ಈದ್ ಮಿಲಾದ್ ಮೆರವಣಿಗೆ ವೇಳೆ ಬೆಂಗಳೂರಿನ ಬಸವನಗುಡಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ

ಬೆಂಗಳೂರಿನ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಜಟಾಪಟಿ ನಡೆದು ವ್ಯಕ್ತಿಯೊಬ್ಬನ ಮೇಲೆ ಹಲ್ಲೆಯಾಗಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದರೂ, ಇತ್ತಠಾಣೆ ಎದುರು ಹಿಂದೂ ಪರ ಕಾರ್ಯಕರ್ತರ ಜಮಾವಣೆಗೊಂಡ ಹಿನ್ನೆಲೆ ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಬೆಂಗಳೂರಿನ ಬಸವನಗುಡಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ
ಬೆಂಗಳೂರಲ್ಲಿಎರಡು ಗುಂಪುಗಳ ನಡುವೆ ಗಲಾಟೆ
Image Credit source: Tv9 Kannada
Edited By:

Updated on: Aug 26, 2026 | 7:16 PM

ಬೆಂಗಳೂರು, ಆಗಸ್ಟ್​​ 26: ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಬೆಂಗಳೂರಿನ (Bengaluru) ಬಸವನಗುಡಿಯ ಕೆ.ಆರ್.ರಸ್ತೆಯಲ್ಲಿ ನಡೆದಿದೆ. ಪುನೀತ್ ಕೆರೆಹಳ್ಳಿ ಕಚೇರಿ ಎದುರು ಘೋಷಣೆ ಕೂಗಿದ ಆರೋಪ ಸಂಬಂಧ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮುರಳಿ ಎಂಬುವವನಿಗೆ ರಕ್ತ ಬರುವಂತೆ ಗುಂಪು ಹಲ್ಲೆ ನಡೆಸಿದ್ದು, ಗಲಾಟೆ ಮತ್ತು ಹಲ್ಲೆ ಖಂಡಿಸಿ ಪುನೀತ್ ಕೆರೆಹಳ್ಳಿ ಪ್ರತಿಭಟನೆ ನಡೆಸಿದ ಪ್ರಸಂಗವೂ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಬಸವನಗುಡಿ ಪೊಲೀಸರು ಗುಂಪು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ

ಇನ್ನು ಗಾಯಾಳು ಮುರಳಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರೆ, ಇತ್ತ ಠಾಣೆ ಎದುರು ಹಿಂದೂ ಪರ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಪುನೀತ್ ಮತ್ತು ಟೀಮ್​ನಿಂದ ಪ್ರಚೋದನಕಾರಿ ಘೋಷಣೆ ಆರೋಪವೂ ಕೇಳಿಬಂದಿದ್ದು, ಈ ಸಂಬಂಧ ಸದ್ಯ ಘಟನಾ ಸ್ಥಳದಲ್ಲಿ ಪೊಲೀಸರು ಮಾಹಿತಿ ಸಂಗ್ರಹಿಸುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಮೆಂಬರ್‌ಶಿಪ್​​​ಗೆ ಲಕ್ಷಾಂತರ ರೂ ಪಡೆಯುವ ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗಳ ಬಣ ಬಯಲು

ಪೊಲೀಸರಿಂದ ಸಿಸಿಟಿವಿಗಳ ಪರಿಶೀಲನೆ

ಮಾಹಿತಿ ಪ್ರಕಾರ, ಮೆರವಣಿಗೆ ಬಂದಾಗ ಎರಡು ಗುಂಪಿನ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿದೆ ಎನ್ನಲಾಗಿದೆ. ಮೆರವಣಿಗೆಯಲ್ಲಿ ಮುಸ್ಲಿಂ ನಾಯಕರು ಬೀಸುತ್ತಿದ್ದ ಬಾವುಟ ಮುರುಳಿಗೆ ತಾಗಿ ಒಎಟ್ಟಾಗಿರುವ ಸಾಧ್ಯತೆಯ ಬಗ್ಗೆ ಶಂಕೆ ಹಿನ್ನೆಲೆ ಪೊಲೀಸರು ಘಟನೆ ನಡೆದ ಸ್ಥಳದ ಸುತ್ತಮುತ್ತ ಇರುವ ಸಿಸಿಟಿವಿಗಳ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:15 pm, Wed, 26 August 26

Loading...
Unable to load recommendations.
Follow Us