BBMP Welfare schemes: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಮುಖಾಂತರ ಅರ್ಜಿಗಳ ಆಹ್ವಾನ

| Updated By: ಸಾಧು ಶ್ರೀನಾಥ್​

Updated on: Aug 18, 2022 | 9:48 PM

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

BBMP Welfare schemes: ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಮುಖಾಂತರ ಅರ್ಜಿಗಳ ಆಹ್ವಾನ
ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಮುಖಾಂತರ ಅರ್ಜಿಗಳ ಆಹ್ವಾನ
Follow us on

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (Bruhat Bengaluru Mahangara Palike) ಕಲ್ಯಾಣ ಕಾರ್ಯಕ್ರಮಗಳಡಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ದಿವ್ಯಾಂಗ ಚೇತನ, ಮಹಿಳೆಯರು, ಹಿರಿಯ ನಾಗರಿಕರು, ಸಾಮಾನ್ಯ ವರ್ಗ, ಮಂಗಳಮುಖಿಯರ ಆರ್ಥಿಕ, ಸಾಮಾಜಿಕ ಹಾಗು ಶೈಕ್ಷಣಿಕ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳಾದ ಶೈಕ್ಷಣಿಕ ಶುಲ್ಕ ಮರುಪಾವತಿ, ಸಹಾಯಧನ, ವಿವಿಧ ಸಾಮಗ್ರಿಗಳ ವಿತರಣೆ, ಮನೆ ನಿರ್ಮಾಣ ಮಾಡಿಕೊಳ್ಳುಲು ಸಹಾಯಧನ, ಪೌರಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳು ಹಾಗು ಇತರೆ ಕಾರ್ಯಕ್ರಮಗಳ ಸೌಲಭ್ಯಗಳನ್ನು ಹಮ್ಮಿ ಕೊಳ್ಳಲಾಗಿರುತ್ತದೆ. ಇಲ್ಲಿ ಸಾರ್ವಜನಿಕರು ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮಗಳಿಗೆ (BBMP Welfare schemes) ಅರ್ಜಿಗಳನ್ನು ಸಲ್ಲಿಸಬಹುದು.

1. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿ ಮನೆ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ರೂ. 5.00 ಲಕ್ಷಗಳ ಸಹಾಯಧನ.

2. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್‌ಟಾಪ್‌

3. ಅಂಧರಿಗೆ ಸ್ಮಾರ್ಟ್ ಸ್ಟಿಕ್

4. ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್‌ಟಾಪ್

5. ಹಿರಿಯ ನಾಗರಿಕರಿಗೆ ಮಡಚಬಹುದಾದ ವೀಲ್ ಚೇರ್

• ಮೇಲ್ಕಂಡ ಕಾರ್ಯಕ್ರಮಗಳಡಿ ಅರ್ಜಿ ಸಲ್ಲಿಸಲು ಆಸಕ್ತರು ಪಾಲಿಕೆಯ ವೆಬ್ ಜಾಲತಾಣವಾದ https://accounts.bbmpgov.in/welfare ಮುಖಾಂತರ ಅಥವಾ ಆಯ್ದ 92 ಬೆಂಗಳೂರು ಒನ್ ಕೇಂದ್ರಗಳಲ್ಲಿ ರೂ . 30/ -ಗಳನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದು.

• ಅರ್ಜಿದಾರರ ಅರ್ಹತೆಗಳ ಬಗ್ಗೆ ಪಾಲಿಕೆಯ ಅಂತರ್ಜಾಲದಲ್ಲಿ ಮಾರ್ಗಸೂಚಿಗಳನ್ನು ಅಳವಡಿಸಲಾಗಿರುತ್ತದೆ.

• ಹೆಚ್ಚಿನ ಮಾಹಿತಿಗೆ ತಮ್ಮ ವ್ಯಾಪ್ತಿಯ ಪಾಲಿಕೆಯ ವಲಯ ಕಛೇರಿಯ ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ರವರನ್ನು ಸಂಪರ್ಕಿಸುವುದು.

• ದಿನಾಂಕ : 20-08-2022 ರಿಂದ ದಿನಾಂಕ: 19-09-2022 ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

• ತಾಂತ್ರಿಕ ಸಮಸ್ಯೆಗಳಿಗೆ ಸಂಪರ್ಕಿಸಿ:

ಶ್ರೀಮತಿ ಗೀತಾ – 98801 97998;
ಶ್ರೀ ಆದರ್ಶ – 98457 63451