ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ಆಧಾರ್ ಕಾರ್ಡ್​ನಲ್ಲಿ ಕರ್ನಾಟಕದ ವಿಳಾವಿದ್ದರೂ ಹಿಂದಿಯಲ್ಲಿ ಇದೆ ಎಂಬ ಕಾರಣಕ್ಕೆ 9 ನೇ ತರಗತಿ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್ ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಲ್ಲದೆ, ಬಾಲಕಿಯನ್ನ ಕತ್ತು ಹಿಡಿದು, ಹೊರ ದಬ್ಬಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ
ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರು ಬಿಎಂಟಿಸಿ ಬಸ್​ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ
Follow us
Kiran Surya
| Updated By: Rakesh Nayak Manchi

Updated on: Aug 13, 2023 | 6:17 PM

ಬೆಂಗಳೂರು, ಆಗಸ್ಟ್ 13: ಹಾಡಹಗಲೇ ಬಿಎಂಟಿಸಿ (BMTC) ಬಸ್​ನಲ್ಲಿ ಕಂಡೆಕ್ಟರ್ ಹಾಗೂ ಇಬ್ಬರು ಪುರುಷ ಪ್ರಯಾಣಿಕರು 9 ನೇ ತರಗತಿಯ ವಿದ್ಯಾರ್ಥಿನಿಗೆ ಕಿರುಕುಳ (Harassment) ನೀಡಿದ ಆರೋಪ ಕೇಳಿಬಂದಿದೆ. ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೂ ಹಿಂದಿ ಅಕ್ಷರದಲ್ಲಿ ಬರೆಯಲಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಗೆ ಮನಬಂದಂತೆ ನಿಂದಿಸಿದ್ದಲ್ಲದೆ, ಕತ್ತು ಹಿಡಿದು ಬಸ್​ನಿಂದ ಹೊರಹಾಕಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವಿಳಾಸ ಕರ್ನಾಟಕದಲ್ಲಿದ್ದರೂ ಹಿಂದಿಯಲ್ಲಿ ಬರೆಯಲಾಗಿದೆ ಎಂಬ ಕಾರಣಕ್ಕೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದ ಕಂಡೆಕ್ಟರ್ ನಿಂದಿಸಿದ್ದಾರೆ. ಕಂಡೆಕ್ಟರ್ ಜೊತೆ ಸೇರಿದ ಇಬ್ಬರು ಪ್ರಯಾಣಿಕರೂ ವಿದ್ಯಾರ್ಥಿನಿಗೆ ನಿಂದಿಸಿದ್ದಾರೆ. ಈ ನಡುವೆ ವಿದ್ಯಾರ್ಥಿನಿ ಹಣ ನೀಡಿ ಟಿಕೆಟ್ ಪಡೆದಿದ್ದಾಳೆ.

ಇದನ್ನೂ ಓದಿ: ಟಿಕೆಟ್​ ರಹಿತ ಪ್ರಯಾಣ ಸೇರಿದಂತೆ ಪ್ರಮಾಣಿಕರಿಂದ ರೂ. 6 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಬಿಎಂಟಿಸಿ

ಆದರೆ ಆಕೆ ಇಳಿಯಬೇಕಿದ್ದ ನಿಲ್ದಾಣದಲ್ಲಿ ಇಳಿಸದೇ ಟಿಕೆಟ್ ವಾಪಸ್ ಪಡೆದು ಬೇರೊಂದು ಸ್ಥಳದಲ್ಲಿ ಇಳಿಸಿ ಹೋಗಿದ್ದಾರೆ. ಅಲ್ಲದೆ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿದ್ಯಾರ್ಥಿನಿ ತಾಯಿ ಮಂಜುಳಾ‌‌ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯ ಆರೋಪವೇನು?

ಅಗಸ್ಟ್ 11ರಂದು ಬಿಎಂಟಿಸಿ ಬಸ್‌ನಲ್ಲಿ ದೊಮ್ಮಲೂರಿನಿಂದ ಹೋಗುತ್ತಿದ್ದಾಗ ಆಧಾರ್ ಕಾರ್ಡ್​​ನಲ್ಲಿ ಕನ್ನಡ ಇಲ್ಲ ಅಂತ ಕಂಡಕ್ಟರ್ ನಿಂದಿಸಿದ್ದಾರೆ. ಅಲ್ಲದೆ, ಹಿಂದಿಯಲ್ಲಿರುವುದರಿಂದ ಉಚಿತ ಟಿಕೆಟ್ ನೀಡಲ್ಲ ಬೈದಿದ್ದಾರೆ. ಹೀಗಾಗಿ ಹಣ ಕೊಟ್ಟು ಟಿಕೆಟ್ ಪಡೆದುಕೊಂಡಿದ್ದಾಳೆ. ಆದರೂ‌ ಕಂಡಕ್ಟರ್ ವಿದ್ಯಾರ್ಥಿನಿಯ ಆಧಾರ್ ‌ಕಾರ್ಡ್ ಕಿತ್ತುಕೊಂಡು ಎಲ್ಲಾ ಪ್ರಯಾಣಿಕರಿಗೆ ಆಧಾರ್‌ನಲ್ಲಿ ಕನ್ನಡಯಿಲ್ಲ ಅಂತ ತೋರಿಸಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಗೆ ಇತರೆ ಇಬ್ಬರು ಪ್ರಯಾಣಿಕರು ನಿಂದಿಸಿದ್ದಾರೆ. ಅಲ್ಲದೆ‌ ವಿದ್ಯಾರ್ಥಿನಿಯ ಟಿಕೆಟ್ ಕಿತ್ತುಕೊಂಡು ಅರ್ಧದಲ್ಲೇ ಬಸ್‌ನಿಂದ ಇಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ