Bengaluru: ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ಗೋವಿಂದರಾಜನಗರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣ ದಾಖಲು

|

Updated on: Mar 18, 2023 | 9:27 AM

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ ಕಟ್ಟೋ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್​ಐಆರ್ ದಾಖಲಾಗಿದೆ.

Bengaluru: ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ಗೋವಿಂದರಾಜನಗರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣ ದಾಖಲು
ಗೋವಿಂದರಾಜನಗರ ಪೊಲೀಸ್​ ಠಾಣೆ (ಎಡಚಿತ್ರ) ಕೈ-ಕಮಲ ಗಲಾಟೆ (ಬಲಚಿತ್ರ)
Follow us on

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ (Baner) ಕಟ್ಟೋ ವಿಚಾರಕ್ಕೆ ಕಾಂಗ್ರೆಸ್​ (Congress) ಮತ್ತು ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ನಿನ್ನೆ (ಮಾ.17) ಸಂಜೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸ್​​ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹೆಡ್ ​​ಕಾನ್ಸ್ ಟೇಬಲ್​ ಹೆಚ್ ಸಿ ವರದರಾಜು ದೂರು ನೀಡಿದ್ದಾರೆ. ವರದರಾಜು ದೂರಿನ ಹಿನ್ನಲೆ 36 ಮಂದಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ದ ಎಫ್​ಐಆರ್ ದಾಖಲಾಗಿದೆ. ಹಾಗೆ ಕಾಂಗ್ರೆಸ್ ಕಾರ್ಯಕರ್ತೆ ಪ್ರೇಮಲತಾ ಹಾಗೂ ಬಿಜೆಪಿಯ ರಮ್ಯ ಎಂಬುವವರು ಕೂಡ ದೂರು ನೀಡಿದ್ದಾರೆ.

ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ನಿನ್ನೆ (ಮಾ.17) ರಂದು ಬ್ಯಾನರ್​ ಕಟ್ಟುವ ವಿಚಾರಕ್ಕೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿತ್ತು. ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಾಕೃಷ್ಣ ಬೆಂಬಲಿಗರಿಂದ ಸಚಿವ ಸೋಮಣ್ಣ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಲಾಗಿತ್ತು.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯ ವೈದ್ಯರ ಮಾಹಿತಿ ಪಡೆದು ಕಿರುಕುಳ ನೀಡುತ್ತಿದ್ದ ಆರ್​ಟಿಐ ಕಾರ್ಯಕರ್ತನ ಬಂಧನ

ಮಾರಾಮಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ವಿಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಚ್ 19ರಂದು ಕಾಂಗ್ರೆಸ್ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಕಾಂಗ್ರೆಸ್​, ಪಕ್ಷದ ಕಾರ್ಯಕ್ರಮವನ್ನು ಹೊರತುಪಡಿಸಿ, ಬೇರೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 am, Sat, 18 March 23