
ಬೆಂಗಳೂರು, ಅಕ್ಟೋಬರ್ 08: ದೆಹಲಿಯಲ್ಲಿ ಎಸ್‌ಐಆರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ಮುಂದುವರಿದಿದೆ. ಸತತ ಮೂರನೇ ದಿನವೂ ಇಂಡಿಯಾ ಪಕ್ಷಗಳ ಪ್ರತಿಭಟನೆ ಮುಂದುವರಿದಿದೆ. ಇನ್ನೊಂದೆಡೆ ಇತ್ತ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯಿಂದ ಇಂದು ಬೃಹತ್ ಪ್ರತಿಭಟನೆ ಮಾಡಲಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿರುದ್ಧ ಇಂದು ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಯೂಟ್ಯೂಬರ್ ಧ್ರುವ್ ರಾಠಿ, ನಟ ಪ್ರಕಾಶ್ ರಾಜ್, ಕಿಶೋರ್ ಕುಮಾರ್ ಹಾಗೂ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಇನ್ನು ನಮಸ್ಕಾರ ಬೆಂಗಳೂರು ಹೇಗಿದ್ದೀರಿ ಎಂದು ಮಾತು ಆರಂಭಿಸಿದ ಅಭಿಜಿತ್ ದೀಪ್ಕೆ, ‘ಈಗಾಗಲೇ 13 ಕೋಟಿ ಮತದಾರರನ್ನು ಕೈ ಬಿಡಲು ಮುಂದಾಗಿದ್ದಾರೆ. ಇದೇ 13% ಮತಪ್ರಮಾಣ ಆಗುತ್ತೆ, ಅದಕ್ಕೆ ಬಿಜೆಪಿ ಚುನಾವಣೆ ಗೆಲ್ಲುತ್ತಿದೆ. 15 ಸಾವಿರ ವೋಟ್ ತೆಗೆದಿದ್ದರು. ಅವರು ಸೋತಿದ್ದು, 15 ಸಾವಿರ ವೋಟುಗಳಿಂದ, ಹೀಗೆ ಬೇರೆ ಬೇರೆ ರಾಜ್ಯಗಳಲ್ಲಿ ಮಾಡಲಾಗಿದೆ. ನಮ್ಮನು ಜಿರಳೆಗಳು ಅಂತ ಕರೆಯುತ್ತಾರೆ. ಹಾಗೆ ಇರುವುದಕ್ಕೆ ಇಷ್ಟ ಪಡುತ್ತೇವೆ’ ಎಂದು ಹೇಳಿದ್ದಾರೆ.
ಪ್ರತಿಭಟನೆ ವೇಳೆ ಮಾತನಾಡಿದ ಯೂಟ್ಯೂಬರ್ ಧ್ರುವ್ ರಾಠಿ, ‘ನಾನು ಇಲ್ಲಿ ಆಡಳಿತ ಬದಲಾವಣೆಗಾಗಿ ಬಂದಿಲ್ಲ. ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಯಾವುದೇ ಪಾರದರ್ಶಕತೆ ಆಗಲಿ, ಹೊಣೆಗಾರಿಕೆ ಆಗಲಿ ಕೈಗೊಂಡಿಲ್ಲ’ ಎಂದು ಅವರು ಆರೋಪಿಸಿದ್ದಾರೆ.
ಬಹುಭಾಷಾ ನಟ ಪ್ರಕಾಶ್ ರಾಜ್ ಮಾತನಾಡಿ, ‘ಎಸ್‌ಐಆರ್ ಪ್ರತಿಕ್ರಿಯೆ ರದ್ದುಗೊಳಿಸುವವರೆಗೂ ಹೋರಾಟ ಮಾಡುತ್ತೇವೆ. ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ರದ್ದುಗೊಳಿಸಿವುದು ಮಾತ್ರವಲ್ಲ, ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಅವರು ಗುಡುಗಿದರು.
ಇದನ್ನೂ ಓದಿ: ಎಸ್‌ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ದೀಪ್ಕೆ ಭಾಗಿ
‘ನಿಮ್ಮ ವೋಟ್ ಡಿಲೀಟ್ ಆಗಿದೆ ಅಂತ ತಲೆಕೆಡಿಸಿಕೊಳ್ಳಬೇಡಿ. ವೋಟ್ ಕೇಳಬೇಕಾದರೆ ನಮ್ಮ ಹತ್ತಿರ ಬರುತ್ತಾರೆ. ಈಗ ನಮ್ಮ ಆಫೀಸ್ಗಳ ಸುತ್ತ ಓಡಾಡುತ್ತಿದ್ದಾರೆ. ನಾವು ಅದಕ್ಕೆ ಆಸ್ಪದ ಕೊಡುವುದಿಲ್ಲ. 13 ಕೋಟಿ ಮತದಾರರಿಗೆ ಕೋಕ್ ಕೊಟ್ಟಿದ್ದಾರೆ. ಬುಡಕಟ್ಟು ಜನಾಂಗದವರನ್ನು, ಮುಸ್ಲಿಂ ಮತ್ತು ಅಲ್ಪಸಂಖ್ಯಾತ ಮತದಾನವನ್ನು ಡಿಲೀಟ್ ಮಾಡುವ ಪ್ಲ್ಯಾನ್ ಮಾಡಿದ್ದಾರೆ’ ಎಂದು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.