AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ನೇಮಕಾತಿ ವಿಭಾಗದ ಅಧಿಕಾರಿಗಳ ವಿಚಾರಣೆ ತೀವ್ರಗೊಳಿಸಿದ ಸಿಐಡಿ

ಬಂಧಿತ ಆರೋಪಿಗಳಿಗೂ ಅಭ್ಯರ್ಥಿಗಳಿಗೂ ಸಂಬಂಧ ಇರುವ ಬಗ್ಗೆ ಸಿಐಡಿ ಮಾಹಿತಿ ಸಂಗ್ರಹಿಸುತ್ತಿದೆ

PSI Recruitment Scam: ನೇಮಕಾತಿ ವಿಭಾಗದ ಅಧಿಕಾರಿಗಳ ವಿಚಾರಣೆ ತೀವ್ರಗೊಳಿಸಿದ ಸಿಐಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 11, 2022 | 7:22 AM

Share

ಬೆಂಗಳೂರು: ನೇಮಕಾತಿ ವಿಭಾಗದ ನಾಲ್ವರು ಹಿರಿಯ ಅಧಿಕಾರಿಗಳ ವಿಚಾರಣೆಯನ್ನು ಸಿಐಡಿ ತೀವ್ರಗೊಳಿಸಿದೆ. ಈ ಕುರಿತು ಮಹತ್ವದ ಮಾಹಿತಿ ಕಲೆಹಾಕಿರುವ ಸಿಐಡಿ, ಬಂಧಿತ ಆರೋಪಿಗಳಿಗೂ ಅಭ್ಯರ್ಥಿಗಳಿಗೂ ಸಂಬಂಧ ಇರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ಪಿಎಸ್​ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಈ ಸಂಬಂಧವೇ ಮಹತ್ವದ ಪಾತ್ರ ನಿರ್ವಹಿಸಿದೆ ಎಂದು ಶಂಕಿಸಲಾಗಿದೆ. ಯಾವೆಲ್ಲಾ ಅಧಿಕಾರಿಗಳ ಅಣತಿಯಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರು? ನೇಮಕಾತಿ ವಿಭಾಗದ ಅಧಿಕಾರಿಗಳ ಪಾತ್ರವೇನು? ಯಾವೆಲ್ಲಾ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಸಿಐಡಿ ಯತ್ನಿಸುತ್ತಿದೆ. ಬಂಧಿತ ಆರೋಪಿಗಳ ಮೊಬೈಲ್ ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಲಾಗಿದೆ.

ಪಿಎಸ್​ಐ ನೇಮಕಾತಿ ಹಗರಣದ ಬಗ್ಗೆ ಮತ್ತಷ್ಟು ಮಾಹಿತಿಗೆ ಲಿಂಕ್ ಕ್ಲಿಕ್ ಮಾಡಿ

ಅವ್ಯವಹಾರದ ಮೂಲ ನೇಮಕಾತಿ ವಿಭಾಗವೇ ಆಗಿರಬಹುದು ಎಂದು ಸಿಐಡಿ ಶಂಕಿಸಿದೆ. ಈಗಾಗಲೇ ಬಂಧನದಲ್ಲಿರುವ ನಾಲ್ವರು ನೇಮಕಾತಿ ಸಿಬ್ಬಂದಿ ಮೇಲೆ ಸಿಐಡಿ ಸಂಶಯ ವ್ಯಕ್ತಪಡಿಸಿದೆ. ನೇಮಕಾತಿ ವಿಭಾಗದ ಒಬ್ಬೊಬ್ಬರನ್ನೇ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನೇಮಕಾತಿ ವಿಭಾಗದ ಕರ್ಮಕಾಂಡ ಕುರಿತು ಟಿವಿ9 ಎಳೆಎಳೆಯಾಗಿ ವಿವರಗಳನ್ನು ಬಹಿರಂಗಪಡಿಸಿತ್ತು. ಕಿಂಗ್ ಪಿನ್​ಗಳ ಜೊತೆಗೆ ಸಂಪರ್ಕ ಹೊಂದಿದ್ದ ನೇಮಕಾತಿ ವಿಭಾಗದ ಅಧಿಕಾರಿಗಳಿಂದಲೇ ಅವ್ಯವಹಾರ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಪ್ರತಿ ನೇಮಕಾತಿಗೂ ತಲಾ ₹ 35ರಿಂದ 40 ಲಕ್ಷ ರೂಪಾಯಿವರೆಗೆ ಹಣ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಇನ್ನೂ ಕೆಲವರನ್ನು ಸಿಐಡಿ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ನೇಮಕಾತಿ ವಿಭಾಗದ ಸಿಬ್ಬಂದಿ ಶ್ರೀಧರ್, ಹರ್ಷಾ, ಶ್ರೀನಿವಾಸ್, ಲೋಕೇಶ್ ಈಗಾಗಲೇ ಸಿಐಡಿ ಬಂಧನದಲ್ಲಿದ್ದಾರೆ. ಮಧ್ಯವರ್ತಿಗಳಾದ ಮಂಜುನಾಥ್ ಮತ್ತು ಶರತ್ ಅವರನ್ನು ಬಂಧಿಸಿರುವ ಸಿಐಡಿ ವಿಚಾರಣೆ ತೀವ್ರಗೊಳಿಸಿದೆ.

ಈ ಪೈಕಿ ಹರ್ಷಾ ಎಫ್​ಡಿಎ ಅಧಿಕಾರಿ, ಶ್ರೀಧರ್ ನೇಮಕಾತಿ ವಿಭಾಗದ ಇನ್​ಸ್ಪೆಕ್ಟರ್ ಆಗಿದ್ದಾರೆ. ಮಂಜುನಾಥ್ ಮತ್ತು ಶರತ್ ಅಭ್ಯರ್ಥಿಗಳೊಂದಿಗೆ ವ್ಯವಹಾರ ಕುದುರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸಿಐಡಿ ವಿಚಾರಣೆ ವೇಳೆ ಆರೋಪಿಗಳು ಹಲವು ಮಹತ್ವದ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ. ಕೆಲ ಹಿರಿಯ ಅಧಿಕಾರಿಗಳೂ ಈ ಹಗರಣದಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ. ಡಿವೈಎಸ್​ಪಿ ಶಾಂತಕುಮಾರ್ ಕಳೆದ 10 ವರ್ಷಗಳಿಂದ ನೇಮಕಾತಿ ವಿಭಾಗದಲ್ಲೇ ಬೀಡುಬಿಟ್ಟಿದ್ದರು. ಡಿವೈಎಸ್​ಪಿ ಶಾಂತಕುಮಾರ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: Divya Hagaragi: ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!

ಇದನ್ನೂ ಓದಿ: PSI Recruitment Scam: ಮೊದಲ ಪತ್ರಿಕೆಯಲ್ಲೂ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಕೆ; ಸಿಐಡಿ ವಿಚಾರಣೆಯಲ್ಲಿ ಮಾಹಿತಿ ಲಭ್ಯ

Published On - 7:22 am, Wed, 11 May 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ