ಹೈಕಮಾಂಡ್ ವಿರುದ್ಧ ಸಿದ್ದರಾಮಯ್ಯ ಭಾರಿ ಅಪ್ ಸೆಟ್: ಕೊನೆಗೆ ಜಮೀರ್ ಅಹ್ಮದ್​ರನ್ನ ತಮ್ಮ ಡೆಪ್ಯುಟಿ ಮಾಡಲು ದುಂಬಾಲು

Congress high command: ಈ ಬೆಳವಣಿಗೆಗಳ ಸಮ್ಮುಖದಲ್ಲಿ ಉತ್ತರ ಪ್ರದೇಶ ಚುನಾವಣೆ ಬಳಿಕ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ರಾಜಕಾರಣದ ವಿಚಾರವಾಗಿ ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸುವ ಉದ್ದೇಶ ಹೊಂದಿದ್ದಾರೆ. ಸಿದ್ದರಾಮಯ್ಯರನ್ನ ವಿಶ್ವಾಸಕ್ಕೆ ಪಡೆಯುವಂತೆ ಬೆಂಬಲಿಗರಿಂದಲೂ ಒತ್ತಡ ಕಂಡುಬರುತ್ತಿದೆ.

ಹೈಕಮಾಂಡ್ ವಿರುದ್ಧ ಸಿದ್ದರಾಮಯ್ಯ ಭಾರಿ ಅಪ್ ಸೆಟ್: ಕೊನೆಗೆ ಜಮೀರ್ ಅಹ್ಮದ್​ರನ್ನ ತಮ್ಮ ಡೆಪ್ಯುಟಿ ಮಾಡಲು ದುಂಬಾಲು
ಸಿದ್ದರಾಮಯ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 29, 2022 | 12:34 PM

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್​ನಲ್ಲಿ ವಿಪಕ್ಷ ನಾಯಕನ ಸ್ಥಾನ ವಿಚಾರದಲ್ಲಿ ಲೆಕ್ಕಾಚಾರ ತಪ್ಪಿದ ಹಿನ್ನೆಲೆಯಲ್ಲಿ ಬಿ ಕೆ ಹರಿಪ್ರಸಾದ್ ನೇಮಕಾತಿಯಿಂದ ವಿಧಾನಸಭೆ ವಿಪಕ್ಷ ನಾಯಕ (CLP leader) ಸಿದ್ದರಾಮಯ್ಯ ಭಾರಿ ಭಾರಿ ಅಪ್ ಸೆಟ್ ಅಗಿದ್ದಾರೆ. ತಮ್ಮ ಮಾತಿಗೆ ಹೈಕಮಾಂಡ್ (congress high command) ಮನ್ನಣೆ ನೀಡದೇ ಇರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿಯೇ ತಮ್ಮ ಬೇಸರ ಅಸಮಾಧಾನ ತೋರ್ಪಡಿಸಿದ್ದಾರೆ. ತಮ್ಮ ಆಪ್ತ ವರ್ಗದಲ್ಲೇ ಅಸಮಾಧಾನ ಹೊರಹಾಕಿರುವ ಸಿದ್ದರಾಮಯ್ಯ, ತಮ್ಮದೇ ವರ್ಗದ ಬಿ ಕೆ ಹರಿಪ್ರಸಾದರನ್ನ ನೇಮಿಸುವ ಮೂಲಕ ರಾಜ್ಯ ಕಾಂಗ್ರೆಸ್​​ನಲ್ಲಿ ಪರ್ಯಾಯ ನಾಯಕತ್ವ ಸೃಷ್ಟಿ ನಡೆದಿದೆ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಗುಮಾನಿ, ಗೊಂದಲಕ್ಕೆ ಒಳಗಾಗಿದ್ದಾರೆ. ಅಲ್ಪ ಸಂಖ್ಯಾತರಿಗೆ ಪರಿಷತ್ ವಿಪಕ್ಷ ನಾಯಕನ ಸ್ಥಾನ ನೀಡುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ದರು. ಆದರೆ ಹೈಕಮಾಂಡ್ ಸಿದ್ದರಾಮಯ್ಯ ( siddaramaiah ) ವರ್ಗದವರೇ ಆದ ಹರಿಪ್ರಸಾದರನ್ನ ನೇಮಕ ಮಾಡಿದೆ.

ಈ ಬೆಳವಣಿಗೆಗಳ ಸಮ್ಮುಖದಲ್ಲಿ ಉತ್ತರ ಪ್ರದೇಶ ಚುನಾವಣೆ ಬಳಿಕ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ರಾಜಕಾರಣದ ವಿಚಾರವಾಗಿ ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸುವ ಉದ್ದೇಶ ಹೊಂದಿದ್ದಾರೆ. ಪರಿಸ್ಥಿತಿಯನ್ನು ಸುಧಾರಿಸುವಂತೆ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯರನ್ನ ವಿಶ್ವಾಸಕ್ಕೆ ಪಡೆಯುವಂತೆ ಬೆಂಬಲಿಗರಿಂದಲೂ ಒತ್ತಡ ಕಂಡುಬರುತ್ತಿದೆ. ಇಲ್ಲವಾದಲ್ಲಿ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮವೇ ಬೀರುವ ಆತಂಕ ಎದುರಾಗಿದೆ ಕಾಂಗ್ರೆಸ್​​ನಲ್ಲಿ. ಸದ್ಯದ ಪಂಚರಾಜ್ಯ ಚುನಾವಣೆ ಬಳಿಕ ಸಿದ್ದರಾಮಯ್ಯ ಅಂಡ್ ಟೀಮ್ ದೆಹಲಿಗೆ ತೆರಳುವುದು ನಿಶ್ಚಿತ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜಮೀರ್ ಅಹ್ಮದ್​ಗಾದರೂ ಆಯಕಟ್ಟಿನ ಸ್ಥಾನ ನೀಡುವಂತೆ ದುಂಬಾಲು… ಈ ಮಧ್ಯೆ, ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ವಿಧಾನಸಭೆಯಲ್ಲಿ ‘ಕೈ’ ಉಪನಾಯಕ ಸ್ಥಾನವನ್ನು ಮುಸ್ಲಿಂ ಸಮುದಾಯದ ಶಾಸಕರಿಗೆ ನೀಡುವ ಚರ್ಚೆ ಶುರು ಮಾಡಿದೆ. ಇದರಿಂದ, ಎಚ್ಚೆತ್ತ ಸಿದ್ದರಾಮಯ್ಯ ಅವರು ತಮ್ಮ ಶಿಷ್ಯ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್‌ ಖಾನ್​ಗೆ ಆಫರ್ ನೀಡಿದರು ಎನ್ನಲಾಗಿದೆ. ಆದ್ರೆ ಜಮೀರ್ ಅಹ್ಮದ್ ಖಾನ್ ಇದನ್ನು ನಿರಾಕರಿಸಿದ್ದಾರೆ. ಇದರಿಂದ ಮಂಗಳೂರು ಶಾಸಕ ಯು.ಟಿ. ಖಾದರ್‌ಗೆ ಉಪನಾಯಕನ ಪಟ್ಟ ಕಟ್ಟುವ ಸಾಧ್ಯತೆಯಿದೆ. ಹೈಕಮಾಂಡ್‌ಗೆ ಖಾದರ್ ಹೆಸರು ರವಾನಿಸುವ ಸಾಧ್ಯತೆಯಿದೆ. ನೇರವಾಗಿ ಹೈಕಮಾಂಡ್‌ನಿಂದಲೇ ಹೆಸರು ಘೋಷಣೆ ಮಾಡಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಎಂ ಇಬ್ರಾಹಿಂ ನನ್ನ ಸ್ನೇಹಿತ, ಅವರು ಕಾಂಗ್ರೆಸ್​​ನಲ್ಲಿರುತ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಸಿಎಂ ಇಬ್ರಾಹಿಂ ಕೋಪದಲ್ಲಿ ಮಾತನಾಡಿದ್ದಾರೆ. ಅವರೆಲ್ಲೂ ಹೋಗುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾತನಾಡಿದರು. ನಾನು ಇನ್ನೂ ಸಿ.ಎಂ.ಇಬ್ರಾಹಿಂ ಜೊತೆ ಮಾತುಕತೆ ನಡೆಸಿಲ್ಲ. ಇಬ್ರಾಹಿಂ ಎಲ್ಲೂ ಹೋಗುವುದಿಲ್ಲ ಕಾಂಗ್ರೆಸ್‌ನಲ್ಲಿರುತ್ತಾರೆ. ಅವರು ಏನೋ ಕೋಪದಲ್ಲಿ ಮಾತನಾಡಿದ್ದಾರೆ. ಹಲವರು ಬಾರಿ ಪಕ್ಷ ಬಿಡುವ ಮಾತುಗಳನ್ನು ಹೇಳಿದ್ದಾರೆ. ರಾಜ್ಯಸಭಾ ಸದಸ್ಯನಾಗಿ ಮಾಡದ ಹಿನ್ನೆಲೆ ಜೆಡಿಎಸ್ ಬಿಟ್ಟಿದ್ದರು. ಆದರೆ ಈಗ ಸಿ.ಎಂ.ಇಬ್ರಾಹಿಂಗೆ ಅಂತಹ ಪರಿಸ್ಥಿತಿ ಬಂದಿಲ್ಲ. ಇಬ್ರಾಹಿಂ ಕೋಪದಲ್ಲಿ ಮಾತನಾಡಿದ್ದಾರೆ. ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸಬೇಡಿ. ಸ್ನೇಹದಲ್ಲಿ ಭಿನ್ನಾಭಿಪ್ರಾಯ ಬಂದಾಗ ಕುಳಿತು ಚರ್ಚಿಸುತ್ತೇವೆ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯನವರು ನನ್ನನ್ನು ಯಾರೂ ತಬ್ಬಲಿ ಮಾಡುವುದಕ್ಕೆ ಆಗುವುದಿಲ್ಲ. ರಾಜ್ಯದ ಜನರು ನನ್ನ ಜೊತೆ ಇರುವವರೆಗೆ ತಬ್ಬಲಿ ಆಗಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

ಸಿದ್ದರಾಮಯ್ಯಗೆ ರಾಜಕೀಯ ಮರುಹುಟ್ಟು ನೀಡಿದ್ದಕ್ಕೆ ಅವರಿಂದ ಒಳ್ಳೆಯ ಉಡುಗೊರೆ ಸಿಕ್ಕಿದೆ! ಸಿ ಎಮ್ ಇಬ್ರಾಹಿಂ

ಸಿಎಂ ಇಬ್ರಾಹಿಂಗೆ ರಾಜಕೀಯದಲ್ಲಿ ದೊಡ್ಡ ವ್ಯಾಲ್ಯೂ ಇದೆ, ಬಿಜೆಪಿಗೆ ಕರೆತರಲು ನಾಯಕರೊಂದಿಗೆ ಮಾತನಾಡುವೆ: ಸಚಿವ ಶ್ರೀರಾಮುಲು

Published On - 12:30 pm, Sat, 29 January 22