ಬೆಂಗಳೂರು: ಬಜೆಟ್ನಲ್ಲಿ ಅನುದಾನ ಮೀಸಲಿಡದ ಹಿನ್ನೆಲೆ ಈ ಬಾರಿಯೂ ಸರ್ಕಾರಿ ಶಾಲೆ ಮಕ್ಕಳಿಗೆ ಸೈಕಲ್, ಶೂ, ಸಾಕ್ಸ್ ವಿತರಿಸದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗುತ್ತಿದ್ದು ಸದ್ಯ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಸ್ಪಷ್ಟನೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಈ ವರ್ಷವೇ ಸೈಕಲ್(Sycle), ಶೂ(Shoe) ವಿತರಿಸಲಾಗುವುದು ಎಂದಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಲಾ ಮಕ್ಕಳಿಗೆ ಶೂ ಮತ್ತು ಬೈಸಿಕಲ್ ಈ ವರ್ಷವೇ ಕೊಡಲಾಗುವುದು. ಸ್ವಲ್ಪ ವಿಳಂಬವಾಗಿದೆ, ಸಚಿವ ನಾಗೇಶ್ ಇದನ್ನ ನೋಡಿಕೊಳ್ಳುತ್ತಿದ್ದಾರೆ ಎಂದರು. ಇದನ್ನೂ ಓದಿ: ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ: ಉದಯಪುರದಲ್ಲಿ ಗುಂಡು ಹಾರಿಸಿ 4 ದರೋಡೆಕೋರರ ಬಂಧನ, 3 ಕೆಜಿ ಚಿನ್ನ ವಶ
ಸೈಕಲ್, ಶೂ-ಸಾಕ್ಸ್ ಬಗ್ಗೆ ನಿರ್ಣಯ ತೆಗೆದುಕೊಂಡಿಲ್ಲ
ಇನ್ನು ಮತ್ತೊಂದೆಡೆ ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಕ್ಕಳು ಶಾಲೆಗೆ ಬರುವುದು ಶಿಕ್ಷಣಕ್ಕೆ. ಸೈಕಲ್, ಶೂ-ಸಾಕ್ಸ್ ಬಗ್ಗೆ ನಿರ್ಣಯ ತೆಗೆದುಕೊಂಡಿಲ್ಲ. ಹಾಗಂತ ಕೊಡಲ್ಲವೆಂದು ಕೂಡ ನಿರ್ಣಯ ಕೈಗೊಂಡಿಲ್ಲ. ಕೊರೊನಾ ಕಾರಣದಿಂದ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಕೊಠಡಿ ನಿರ್ಮಾಣ, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದೇವೆ. ಶೂ, ಸೈಕಲ್ ವಿತರಣೆ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ಶೇಕಡಾ 85ರಷ್ಟು ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲಾಗಿದೆ. ಈ ಬಾರಿ 24 ಸಾವಿರ ಶಿಕ್ಷಕರನ್ನ ವರ್ಗಾವಣೆ ಮಾಡಲಾಗಿದೆ. ಶೀಘ್ರದಲ್ಲಿಯೇ 15 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಕ್ರಿಯೆ ನಡೆಯುತ್ತೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳಿಗೆ ಸೈಕಲ್, ಒಂದರಿಂದ 10ನೇ ತರಗತಿ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಲಾಗುತ್ತಿತ್ತು. 2019-2020ರಿಂದ ಸೈಕಲ್ ವಿರತಣೆ ಸ್ಥಗಿತಗೊಂಡಿದೆ. ಅಲ್ಲದೆ ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಶಾಲೆ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಿಲ್ಲ. ಈ ಬಾರಿಯೂ ಬಜೆಟ್ನಲ್ಲಿ ಅನುದಾನ ಕಾಯ್ದಿರಿಸದ ಕಾರಣ ಮಕ್ಕಳಿಗೆ ಸೈಕಲ್, ಶೂ, ಸಾಕ್ಸ್ ವಿತರಿಸಲಾಗುವುದಿಲ್ಲ ಎಂದು ಹೇಳಲಾಗುತ್ತಿತ್ತು. ಸದ್ಯ ಈಗ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಸಚಿವ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಬೋಲ್ಡ್ ಲುಕ್ನಲ್ಲಿ ನಿವೇದಿತಾ ಗೌಡ
Published On - 7:40 pm, Wed, 6 July 22