ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ
ಸಂವಿಧಾನ ದಿನದ ಶುಭಾಶಯಗಳು

Constitution Day 2021: ಸಂವಿಧಾನ ದಿನದ ಈ ಐತಿಹಾಸಿಕ ದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ.

TV9kannada Web Team

| Edited By: Apurva Kumar Balegere

Nov 26, 2021 | 9:54 AM

ಬೆಂಗಳೂರು: ಇಂದು ನಾಡಿನಲ್ಲಿ ಸಂವಿಧಾನ ದಿನವನ್ನು(Constitution Day) ಆಚರಿಸಲಾಗುತ್ತಿದೆ. 1949ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನೆಪಿಗಾಗಿ ದೇಶ ಈ ದಿನವನ್ನು ಆಚರಿಸುತ್ತೆ. 2015ರಿಂದ ಸಂವಿಧಾನ ದಿನ ಆಚರಣೆ ಆರಂಭವಾಯ್ತು. ಈ ಐತಿಹಾಸಿಕ ದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ. 1949ರ ನ.26ರಂದು ಭಾರತದ ಸಂವಿಧಾನ ಅಂಗೀಕಾರವಾಯ್ತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢ ನಿಶ್ಚಯದೊಂದಿಗೆ ಕರ್ತೃಗಳನ್ನು ಸ್ಮರಿಸೋಣ. ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ. ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪ ಪುನರುಚ್ಛರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇನ್ನು ಮತ್ತೊಂದೆಡೆ ಟ್ವೀಟ್ ಮೂಲಕ ಯಡಿಯೂರಪ್ಪ ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆಗಳನ್ನು ತಿಳಿಸಿದ್ದಾರೆ. ಸಂವಿಧಾನವೇ ನಮ್ಮ ರಾಷ್ಟ್ರಧರ್ಮ. ಪ್ರತಿಯೊಬ್ಬ ಭಾರತೀಯನ ಸ್ವಾತಂತ್ರ್ಯ, ಹಕ್ಕು, ಘನತೆಯನ್ನು ಸಂವಿಧಾನ ರಕ್ಷಿಸುತ್ತದೆ. ಸಮಾನತೆಯೊಂದಿಗೆ ನಮ್ಮ ವಿಚಾರ, ಅಭಿವ್ಯಕ್ತಿ, ಶ್ರದ್ಧೆ, ಉಪಾಸನೆಯ ಸ್ವಾತಂತ್ರ್ಯವೂ ಸಂವಿಧಾನದತ್ತವಾಗಿದ್ದು. ಸಂವಿಧಾನದ ಸದಾಶಯ ಸಂರಕ್ಷಿಸುವ ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Constitution Day 2021: ನ.26 ಸಂವಿಧಾನ ದಿನ; ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್​

Follow us on

Related Stories

Most Read Stories

Click on your DTH Provider to Add TV9 Kannada