ವಿಮಾನದಲ್ಲಿ ಪ್ರಯಾಣದ ವೇಳೆ ಸಿಗರೇಟ್ ಸೇದಿದ ಭೂಪ; ಫ್ಲೈಟ್​ ಲ್ಯಾಂಡ್​ ಆಗುತ್ತಿದ್ದಂತೆಯೇ ಅರೆಸ್ಟ್

ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ಶೇಹರಿ ಚೌದರಿ ಎಂಬಾತ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದಾನೆ. ಬಳಿಕ ವಿಮಾನ ಲ್ಯಾಂಡ್​ ಆಗುತ್ತಿದ್ದಂತೆ ಏರ್ಪೋಟ್ ಪೊಲೀಸರು ಆತನನ್ನ ಬಂಧಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣದ ವೇಳೆ ಸಿಗರೇಟ್ ಸೇದಿದ ಭೂಪ; ಫ್ಲೈಟ್​ ಲ್ಯಾಂಡ್​ ಆಗುತ್ತಿದ್ದಂತೆಯೇ ಅರೆಸ್ಟ್
ಪ್ರಯಾಣಿಕ ಶೇಹರಿ ಚೌದರಿ
ಕಿರಣ್ ಹನುಮಂತ್​ ಮಾದಾರ್

Updated on: Mar 18, 2023 | 11:33 AM

ದೇವನಹಳ್ಳಿ: ಕೆಲ ದಿನಗಳ ಹಿಂದೆ ಅಷ್ಟೇ ಯುವತಿಯೊಬ್ಬಳು ವಿಮಾನದಲ್ಲಿ ಸಿಗರೇಟ್​ ಸೇದಿ ಆತಂಕ ಸೃಷ್ಟಿಸಿದ್ದಳು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಹೌದು ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ಶೇಹರಿ ಚೌದರಿ ಎಂಬಾತ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದಾನೆ. 6E 716 ಇಂಡಿಗೂ ವಿಮಾನದಲ್ಲಿ ಮಧ್ಯರಾತ್ರಿ 01:30 ರ ವೇಳೆ ಈ ಘಟನೆ ನಡೆದಿದೆ.

ವಿಮಾನದ ಶೌಚಾಲಯದಲ್ಲಿ ಹೊಗೆ ಮತ್ತು ವಾಸನೆ ಬಂದ ಹಿನ್ನೆಲೆ ವಿಮಾನದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈ‌ ವೇಳೆ ಪ್ರಯಾಣಿಕ ಸಿಗರೇಟ್ ಸೇದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬೆಂಗಳೂರಿಗೆ ಬಂದ ಕೂಡಲೆ ಏರ್ಲೈನ್ಸ್ ಸಿಬ್ಬಂದಿ‌ ಪ್ರಯಾಣಿಕನನ್ನ ಭದ್ರತಾ ಪಡೆಗೆ ನೀಡಿದ್ದಾರೆ. ಪ್ರಯಾಣಿಕನ ವಿರುದ್ದ ಪ್ರಕರಣ ದಾಖಲಿಸಿಕೊಂಡು ಏರ್ಪೋಟ್ ಪೊಲೀಸರು ಬಂಧಿಸಿದ್ದಾರೆ. ಏರ್ಪೋಟ್​ಗಳಲ್ಲಿ ಭದ್ರತಾ ಪಡೆಯ ನಿರ್ಲಕ್ಷ್ಯದಿಂದ ಪದೇ ಪದೇ ಫ್ಲೈಟ್​ಗಳಲ್ಲಿ ದೂಮಫಾನ ಪ್ರಕರಣ ಪತ್ತೆಯಾಗುತ್ತಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಆಕಾಶದಲ್ಲಿ ಹಾರುವ ವೇಳೆ ಧೂಮಪಾನದಿಂದ ಅಗ್ನಿ ಅವಾಂತರವಾದರೆ ಯಾರು ಹೊಣೆ ಎನ್ನುವ ಆತಂಕ ಎದುರಾಗಿದೆ.

ಇದನ್ನೂ ಓದಿ:World’s Best Airports 2023: ವಿಶ್ವದ ಅತ್ಯುತ್ತಮ ಏರ್​ಪೋರ್ಟ್​ಗಳಿವು, ಇಲ್ಲಿವೆ ಟಾಪ್ 20 ವಿಮಾನ ನಿಲ್ದಾಣಗಳ ಪಟ್ಟಿ

ಮಾ.5ರಂದು ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದ ಯುವತಿ

ಮಾ.5ರಂದು ರಾತ್ರಿ 9.50ಕ್ಕೆ ಕೋಲ್ಕತ್ತಾದಿಂದ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಪ್ರಿಯಾಂಕ ಎಂಬ ಯುವತಿ ಇಂಡಿಗೋ 6E716 ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದಳು. ವಿಮಾನ ಬೆಂಗಳೂರಿಗೆ ಲ್ಯಾಂಡ್ ಆಗುವ ಅರ್ಧ ಗಂಟೆ ಮುನ್ನ ಸಿಗರೇಟ್ ಸೇದಿದ್ದಳು. ಶೌಚಾಲಯ ಬಾಗಿಲು ತೆಗಿಸಿದಾಗ ಡಸ್ಟ್ ಬಿನ್​ನಲ್ಲಿ ಸಿಗರೇಟ್ ತುಂಡು ಪತ್ತೆಯಾಗಿತ್ತು. ಸಿಗರೇಟ್ ಕಂಡು ತಕ್ಷಣ ಸಿಬ್ಬಂದಿ ಡಸ್ಟ್ ಬಿನ್​ಗೆ ನೀರು ಸುರಿದಿದ್ದರು. ಬಳಿಕ ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆ ಯುವತಿಯನ್ನು ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇತರರ ಜೀವ & ವೈಯಕ್ತಿಕ ಸುರಕ್ಷತೆಗೆ ಅಪಾಯ ಆರೋಪದಡಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇನ್ನಷ್ಟು ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:31 am, Sat, 18 March 23

Loading...
Unable to load recommendations.
Follow Us