ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಸಭೆ: ಬೆಂಗಳೂರು ಸುತ್ತಮುತ್ತಲಿನ ರಸ್ತೆ ಬಗ್ಗೆ ಅಥಾರಿಟಿ ರಚಿಸಲು ತೀರ್ಮಾನ

ರೋಪ್ ವೇ ಮೂಲಕ ಸಂಚರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಶಿರಾಡಿಘಾಟ್ ಸೇರಿ ಅನೇಕ ಅನೇಕ ಹೆದ್ದಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಸಭೆ: ಬೆಂಗಳೂರು ಸುತ್ತಮುತ್ತಲಿನ ರಸ್ತೆ ಬಗ್ಗೆ ಅಥಾರಿಟಿ ರಚಿಸಲು ತೀರ್ಮಾನ
ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಸಭೆ
Edited By:

Updated on: Sep 09, 2022 | 4:01 PM

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಜೊತೆ ಬೆಂಗಳೂರಿನ ರಸ್ತೆ, ಟ್ರಾಫಿಕ್ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿತಿನ್ ಗಡ್ಕರಿ ಜೊತೆ ಸಭೆ ಬಳಿಕ ಸಿಎಂ ಬೊಮ್ಮಾಯಿ, ಬೆಂಗಳೂರು ಸುತ್ತಮುತ್ತಲಿನ ರಸ್ತೆ ಬಗ್ಗೆ ಅಥಾರಿಟಿ ರಚಿಸಲು ತೀರ್ಮಾನ ಮಾಡಿದ್ದೇವೆ ಎಂದು ಸೂಚಿಸಿದ್ದಾರೆ.

ನಗರದ ಖಾಸಗಿ ತಾರಾ ಹೋಟೆಲ್​ನಲ್ಲಿ ನಿತಿನ್ ಗಡ್ಕರಿ ಜೊತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಹೊಸ ಟೆಕ್ನಾಲಜಿ ಬಳಸಿ ಟ್ರಾಫಿಕ್ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ಬಗ್ಗೆಯೂ ಚರ್ಚಿಸಿದ್ದೇವೆ. ಡ್ರೈನೇಜ್ ಸಿಸ್ಟಮ್​ ಮಾಡಿ ಮಳೆ ನೀರು ಹರಿದು ಹೋಗಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತೆ. ಕೂಡಲೇ ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ನಿತಿನ್ ಗಡ್ಕರಿ ಸೂಚಿಸಿದ್ದಾರೆ. ಎಲಿವೇಟೆಡ್​ ಟ್ರಾನ್ಸ್​ಪೋರ್ಟ್​ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ರೋಪ್ ವೇ ಮೂಲಕ ಸಂಚರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಶಿರಾಡಿಘಾಟ್ ಸೇರಿ ಅನೇಕ ಅನೇಕ ಹೆದ್ದಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಬಳಿಕ ಸಭೆಯಲ್ಲಿ ನಡೆದ ಮಾತುಕತೆ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

ಎಲ್ಲೆಲ್ಲಿ ರಸ್ತೆ ಮಾಡಲು ಸಾಧ್ಯವಿಲ್ಲವೊ ಅಲ್ಲೆಲ್ಲ ಎಲಿವೇಟೆಡ್ ಟ್ರಾನ್ಸ್‌ಪೋರ್ಟ್ ಮಾಡಲು ಚಿಂತನೆ ನಡೆಸಿದ್ದೇವೆ. ಈಗಾಗಲೇ ಅದರ ತಂತ್ರಜ್ಞಾನ ಇದೆ. ಅದನ್ನು ಬೆಂಗಳೂರಿಗೆ ಯಾವ ರೀತಿ ಬಳಸಿಕೊಳ್ಳಬಹುದು ಅಂತ ಚರ್ಚೆ ನಡೆಸಿದ್ದೇವೆ. ಬೆಂಗಳೂರು ಮೈಸೂರು ಹೆದ್ದಾರಿ ಉದ್ಘಾಟನೆಗೆ ಯಾವುದೇ ದಿನಾಂಕ‌ ನಿಗದಿ ಮಾಡಿಲ್ಲ. ಅಲ್ಲಿ ಇನ್ನೂ ಸ್ವಲ್ಪ ಕೆಲಸ ಬಾಕಿ ಉಳಿದಿದೆ. ಭೂ ಒತ್ತುವರಿ ಸಮಸ್ಯೆ ಇದೆ. ಅದೆಲ್ಲ ಪೂರ್ಣವಾದ ನಂತರ ಉದ್ಘಾಟನೆಯ ದಿನಾಂಕ‌ ತಿಳಿಸಲಾಗುವುದು ಎಂದರು.

ಸಭೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಸಂಸದರಾದ ಪಿ ಸಿ ಮೋಹನ್, ತೇಜಸ್ವಿ ಸೂರ್ಯ ಭಾಗಿಯಾಗಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:04 pm, Thu, 8 September 22

TV9 Web

TV9 Kannada

Read More
Loading...
Unable to load recommendations.
Follow Us