ಬೆಂಗಳೂರು, ಡಿಸೆಂಬರ್ 25: ಕ್ರಿಸ್ಮಸ್ ಹಬ್ಬ (Christmas festival) ಹಿನ್ನೆಲೆಯಲ್ಲಿ ನಗರದ ಚರ್ಚ್ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು (Bengaluru) ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್ಗಳ ಬಳಿ ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ: ಕ್ರಿಸ್ಮಸ್ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ KSRTC
ಮೈಸೂರು: ಸಂತ ಫಿಲೋಮಿನಾ ಚರ್ಚ್‌ನಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಚರ್ಚ್ ಆವರಣದಲ್ಲಿ ಬಾಲ ಏಸುವಿನ ಗೊಂಬೆಯ ಮೆರವಣಿಗೆ ನಡೆಯಿತು. ಕೃತಕವಾದ ಕೊಟ್ಟಿಗೆ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಬಾಲ ಏಸುವಿನ ಗೊಂಬೆ ಇರಿಸಲಾಗಿದೆ.
ಗದಗನ ಬೆಟಗೇರಿ ಚರ್ಚ್‌ನಲ್ಲಿ ಕ್ರೈಸ್ತ ಸಮುದಾಯದವರು ಮಧ್ಯರಾತ್ರಿ ಪ್ರಾರ್ಥನೆ ಸಲ್ಲಿಸಿದರು. ಇನ್ನು ಹುಬ್ಬಳ್ಳಿಯ ಕೇಶ್ವಾಪುರ ರಸ್ತೆಯಲ್ಲಿರುವ ಶಾಂತಿನಗರದ ಚರ್ಚ್‌ನಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನೆ ಸಲ್ಲಿಸಿ ಶುಭಾಶಯ ತಿಳಿಸಿದರು.