ಎಸ್​ಸಿ ಎಸ್​ಟಿ ಮೀಸಲಾತಿ: ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆಗೆ ಸರ್ವಪಕ್ಷ ಸಭೆ, ಮೀಸಲಾತಿ ಹೆಚ್ಚಳಕ್ಕೆ ಬಿಜೆಪಿ ಶಿಫಾರಸು

ಎಸ್​ಸಿ, ಎಸ್​ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸರ್ವಪಕ್ಷ ಸಭೆಗೂ ಮೊದಲು ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಎಸ್​ಸಿ ಎಸ್​ಟಿ ಮೀಸಲಾತಿ: ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆಗೆ ಸರ್ವಪಕ್ಷ ಸಭೆ, ಮೀಸಲಾತಿ ಹೆಚ್ಚಳಕ್ಕೆ ಬಿಜೆಪಿ ಶಿಫಾರಸು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 07, 2022 | 12:06 PM

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (Scheduled Castes, Scheduled Tribes – SC ST) ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್​ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯ ವಿಸ್ತೃತ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸಚಿವರಾದ ಶ್ರೀರಾಮುಲು ಹಾಗೂ ಮುನಿರತ್ನ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಒಂದು ನಿರ್ಣಯಕ್ಕೆ ಬರಲು ಸಾಧ್ಯವಾದರೆ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹಲವು ದಿನಗಳಿಂದ ಆಗುತ್ತಿರುವ ಚರ್ಚೆಯು ಒಂದು ಹಂತಕ್ಕೆ ತಲುಪಿದಂತೆ ಆಗುತ್ತದೆ.

ನಾಗಮೋಹನ್ ದಾಸ್ ಸಮಿತಿಯು ಎಸ್​ಸಿ ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ, ಎಸ್​ಟಿ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ. ಎಸ್‌ಟಿಗೆ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣವನ್ನು ಶೇ 7.5ರಷ್ಟು ನಿಗದಿಪಡಿಸಬೇಕು ಎಂದು ವಾಲ್ಮೀಸಿ ಸಮುದಾಯ ಬೇಡಿಕೆ ಇಟ್ಟು, ಸತ್ಯಾಗ್ರಹ ನಡೆಸುತ್ತಿದೆ.

ಮೀಸಲಾತಿಯನ್ನು ಶೇ 50ಕ್ಕಿಂತ ಹೆಚ್ಚಿಗೆ ನಿಗದಪಡಿಸಬಾರದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ ನಾಗಮೋಹನ್ ದಾಸ್ ಸಮಿತಿ ಶಿಫಾರಸು ಜಾರಿ ಮಾಡಿದರೆ ಮೀಸಲಾತಿ ಪ್ರಮಾಣವು ಒಟ್ಟಾರೆ ಶೇ 56ಕ್ಕೆ ಹೆಚ್ಚಳವಾಗುತ್ತದೆ. ಈ ಸಮಸ್ಯೆ ನಿರ್ವಹಿಸುವುದು ಹೇಗೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಎಲ್ಲರ ಅಭಿಪ್ರಾಯ ಪರಾಮರ್ಶೆ ಮಾಡಲಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಚರ್ಚೆ ನಡೆದಾಗ ಮುಖ್ಯಮಂತ್ರಿ ಸರ್ವಪಕ್ಷ ಸಭೆ ನಡೆಸುವ ಭರವಸೆ ನೀಡಿದ್ದರು. ಅದರಂತೆ ಇಂದು ಸಿಎಂ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಕರೆದಿರುವ ಸಭೆಗೆ ತೆರಳುವ ಮೊದಲು ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದಲ್ಲಿರುವ ಎಸ್​ಟಿ ನಾಯಕರೊಂದಿಗೆ ಸಿದ್ದರಾಮಯ್ಯ ಕೆಲ ಸಮಯ ಮಾತುಕತೆ ನಡೆಸಿದರು. ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಉಪಸ್ಥಿತರಿದ್ದರು. ವಾಲ್ಮೀಕಿ ಜನಾಂಗದ ಬೇಡಿಕೆಯ ಕುರಿತು ವಿಷಯ ಪ್ರಸ್ತಾಪವಾಯಿತು ಎಂದು ಮೂಲಗಳು ತಿಳಿಸಿವೆ.

ನಗರದಲ್ಲಿ ಬಿಜೆಪಿ ಕೋರ್​ ಕಮಿಟಿ ಸಭೆ ನಡೆಯುತ್ತಿದ್ದು ಅಲ್ಲಿಯೂ ಮೀಸಲಾತಿ ವಿಚಾರ ಪ್ರಸ್ತಾಪವಾಗಿದೆ. ಎಸ್​ಟಿ ಮೀಸಲಾತಿ ಹೆಚ್ಚಿಸಬೇಕು ಎಂದು ಸಭೆಯು ಶಿಫಾರಸು ಮಾಡಿದೆ. ಈ ಬಗ್ಗೆ ಅ 9ರ ಒಳಗೆ ಅಧಿಕೃತ ಘೋಷಣೆ ಪ್ರಕಟಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದೆ.

ಮೀಸಲಾತಿಗೆ ಸರ್ಕಾರ ಬದ್ಧ: ಬೊಮ್ಮಾಯಿ

ಎಸ್​ಸಿ, ಎಸ್​ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸರ್ವಪಕ್ಷ ಸಭೆಗೂ ಮೊದಲು ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ನಾವು ಬದ್ಧರಾಗಿದ್ದೇವೆ. ಜನಪರವಾಗಿರುವ ಆಡಳಿತವನ್ನ ನಮ್ಮ ಸರ್ಕಾರ ಮಾಡ್ತಿದೆ. ಚುನಾವಣೆಯ ದೃಷ್ಟಿಯಿಂದ ಇದು ಮಹತ್ವದ ಅಂಶ ಎಂದು ಹೇಳಿದರು.

Published On - 12:06 pm, Fri, 7 October 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್