲ್ಸ್ (Traffic Rules) ಬ್ರೇಕ್​​ ಮಾಡಿದ್ದು, 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ನೃತ್ಯ ಸಂಯೋಜಕನಿಗೆ 56,000 ರೂ. ದಂಡ ವಿಧಿಸಿದ್ದಾರೆ. ಈ ಬಗ್ಗೆ ಟ್ವಿಟರ್​​ನಲ್ಲಿ (Twitter) ವೈರಲ್​ ಆಗಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಪೊಲೀಸರು ನೃತ್ಯ ಸಂಯೋಕನ ಸ್ಕೂಟರ್ ವಶಪಡಿಸಿಕೊಂಡು, ದಂಡ ಕಟ್ಟಲು ಎರಡು ತಿಂಗಳ ಕಾಲಾವಕಾಶ ನೀಡಿದ್ದಾರೆ. ಇಲ್ಲದಿದ್ದರೆ ವಾಹನವನ್ನು ಹರಾಜು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಬಿಳೇಕಹಳ್ಳಿ ನಿವಾಸಿ ನೃತ್ಯ ಸಂಯೋಜಕ ಹಸನ್ ರೆಹಮಾನ್ (25) ಬಿಟಿಎಂ ಎರಡನೇ ಹಂತದಲ್ಲಿ ಡ್ಯಾನ್ಸ್ ಕ್ಲಾಸ್​​​ ನಡೆಸುತ್ತಿದ್ದಾರೆ. ಹಸನ್ ರೆಹಮಾನ್ ಬನ್ನೇರುಘಟ್ಟ ರಸ್ತೆಯ ವೇಗಾ ಸಿಟಿ ಜಂಕ್ಷನ್ ಬಳಿ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ವಾಹನ ಚಲಾಯಿಸುತ್ತಿದ್ದರು. ಇದರಿಂದ ಇತರ ಸವಾರರಿಗೆ ತೊಂದರೆಯಾಗುತ್ತಿತ್ತು. ರೆಹಮಾನ್​​ ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾನೆ ಮಾಡುತ್ತಿರುವ ದೃಶ್ಯ ಕಾರಿನ ಡ್ಯಾಶ್‌ಕ್ಯಾಮ್​​ನಲ್ಲಿ ರೆಕಾರ್ಡ್​​ ಆಗಿದೆ.

ಇದೇ ವೇಳೆ ಕಾರು ಚಾಲಕ ಟ್ರಾಫಿಕ್ ಪೊಲೀಸರ ಆ್ಯಪ್​​ನಲ್ಲಿ ಬೈಕ್ ಮೇಲಿನ ಪ್ರಕರಣ​ಗಳ ಬಗ್ಗೆ ಪರಿಶೀಲಿಸಿದ್ದಾರೆ. ಈ ವೇಳೆ 99 ಪ್ರಕರಣಗಳು, 56 ಸಾವಿರ ರೂ. ದಂಡ ಬಾಕಿ ಇರುವುದು ಪತ್ತೆಯಾಗಿದೆ. ಕೂಡಲೇ ಕಾರು ಚಾಲಕ ಟ್ರಾಫಿಕ್ ಪೊಲೀಸರಿಗೆ ಬೈಕ್ ಫೋಟೋ ತೆಗೆದು ಸಂಚಾರ ಪೊಲೀಸರಿಗೆ ಟ್ಯಾಗ್ ಮಾಡಿ ಟ್ವೀಟ್​ ಮಾಡಿದ್ದಾರೆ.

ಇದನ್ನು ತಿಳಿದ ಸಂಚಾರ ಪೊಲೀಸರು ಬೈಕ್ ನಂಬರ್ ಪರಿಶೀಲಿಸಿ ಸವಾರನ ಪತ್ತೆ ಹಚ್ಚಿದ್ದಾರೆ. ಮೈಕೋ ಲೇಔಟ್ ಸಂಚಾರ ಪೊಲೀಸ್​ ವ್ಯಾಪ್ತಿಯಲ್ಲಿ ಬೈಕ್ ಪತ್ತೆಯಾಗಿದೆ. ಕೂಡಲೆ ಬೈಕ್​​ ಇದ್ದ ಸ್ಥಳಕ್ಕೆ ತೆರಳಿ ಸೀಜ್​ ಮಾಡಿದ್ದಾರೆ. ಈ ಬಗ್ಗೆ ದಕ್ಷಿಣ ವಿಭಾಗ ಸಂಚಾರ ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ಅವರು ಮಾತನಾಡಿ ನಾವು ಸಂಚಾರ ನಿಯಮ ಉಲ್ಲಂಘಿಸಿದವರ ವಾಹನವನ್ನು ವಶಪಡಿಸಿಕೊಂಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಸೆ.27ರ ಸಂಜೆ ನಾಲ್ಕು ಗಂಟೆಗೆ ಶಾಲೆ ಬಿಟ್ಟ ಮಕ್ಕಳು ಮನೆಗೆ ತಲುಪಿದ್ದು ರಾತ್ರಿ ಎಂಟಕ್ಕೆ !!

ಅವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ. 56,000 ಪಾವತಿಸಲು ರೆಹಮಾನ್‌ ಅವರಿಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಎರಡು ತಿಂಗಳಲ್ಲಿ ದಂಡವನ್ನು ತುಂಬಲು ವಿಫಲವಾದರೇ, ಅವರ ವಾಹನವನ್ನು ಹರಾಜು ಮಾಡಲಾಗುವುದು ಎಂದು ಮೈಕೋ ಲೇಔಟ್ ಪೊಲೀಸರು ತಿಳಿಸಿದ್ದಾರೆ. ಐಪಿಸಿ ಮತ್ತು ಇಂಡಿಯನ್ ಮೋಟಾರ್ ವೆಹಿಕಲ್ (ಐಎಂವಿ) ಕಾಯ್ದೆಯಡಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.

ಹಸನ್ ರೆಹಮಾನ್ 54 ಬಾರಿ ಹೆಲ್ಮೆಟ್ ಇಲ್ಲದೆ ವಾಹನ ಚಾಲನೆ, 34 ಬಾರಿ ನಂಬರ್ ಪ್ಲೇಟ್ ದೋಷಪೂರಿತ ಪ್ರಕರಣಗಳು, ವಾಹನ ಚಲಾಯಿಸುವಾಗ ಮೊಬೈಲ್ ಬಳಸಿದ ಐದು ಪ್ರಕರಣಗಳು, ನೋ ಎಂಟ್ರಿ ಮೂರು ಮತ್ತು ನೋ ಪಾರ್ಕಿಂಗ್, ಜೀಬ್ರಾ ಕ್ರಾಸಿಂಗ್‌ನಲ್ಲಿ ಪಾರ್ಕಿಂಗ್ ಮತ್ತು ಟ್ರಿಪಲ್ ರೈಡಿಂಗ್ ಸೇರಿದಂತೆ ತಲಾ ಒಂದು ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ