JEE-Advanced Results 2022: ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶಿಶಿರ್​ಗೆ ಸಿಎಂ ಬೊಮ್ಮಾಯಿ ಅಭಿನಂದನೆ

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಶಿಶಿರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅಭಿನಂದನೆ ಸಲ್ಲಿಸಿದ್ದಾರೆ.

JEE-Advanced Results 2022: ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶಿಶಿರ್​ಗೆ ಸಿಎಂ ಬೊಮ್ಮಾಯಿ ಅಭಿನಂದನೆ
Follow us
TV9 Web
| Updated By: ಆಯೇಷಾ ಬಾನು

Updated on:Sep 11, 2022 | 8:10 PM

ಬೆಂಗಳೂರು: ಜೆಇಇ ಅಡ್ವಾನ್ಸ್ಡ್‌ 2022 ಪರೀಕ್ಷೆಯ ಫಲಿತಾಂಶ(JEE-Advanced Results 2022) ಸೆ.11ರಂದು ಪ್ರಕಟವಾಗಿದ್ದು, ಬೆಂಗಳೂರಿನ ವಿದ್ಯಾರ್ಥಿ, ಕರ್ನಾಟಕ ಮೂಲದ ಕೆ ಶಿಶಿರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಶಿಶಿರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅಭಿನಂದನೆ ಸಲ್ಲಿಸಿದ್ದಾರೆ.

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕರುನಾಡಿನ ಕೀರ್ತಿ ಹೆಚ್ಚಿಸಿದ ಶಿಶಿರ್ ಆರ್. ಕೆ‌. ಅವರಿಗೆ ಹಾರ್ದಿಕ ಅಭಿನಂದನೆಗಳು. ಭವಿಷ್ಯದಲ್ಲಿ ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.

ಜೆಇಇ ಅಡ್ವಾನ್ಸ್ಡ್‌ 2022 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರಿನ ವಿದ್ಯಾರ್ಥಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಕರ್ನಾಟಕ ಮೂಲದ ಕೆ ಶಿಶಿರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಐಐಟಿ ಝೋನ್ನಿಂದ ಪರೀಕ್ಷೆ ಬರೆದವರು. ಹಾಗೆಯೇ ಪೋಲು ಲಕ್ಷ್ಮೀ ಸಾಯಿ ಲೋಹಿತ್ ರೆಡ್ಡಿ ಎರಡನೇ ಮತ್ತು ಥಾಮಸ್ ಬಿಜು ಚೀರಂವೇಲಿಲ್ ಮೂರನೇ ಶ್ರೇಯಾಂಕ ಪಡೆದಿದ್ದಾರೆ. ಆಗಸ್ಟ್ 28ರಂದು ಪರೀಕ್ಷೆ ನಡೆದಿತ್ತು, ಜೆಇಇ ಅಡ್ವಾನ್ಸ್ಡ್‌ 2022 ಫಲಿತಾಂಶ – jeeadv.ac.in – ಜೆಇಇ ಅಡ್ವಾನ್ಸ್ಡ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಇದನ್ನೂ ಓದಿ: JEE-Advanced Results 2022 : ಜೆಇಇ ಅಡ್ವಾನ್ಸ್ಡ್​ ಪರೀಕ್ಷೆಯ ಫಲಿತಾಂಶ ಪ್ರಕಟ, ಬೆಂಗಳೂರಿನ ವಿದ್ಯಾರ್ಥಿ ಶಿಶಿರ್ ಟಾಪರ್

ಈ ಬಾರಿ ಟಾಪ್ 10ರಲ್ಲಿ ಹುಡುಗರೇ ಇರುವುದು ವಿಶೇಷ. ಹುಡುಗಿಯರಲ್ಲಿ 16ನೇ ರ್ಯಾಂಕ್ ನ್ನು ಐಐಟಿ ದೆಹಲಿ ಝೋನ್ನ ತನಿಷ್ಕಾ ಕಾಬ್ರಾ ಮೊದಲ ಸ್ಥಾನ ಪಡೆದಿದ್ದಾರೆ. ವಂಗಪಲ್ಲಿ ಸಾಯಿ ಸಿದ್ಧಾರ್ಥ್ 4ನೇ ಸ್ಥಾನ, ಮಯಾಂಕ್ ಮೋಟ್ವಾನಿ 5ನೇ ಸ್ಥಾನ, ಪೋಲಿಸೆಟ್ಟಿ ಕಾರ್ತಿಕೇಯ 6ನೇ ಸ್ಥಾನ, ಪ್ರತೀಕ್ ಸಾಹೂ 7ನೇ ಸ್ಥಾನ, ಧೀರಜ್ ಕುರುಕುಂದಾ 8ನೇ ಸ್ಥಾನ, ಮಹಿತ್ 9ನೇ ಸ್ಥಾನ ಹಾಗೂ ಮಹೇಶ್ 10ನೇ ಸ್ಥಾನ ಪಡೆದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:07 pm, Sun, 11 September 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ