ಕರ್ನಾಟಕ ರಾಜ್ಯೋತ್ಸವ 2021: ನಾಡಿನ ಸಮಸ್ತ ಜನತೆಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ
Karnataka Rajyotsava 2021: ಕರ್ನಾಟಕ ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವಕ್ಕೆ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ತಿಳಿಸಿದ್ದಾರೆ.
ಬೆಂಗಳೂರು: ಇಂದು 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವಕ್ಕೆ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ತಿಳಿಸಿದ್ದಾರೆ.
“ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ತಿಳಿಸಿದ್ದಾರೆ.
“ನಾಡಿನ ಸಮಸ್ತ ಜನತೆಗೆ ೬೬ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” : ಮುಖ್ಯಮಂತ್ರಿ @BSBommai.#ಕನ್ನಡರಾಜ್ಯೋತ್ಸವ pic.twitter.com/RBT58cOBD1
— CM of Karnataka (@CMofKarnataka) November 1, 2021
ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯ ತಿಳಿಸಿದ್ದಾರೆ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು, ನುಡಿ, ಜನಪದ, ಇತಿಹಾಸ, ಪರಂಪರೆ, ಸಂಸ್ಕೃತಿಗಳನ್ನು ಉಳಿಸುವ, ಬೆಳೆಸುವ ದೃಢ ಸಂಕಲ್ಪ ನಮ್ಮದಾಗಿರಲಿ. ಸಮೃದ್ಧ, ಆರೋಗ್ಯಪೂರ್ಣ, ಪ್ರಗತಿಶೀಲ ನವಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ ಎಂದು ಟ್ವೀಟ್ ಮಾಡಿದ್ದಾರೆ.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು, ನುಡಿ, ಜನಪದ, ಇತಿಹಾಸ, ಪರಂಪರೆ, ಸಂಸ್ಕೃತಿಗಳನ್ನು ಉಳಿಸುವ, ಬೆಳೆಸುವ ದೃಢ ಸಂಕಲ್ಪ ನಮ್ಮದಾಗಿರಲಿ. ಸಮೃದ್ಧ, ಆರೋಗ್ಯಪೂರ್ಣ, ಪ್ರಗತಿಶೀಲ ನವಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ.#ಕನ್ನಡರಾಜ್ಯೋತ್ಸವ pic.twitter.com/nERO7pxdka
— B.S. Yediyurappa (@BSYBJP) November 1, 2021
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ 2021: ಪ್ರತಿ ಬಾರಿ ಕೇಳುವಾಗಲೂ ಕನ್ನಡಿಗರಿಗೆ ರೋಮಾಂಚನ ನೀಡುವ ಅದ್ಭುತ ಚಿತ್ರಗೀತೆಗಳಿವು
Published On - 8:55 am, Mon, 1 November 21