CM Bommai cabinet meeting: ಸಿಎಂ ಬೊಮ್ಮಾಯಿ ಸಂಪುಟ ಸಭೆಯ ನಿರ್ಣಯಗಳು -ಕಾನೂನು ಸಚಿವ ಮಾಧುಸ್ವಾಮಿ ವಿವರಣೆ
JC Madhu swamy: ಹಿಜಾಬ್ ವಿವಾದ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ಸಂಪುಟ ಸಭೆಯಲ್ಲಿ ಚರ್ಚೆ ಬೇಡ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅಭಿಪ್ರಾಯಟ್ಟ ಹಿನ್ನೆಲೆಯಲ್ಲಿ, ಸಚಿವ ಸಂಪುಟ ಸಭೆಯಲ್ಲಿ ವಿವಾದದ ವಿಚಾರವಾಗಿ ಯಾವುದೇ ಗಂಭೀರ ಚರ್ಚೆ ನಡೆಯಲಿಲ್ಲ.
ಬೆಂಗಳೂರು: ಉಡುಪಿಯಲ್ಲಿ ತಲೆ ಎತ್ತಿದ್ದ ಹಿಜಾಬ್ ವಿವಾದ ಮತ್ತು ತದನಂತರ ವಿವಾದ ಹೈಕೋರ್ಟ್ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ವಿವಾದ ಕುರಿತು ಇದೀಗತಾನೆ ನಡೆಸ ರಾಜ್ಯ ಸಚಿವ ಸಂಪಯಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಹಿಜಾಬ್ ವಿವಾದ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ಸಂಪುಟ ಸಭೆಯಲ್ಲಿ ಚರ್ಚೆ ಬೇಡ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅಭಿಪ್ರಾಯಟ್ಟ ಹಿನ್ನೆಲೆಯಲ್ಲಿ, ಸಚಿವ ಸಂಪುಟ ಸಭೆಯಲ್ಲಿ ವಿವಾದದ ವಿಚಾರವಾಗಿ ಯಾವುದೇ ಗಂಭೀರ ಚರ್ಚೆ ನಡೆಯಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯವಾಗಿದೆ.
ಸಂಪುಟ ಸಭೆಯ ಇತರೆ ನಿರ್ಧಾರಗಳ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ನೀಡಿರುವ ವಿವರಣೆ ಹೀಗಿದೆ:
ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಈ ಹಿಂದಿನ ಪ್ರಸ್ತಾವನೆಯಲ್ಲಿ ಹಲವು ಮಾರ್ಪಾಡುಗಳು ಮಾಡಿ, ಹೊಸ ಪ್ರಸ್ತಾವಕ್ಕೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುವ ನೂತನ ಅನುಭವ ಮಂಟಪದ ನಿರ್ಮಾಣ ಕಾಮಗಾರಿಯ ಅಂದಾಜು 560 ಕೋಟಿ ರೂಪಾಯಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
ಉತ್ತರ ಕನ್ನಡ ಜಿಲ್ಲೆ, ಕುಮಟಾ ತಾಲ್ಲೂಕು, ಮಿನಿ ವಿಧಾನ ಸೌಧ ಕಟ್ಟಡದ ಕಾಮಗಾರಿಯ ರೂ. 16.28 ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿಗೆ ಅನುಮೋದನೆ ನೀಡಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಆಡಳಿತಾತ್ಮಕ ಅನುಮೋದನೆ
KPSC ನೋಟಿಫೈ ಮಾಡಿದ್ದ ಪಟ್ಟಿ ಒಪ್ಪಲು ಸಂಪುಟ ತೀರ್ಮಾನ ಕೆಪಿಎಸ್ಸಿ 2011ರ ಅಭ್ಯರ್ಥಿ ಆಯ್ಕೆ ಗೊಂದಲ ವಿಚಾರ ನೇಮಕಾತಿ ಸಂಬಂಧ ಮಸೂದೆ ಮಂಡನೆ ಮಾಡಲು ತೀರ್ಮಾನ. KPSC ನೋಟಿಫೈ ಮಾಡಿದ್ದ ಪಟ್ಟಿ ಒಪ್ಪಲು ಸಂಪುಟ ತೀರ್ಮಾನಿಸಿದೆ.
“ಕರ್ನಾಟಕ ಮುದ್ರಾಂಕ (ತಿದ್ದುಪಡಿ) ವಿಧೇಯಕ, 2022″ ಅನುಮೋದನೆ
ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನಿಡುಗುರ್ತಿ ಮತ್ತು ಇತರೆ 60 ಜನವಸತಿಗಳಿಗೆ ಜಲ ಜೀವನ ಮಿಷನ್‌ಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 131.21 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆವಿನಹಳ್ಳಿ ಮತ್ತು ಇತರೆ 336 ಜನವಸತಿಗಳನ್ನೊಳಗೊಂಡ 122 ಗ್ರಾಮಗಳಿಗೆ ಜಲ ಮಿಷನ್‌ಡಿ ಬಹುಗ್ರಾಮ ಕುಡಿಯುವ ಜೀವನ ಸರಬರಾಜಿನ ರೂ. 88 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಅಮಾನಿ ಬೈರಸಾಗರ ಕೆರೆಯ ಸುತ್ತಮುತ್ತಲಿನ 28 ಜನವಸತಿಗಳಿಗೆ ಜೀವನ್ ಮಿಷನ್‌ಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ 15 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ತಾಲ್ಲೂಕಿನ ಗೋವಿಂದಪುರ ಹಾಗೂ ಇತರೆ | ಜನವಸತಿಗಳು ಮತ್ತು ಗೋಪಿಶೆಟ್ಟಿಕೊಪ್ಪದ | ನಗರ ಪ್ರದೇಶಕ್ಕೆ ಜಲ ಜೀವನ್ ಮಿಷನ್ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 16.73 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಮತ್ತು ಇತರೆ 5 ಗ್ರಾಮಗಳಿಗೆ (23 ಜನವಸತಿಗಳು) ಜಲ ಜೀವನ್ ಮಿಷನ್ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 30.27 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ 22 ಗ್ರಾಮಗಳ (43 ಜನವಸತಿಗಳು) ಜಲ ಜೀವನ್ ಮಿಷನ್ ಅಡಿ ಹಾಗೂ ಕೆರವಾಡಿ ಮತ್ತು ಇತರೆ 17 ಗ್ರಾಮಗಳ (42 ಜನವಸತಿಗಳು) ಸಂಯೋಜಿತ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 88.50 ಕೋಟಿಗಳ ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
ಕುಮಟಾ ತಾಲೂಕಿನ ಮಿನಿ ವಿಧಾನಸೌಧ ಕಾಮಗಾರಿಗೆ ಅಂದಾಜು ಪಟ್ಟಿಗೆ ಒಪ್ಪಿಗೆ:
ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿ ಅಂದಾಜು ಪಟ್ಟಿಗೆ ಒಪ್ಪಿಗೆ ದೊರೆತಿದೆ. 16.28 ಕೋಟಿ ರೂಪಾಯಿ ಪರಿಷ್ಕೃತ ಅಂದಾಜು ಪಟ್ಟಿಗೆ ಒಪ್ಪಿಗೆ ನೀಡಲಾಗಿದೆ. ಆದೇಶ ಹೊರಡಿಸಿರುವ ಕ್ರಮಕ್ಕೆ ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಂಡಿರುವ 28.63 ಕೋಟಿ ರೂಪಾಯಿ ಮೊತ್ತದ 6 ರಸ್ತೆ ಕಾಮಗಾರಿ ಸ್ಥಳ ಬದಲಾವಣೆ ಮಾಡಲು ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ.
ವಿಜಯಪುರದಲ್ಲಿ ಪಾಲಿಕೆಯಲ್ಲಿ ದೀರ್ಘಾವಧಿ ಗುತ್ತಿಗೆಗೆ ನೀಡಿರುವ ಆಸ್ತಿಗಳ ಪೈಕಿ ಉಳಿದ 366 ಲೀಸ್ ಆಸ್ತಿಗಳ ಖರೀದಿಗೆ ಮಂಜೂರಾತಿ ನೀಡಲಾಗಿದೆ. ಸರ್ಕಾರ ನಿಗದಿಪಡಿಸಿರುವ ದರಕ್ಕೆ ಬಡ್ಡಿ ಮೊತ್ತ ಸೇರಿಸಿ ಖರೀದಿ ನಡೆಯಲಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಮಾಸ್ತಿಯಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ: ಮಾಸ್ತಿಯಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ 17.00 ಕೋಟಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
Published On - 12:39 pm, Wed, 9 February 22