AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಕ್ರಿಸ್​​ಮಸ್​ ಹಬ್ಬ ಆಚರಣೆ ಹಿನ್ನೆಯಲ್ಲಿ ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ
ಸೇಂಟ್ ಮೇರಿ ಬೆಸಿಲಿಕಾ ಚರ್ಚ್
TV9 Web
| Edited By: ವಿವೇಕ ಬಿರಾದಾರ|

Updated on: Dec 25, 2023 | 7:22 AM

Share

ಬೆಂಗಳೂರು, ಡಿಸೆಂಬರ್​ 25: ಕ್ರಿಸ್​ಮಸ್ ಹಬ್ಬ (Christmas festival) ಹಿನ್ನೆಲೆಯಲ್ಲಿ ನಗರದ ಚರ್ಚ್​​​ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು (Bengaluru) ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್​ಗಳ ಬಳಿ ಕೆಎಸ್​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಚರ್ಚ್ ಆವರಣದಲ್ಲಿ ಬಾಲ ಏಸುವಿ‌ನ ಗೊಂಬೆಯ ಮೆರವಣಿಗೆ

ಮೈಸೂರು: ಸಂತ ಫಿಲೋಮಿನಾ ಚರ್ಚ್‌ನಲ್ಲಿ ಕ್ರಿಸ್​ಮಸ್‌ ಹಬ್ಬ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಚರ್ಚ್ ಆವರಣದಲ್ಲಿ ಬಾಲ ಏಸುವಿ‌ನ ಗೊಂಬೆಯ ಮೆರವಣಿಗೆ ನಡೆಯಿತು. ಕೃತಕವಾದ ಕೊಟ್ಟಿಗೆ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಬಾಲ ಏಸುವಿನ ಗೊಂಬೆ ಇರಿಸಲಾಗಿದೆ.

ಗದಗನ ಬೆಟಗೇರಿ ಚರ್ಚ್​ನಲ್ಲಿ ಕ್ರೈಸ್ತ ಸಮುದಾಯದವರು ಮಧ್ಯರಾತ್ರಿ ಪ್ರಾರ್ಥನೆ ಸಲ್ಲಿಸಿದರು. ಇನ್ನು ಹುಬ್ಬಳ್ಳಿಯ ಕೇಶ್ವಾಪುರ ರಸ್ತೆಯಲ್ಲಿರುವ ಶಾಂತಿನಗರದ ಚರ್ಚ್​ನಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನೆ ಸಲ್ಲಿಸಿ ಶುಭಾಶಯ ತಿಳಿಸಿದರು.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ