ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್​ ಪಾಸಿಟಿವ್: ದೆಹಲಿ ಪ್ರವಾಸ ರದ್ದು

ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್​ ಪಾಸಿಟಿವ್ ದೃಢಪಟ್ಟಿದ್ದು, ಈ ಬಗ್ಗೆ ಟ್ವೀಟ್​ ಮಾಡಿ ಸಿಎಂ ಮಾಹಿತಿ ನೀಡಿದ್ದಾರೆ. ತಮ್ಮ ಸಂಪರ್ಕಿತರಿಗೆ ಟೆಸ್ಟ್​ ಮಾಡಿಸಿಕೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್​ ಪಾಸಿಟಿವ್: ದೆಹಲಿ ಪ್ರವಾಸ ರದ್ದು
ಸಿಎಂ ಬಸವರಾಜ ಬೊಮ್ಮಾಯಿ
Edited By:

Updated on: Aug 06, 2022 | 9:45 AM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ (COVID-19)​ ಸೋಂಕು ದೃಢವಾಗಿದ್ದು, ಕೊವಿಡ್​ ದೃಢಪಟ್ಟ ಬಗ್ಗೆ ಟ್ವೀಟ್​ ಮಾಡಿ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಸಂಪರ್ಕಿತರಿಗೆ ಟೆಸ್ಟ್​ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದು, ಕೋವಿಡ್​ ಪಾಸಿಟಿವ್ ಹಿನ್ನೆಲೆ ಸಿಎಂ ದೆಹಲಿ ಪ್ರವಾಸ ರದ್ದು ಮಾಡಲಾಗಿದೆ. ಸಂಜೆ ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗಿಯಾಗಬೇಕಿತ್ತು. ನಾಳೆ ನೀತಿ ಆಯೋಗದ ಸಭೆಗೂ ಸಿಎಂ ಭಾಗಿಯಾಗಬೇಕಿತ್ತು. ಆದರೆ ಕೋವಿಡ್​ ಬಂದ ಹಿನ್ನೆಲೆ ರದ್ದು ಮಾಡಲಾಗಿದೆ. ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ.

ಭಾರತದಲ್ಲಿ 20,551 ಹೊಸ ಕೋವಿಡ್ ಪ್ರಕರಣ: 24 ಗಂಟೆಗಳಲ್ಲಿ 70 ಸಾವು:

ಭಾರತದಲ್ಲಿ ಶುಕ್ರವಾರ ಒಟ್ಟು 20,551 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ 4,41,07,588ಕ್ಕೆ ತಲುಪಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಶುಕ್ರವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 1,35,364ಕ್ಕೆ ಇಳಿದಿದೆ. 70 ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 5,26,600ಕ್ಕೆ ಏರಿಕೆ ಆಗಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.31 ಪ್ರತಿಶತವನ್ನು ಒಳಗೊಂಡಿವೆ. ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.50 ಪ್ರತಿಶತದಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:30 am, Sat, 6 August 22