ಶಾಲೆ, ಕಾಲೇಜುಗಳ ಬಳಿ ತಂಬಾಕು ಉತ್ಪನ್ನ ಮಾರಾಟ: ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಪ್ರಕರಣ ಪತ್ತೆ

ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದನ್ನು ನಿಷೇಧಿಸಿ ದಶಕಗಳೇ ಕಳೆದಿವೆ. ಆದಾಗ್ಯೂ ಬೆಂಗಳೂರಿನಲ್ಲಿ ಇದರ ಹಾವಳಿ ನಿಂತಿಲ್ಲ. 2023-24ನೇ ಸಾಲಿನಲ್ಲಿ ಏನು ಬಾಹಿರವಾಗಿ ಶಾಲಾ-ಕಾಲೇಜುಗಳ ಬಳಿ ತಂಬಾಕು ಉತ್ಪನ್ನಗಳ ಮಾರಾಟ ಮಾಡಿದ ಸುಮಾರು 100 ಪ್ರಕರಣಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

ಶಾಲೆ, ಕಾಲೇಜುಗಳ ಬಳಿ ತಂಬಾಕು ಉತ್ಪನ್ನ ಮಾರಾಟ: ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಪ್ರಕರಣ ಪತ್ತೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 10, 2024 | 7:46 AM

ಬೆಂಗಳೂರು, ಮೇ 10: ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ (Tobacco Products) ಮಾರಾಟ ಮಾಡುತ್ತಿರುವ ಸುಮಾರು 100 ಪ್ರಕರಣಗಳು ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಪತ್ತೆಯಾಗಿವೆ. ಕೇಂದ್ರ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿ ಎರಡು ದಶಕಗಳ ನಂತರವೂ ಇಷ್ಟೊಂದು ಪ್ರಕರಣ ಪತ್ತೆಯಾಗಿದೆ. ಕಾನೂನಿನ ಪರಿಣಾಮಕಾರಿ ಅನುಷ್ಠಾನವಾಗದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಕಾನೂನು ಜಾರಿಯನ್ನು ಬಿಗಿಗೊಳಿಸಲಾಗಿದೆ ಮತ್ತು ಕಣ್ಗಾವಲು ಹೆಚ್ಚಿಸಲಾಗಿದೆ ಎಂದು ಬಿಬಿಎಂಪಿಯ ತಂಬಾಕು ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಮತ್ತೊಂದೆಡೆ, ಕ್ಯಾಂಪಸ್‌ಗಳ 100 ಮೀಟರ್ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಮುಂದುವರೆಸಲಾಗಿದೆ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ದೂರಿದ್ದಾರೆ.

ನಗರದಾದ್ಯಂತ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅನೇಕ ಸ್ಥಳಗಳಿವೆ. ಇವುಗಳಲ್ಲಿ ಹೆಚ್ಚಿನವು ಕ್ಯಾಂಪಸ್‌ಗಳಿಂದ 100 ಮೀಟರ್‌ ವ್ಯಾಪ್ತಿಯ ಒಳಗೆಯೇ ಇವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಹೊಸೂರು ರಸ್ತೆ, ಲ್ಯಾಂಗ್‌ಫೋರ್ಡ್ ರಸ್ತೆ ಮತ್ತು ಕಟ್ಟಿಗೇನಹಳ್ಳಿ ಬಳಿಯ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಗಳ ಬಳಿ ಸಿಗರೇಟ್ ಮಾರಾಟ ಮಾಡುವ ಮಳಿಗೆಗಳಿವೆ ಎಂದು ಮೂಲಗಳು ಹೇಳಿವೆ.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆಯ ಅನುಷ್ಠಾನವು ಬಿಬಿಎಂಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಪೊಲೀಸರ ಸಾಮೂಜಿಕ ಜವಾಬ್ದಾರಿಯಾಗಿದ್ದರೂ, ಸಾಮಾನ್ಯವಾಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ನಿರ್ಲಕ್ಷ್ಯವೂ ಸಮಸ್ಯೆಗೆ ಕಾರಣವಾಗುತ್ತಿವೆ. ತಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಆವರಣದಲ್ಲೇ ತಂಬಾಕು ಸಂಬಂಧಿತ ಚಟಗಳಿಗೆ ಒಳಗಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಅವರ ಮೇಲೂ ಇದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ವರದಿ ಉಲ್ಲೇಖಿಸಿದೆ.

ಕರ್ನಾಟಕವು ಕಾಯ್ದೆಯ ಉಲ್ಲಂಘನೆಗಳ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸುವ ರಾಜ್ಯಗಳಲ್ಲಿ ಒಂದಾಗಿದ್ದರೂ, ಜಾರಿ ಪ್ರಯತ್ನಗಳನ್ನು ಹೆಚ್ಚಿಸಲು ಮತ್ತು ನಿರಂತರವಾಗಿಸಲು ಇನ್ನೂ ಅವಕಾಶವಿದೆ ಎಂದು ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್‌ನ ಸಹಾಯಕ ನಿರ್ದೇಶಕಿ ಡಾ.ಪ್ರಗತಿ ಹೆಬ್ಬಾರ್ ಅಭಿಪ್ರಾಯಪಟ್ಟಿರುವುದನ್ನು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಮೇ 12ರ ವರೆಗೂ ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ, ಗುರುವಾರದ ಮಳೆಗೆ ಎಲ್ಲೆಲ್ಲಿ ಏನೇನಾಯ್ತು?

ಆದಾಗ್ಯೂ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದ್ದಕ್ಕೆ ವಿಧಿಸುವ 200 ರೂ. ದಂಡ ತುಂಬಾ ಕಡಿಮೆ ಮತ್ತು ಇದು ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನವನ್ನು ತಡೆಯಲಾರದು ಎಂದು ಶಿಕ್ಷಣ ಸಂಸ್ಥೆಗಳು ಅಭಿಪ್ರಾಯಪಟ್ಟಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ